ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ, ಮುಖ್ಯಮಂತ್ರಿ ಸೇರಿ ಗಣ್ಯರ ಸಂತಾಪ

Date:

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಗಂಭೀರ ಆರೋಪ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆದು ರಾಜ್ಯದಾದ್ಯಂತ ದೊಡ್ಡ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ (84) ಗುರುವಾರ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಇತ್ತೀಚೆಗಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದರು. ಇಂದು (ಸೆ.19) ಬೆಳಗ್ಗೆ 10 ಗಂಟೆಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಡಿ. ಕೆಂಪಣ್ಣ ಅವರು ಹಿಂದಿನ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪ ರಾಜ್ಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು. ಕೆಂಪಣ್ಣ ಅವರ ಆರೋಪವನ್ನು ಕಾಂಗ್ರೆಸ್‌ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು, ಬಿಜೆಪಿ ವಿರುದ್ಧ‘ಪೇ ಸಿಎಂ’ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ಸಿದ್ದರಾಮಯ್ಯ ಸಂತಾಪ

“ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು” ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ ತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

“ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರ ನಿಧನದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಹೊರತಂದು ನಿರ್ಭೀತವಾಗಿ ಹೋರಾಡಿದ ಅವರ ನೇರ, ನಿಸ್ಪಕ್ಷಪಾತ ನಡೆ ಶ್ಲಾಘನೀಯ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...