ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯ ಪ್ರಜ್ಞೆಯಿಂದ ರಾಜ್ಯ ಆರ್ಥಿಕ ಪ್ರಗತಿ ಸಾಧಿಸಿದೆ: ಸಿಎಂ

Date:

ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿದ ಮುಖ್ಯಮಂತ್ರಿ, 2023ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಇದನ್ನು ಓದಿದ್ದೀರಾ? ಸಿದ್ದರಾಮಯ್ಯರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ ಆರೋಪ: ‘ಶಾಸಕ ಹರೀಶ್‌ ಪೂಂಜಾ ಹೇಳಿಕೆಯ ವಿಡಿಯೋ ಒದಗಿಸಿ’ ಎಂದ ಹೈಕೋರ್ಟ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“5.5 ಲಕ್ಷ ಸರ್ಕಾರಿ ನೌಕರರಿಗೆ ಇವತ್ತಿನ ಪ್ರಶಸ್ತಿ ಪುರಸ್ಕೃತರು ಸ್ಫೂರ್ತಿಯಾಗಬೇಕು. ಪ್ರಶಸ್ತಿ ಪುರಸ್ಕೃತರ ಜವಾಬ್ದಾರಿ ಈಗ ಹೆಚ್ಚಾಗಿದೆ. ಹೀಗಾಗಿ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಪ್ರಜ್ಞೆ ಹೆಚ್ಚಿಸಿಕೊಂಡು ಜನರ ಸೇವೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು” ಎಂದು ಹೇಳಿದರು.

“ಸಮಾಜದ ನಾಲ್ಕೂ ಅಂಗಗಳಾದ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗದ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ. ಸಂವಿಧಾನದ ಆಶಯದಂತೆ ಜಾತ್ಯತೀತ ಸಮಾಜ ನಿರ್ಮಿಸಿ, ಜಾತಿ ಅಸಮಾನತೆಯನ್ನು ಅಳಿಸುವುದಾಗಿದೆ” ಎಂದರು.

“ಬುದ್ದ, ಬಸವ, ಗಾಂಧಿ ಹೇಳಿದ್ದನ್ನೇ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಇವರೆಲ್ಲರ ಆಶಯದಂತೆ ನಾವು ಸಂವಿಧಾನ ಪಾಲಿಸಿ ಕರ್ತವ್ಯ ನಿರ್ವಹಿಸಬೇಕು” ಎಂದು ತಿಳಿಸಿದರು.

“ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದ ಹೊರತು ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ. ಹೀಗಾಗಿ ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು” ಎಂದು ಕರೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...