ಫೆ.8 ರಂದು ಮುಖ್ಯಮಂತ್ರಿಯವರಿಂದ ರಾಜ್ಯಮಟ್ಟದ ಜನಸ್ಪಂದನ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಅವರು ಇಂದು ಪೂರ್ವಸಿದ್ಧತಾ ಸಭೆ ನಡೆಸಿ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು ಅಗತ್ಯ ಸಲಹೆ‌ ಮತ್ತು‌ ಸೂಚನೆಗಳನ್ನು ನೀಡಿದ್ದಾರೆ.‌

ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನಸ್ಪಂದನ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು. ಮುಖ್ಯಮಂತ್ರಿಯವರು ನಡೆಸುತ್ತಿರುವ ಎರಡನೇ ಜನಸ್ಪಂದನ ಕಾರ್ಯಕ್ರಮ ಇದಾಗಿದ್ದು, ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಜರಿದ್ದು, ವಿಶೇಷ ಆಸಕ್ತಿ ವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ವಿಶೇಷಚೇತನರು, ಹಿರಿಯನಾಗರಿಕರಿಗೆ ವಿಶೇಷ ವ್ಯವಸ್ಥೆಗಳನ್ನು ಮಾಡುವಂತೆ ಸೂಚಿಸಿದರು. ಸ್ವಚ್ಛತೆ, ಕುಡಿಯುವ ನೀರು, ಲಘು ಉಪಾಹಾರ, ಊಟದ ವ್ಯವಸ್ಥೆಗಳನ್ನು ಮಾಡುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಳೆದ ಬಾರಿಯ ಜನಸ್ಪಂದನದಲ್ಲಿ ಸ್ವೀಕರಿಸಿದ ಅರ್ಜಿಗಳ ತ್ವರಿತ ವಿಲೇವಾರಿ ಮಾಡುವ ಬಗ್ಗೆ ಎಲ್ಲ ಇಲಾಖೆಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು ಕೆಡಿಪಿ ಸಭೆಯಲ್ಲಿಯೂ ಜನಸ್ಪಂದನ ಅರ್ಜಿ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಜನಸ್ಪಂದನಕ್ಕೆ ಆಗಮಿಸುವ ಜನರ ಅನುಕೂಲಕ್ಕಾಗಿ ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದರು. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಿ, ಅದಕ್ಕೆ ಅಗತ್ಯವಿರುವ ಎಲ್ಲ ಉಪಕರಣಗಳನ್ನೂ ಒದಗಿಸಲು ಹಾಗೂ ಸಿಬ್ಬಂದಿಯನ್ನೂ ನಿಯೋಜಿಸಲು ಇ-ಆಡಳಿತ ಇಲಾಖೆಗೆ ಸೂಚಿಸಿದರು.

ಮನವಿದಾರರ ದೂರುಗಳನ್ನು ಪರಿಶೀಲಿಸಿ, ನಿಗದಿತ ಕೌಂಟರುಗಳಿಗೆ ತೆರಳಲು ಸೂಕ್ತ ಮಾರ್ಗದರ್ಶನ ನೀಡಲು ಪ್ರವೇಶ ದ್ವಾರದಲ್ಲಿಯೇ ಅಧಿಕಾರಿ, ಸಿಬ್ಬಂದಿಗಳ ಫೆಸಿಲಿಟೇಷನ್‌ ತಂಡವನ್ನು ನಿಯೋಜಿಸುವಂತೆ ನಿರ್ದೇಶನ ನೀಡಿದರು. ಅಂದಿನ ದಿನ ವಿಧಾನಸೌಧದಲ್ಲಿ ಸೂಕ್ತ ಬಂದೋಬಸ್ತ್‌ ವ್ಯವಸ್ಥೆ ಮಾಡಲು ಹಾಗೂ ಸಂಚಾರ ನಿರ್ವಹಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್‌ ಇಲಾಖೆಗೆ ತಿಳಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಇ-ಆಡಳಿತ ಇಲಾಖೆ ಕಾರ್ಯದರ್ಶಿ ಉಜ್ವಲ್‌ ಕುಮಾರ್‌ ಘೋಷ್‌, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ವಿವಿಧ ಇಲಾಖೆಗಳ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...