ಬಜೆಟ್‌ 23-24 | ಹೆಬ್ಬಾಳ-ಸರ್ಜಾಪುರ ನಡುವೆ ಮೆಟ್ರೋ 3ನೇ ಹಂತದ ಯೋಜನೆ, ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ

Date:

ಮೆಟ್ರೋ 3ನೇ ಹಂತದಡಿ 15,000 ಕೋಟಿ ರೂ. ಅಂದಾಜು ವೆಚ್ಚದ, ಹೆಬ್ಬಾಳದಿಂದ ಸರ್ಜಾಪುರದವರೆಗಿನ 37 ಕಿ.ಮೀ. ಉದ್ದದ ಯೋಜನೆ ಅನುಮೋದನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಕುರಿತು ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾಗಿದೆ.

2024ರ ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರದವರೆಗೆ, ಕೆಂಗೇರಿಯಿಂದ ಚಲ್ಲಘಟ್ಟದವರೆಗೆ, ನಾಗಸಂದ್ರದಿಂದ ಮಾದಾವರದವರೆಗೆ, ಆರ್‌.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಒಟ್ಟು 27 ಕಿ.ಮೀ.ಗಳ ನೂತನ ಮಾರ್ಗಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಮೂರು ವರ್ಷಗಳಲ್ಲಿ ಈಗಿರುವ 7೦ ಕಿ.ಮೀ.ನ ಸಂಪರ್ಕಜಾಲವನ್ನು 176 ಕಿ.ಮೀ.ಗೆ ವಿಸ್ತರಿಸುವ ಮೂಲಕ ಮೆಟ್ರೊ ಕಾರ್ಯಾಚರಣೆಯ ಸಂಪರ್ಕ ಜಾಲವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗುವುದು. ಪ್ರಗತಿಯಲ್ಲಿರುವ ಏರ್‌ಪೋರ್ಟ್‌ ಲೈನ್‌ ಕಾಮಗಾರಿಯನ್ನು ಪೂರ್ಣಗೊಳಿಸಿ 2026 ರಲ್ಲಿ ಕಾರ್ಯಾರಂಭ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಮೆಟ್ರೋ 3ನೇ ಹಂತದಡಿ ಅಂದಾಜು 16,328 ಕೋಟಿ ರೂ. ವೆಚ್ಚದಲ್ಲಿ ಕೆಂಪಾಪುರದಿಂದ ಜೆ.ಪಿ. ನಗರ 4ನೇ ಹಂತದವರೆಗಿನ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಪಶ್ಚಿಮ ಓ.ಆರ್‌.ಆರ್‌. ಮಾರ್ಗವನ್ನು ಒಳಗೊಳ್ಳುವಂತಹ 45 ಕಿ.ಮೀ. ಉದ್ದದ ಮಾರ್ಗದ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗಿದೆ. 15,000 ಕೋಟಿ ರೂ. ಅಂದಾಜು ವೆಚ್ಚದ, ಹೆಬ್ಬಾಳದಿಂದ ಸರ್ಜಾಪುರದವರೆಗಿನ 37 ಕಿ.ಮೀ. ಉದ್ದದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಾಭಿವೃದ್ಧಿಗೆ ಬಜೆಟ್‌ ಕೊಡುಗೆ

  • ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಮೇಲ್ದರ್ಜೆಗೇರಿಸಲು
    1,411 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸ್ವಂತ ಸಂಪನ್ಮೂಲದಿಂದ ಅನುಷ್ಠಾನಗೊಳಿಸಲು ಅನುಮೋದನೆ. ಮಾರ್ಚ್‌ 2026 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ.
  • ಸರ್‌ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲು ಪ್ರಯಾಣಿಕರಿಗೆ ಅನಾನುಕೂಲ ಹಾಗೂ ಸಂಚಾರ ದಟ್ಟಣೆ ಸಮಸ್ಯೆಯ ನಿವಾರಣೆಗಾಗಿ 263 ಕೋಟಿ ರೂ. ವೆಚ್ಚದಲ್ಲಿ ಒಂದು ನೂತನ ಮೇಲ್ಸೇತುವೆ ನಿರ್ಮಾಣ.
  • ವೈಟ್‌ ಟಾಪಿಂಗ್‌ ಯೋಜನೆ ಪುನರಾರಂಭಿಸಿ 2023-24ನೇ ಸಾಲಿನಲ್ಲಿ 800 ಕೋಟಿ ರೂ. ವೆಚ್ಚದಲ್ಲಿ 100 ಕಿ.ಮೀ. ಉದ್ದದ ಮುಖ್ಯ ರಸ್ತೆಗಳನ್ನು ವೈಟ್‌ ಟಾಪ್ ರಸ್ತೆಗಳಾಗಿ‌ ಅಭಿವೃದ್ಧಿಪಡಿಸಲಾಗುವುದು.
  • ಬೆಂಗಳೂರು ನಗರದಲ್ಲಿರುವ ಹೆಚ್ಚಿನ ಸಂಚಾರ ದಟ್ಟಣೆಯನ್ನು ಹೊಂದಿರುವ 12 ಪ್ರಮುಖ ರಸ್ತೆಗಳನ್ನು ಹೈ ಡೆನ್ಸಿಟಿ ಕಾರಿಡಾರ್‌ಗಳೆಂದು ಗುರುತಿಸಲಾಗಿದೆ. 2023-24ನೇ ಸಾಲಿನಲ್ಲಿ 83 ಕಿ.ಮೀ. ಉದ್ದದ ರಸ್ತೆಗಳನ್ನು 273 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
  • ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಪ್ರಕ್ರಿಯೆಯು ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಎಲ್ಲ ಕಾನೂನಾತ್ಮಕ ಸಮಸ್ಯೆ ಬಗೆಹರಿಸಿಕೊಂಡು ತ್ವರಿತವಾಗಿ ಯೋಜನೆ ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
  • ಬೆಂಗಳೂರಿನಲ್ಲಿ ಮಳೆನೀರು ಸರಾಗವಾಗಿ ಹರಿಯದಿರಲು ರಾಜಕಾಲುವೆಗಳ ಒತ್ತುವರಿ ಪ್ರಮುಖ ಕಾರಣವಾಗಿದೆ. ಈ ಸಮಸ್ಯೆಯನ್ನು ನಿವಾರಿಸಲು ಕಂದಾಯ ಇಲಾಖೆ ಗುರುತಿಸಿರುವ ಒತ್ತುವರಿ ಆದ್ಯತೆ ಮೇಲೆ ತೆರವುಗೊಳಿಸಲಾಗುವುದು.
  • ಬೆಂಗಳೂರು ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ. ಬೆಂಗಳೂರು ನಗರದ 97 ಲಕ್ಷ ಟನ್‌ನಷ್ಟು ಹಳೆ ತ್ಯಾಜ್ಯವನ್ನು ಜೈವಿಕ ಗಣಿಗಾರಿಕೆ ಮತ್ತು ಜೈವಿಕ ಪರಿಹಾರದ ಮೂಲಕ ಸಂಸ್ಕರಿಸಲಾಗುವುದು.
  • ನದಿಗಳು ಮತ್ತು ಕೆರೆಗಳಿಗೆ ಹರಿಯುವ ಮಾಲಿನ್ಯ ನಿಯಂತ್ರಿಸಲು 1,250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಮತ್ತು ಇತರೇ ಪಟ್ಟಣಗಳಲ್ಲಿ 2,150 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 3,400 ಕೋಟಿ ರೂ.ಗಳ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
  • ತ್ಯಾಜ್ಯ ಸಂಗ್ರಹಣೆ ಮತ್ತು ಸಂಸ್ಕರಣೆಯನ್ನು ಹೆಚ್ಚು ವೈಜ್ಞಾನಿಕವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ವಿಲೇವಾರಿ ಮಾಡಲು ಬೆಂಗಳೂರು ಘನತಾಜ್ಯ ನಿರ್ವಹಣಾ ಸಂಸ್ಥೆಯ ಪರಿಣಾಮಕಾರಿ ಕಾರ್ಯಾಚರಣೆಗಾಗಿ 100 ಕೋಟಿ ರೂ. ಒದಗಿಸಲಾಗುವುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...