‌ಐವನ್ ಡಿಸೋಜಾ ಮನೆಯ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

Date:

ಪ್ರತಿಭಟನೆ ವೇಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಲಹೋಟ್‌ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮಂಗಳೂರಿನ ವೆಲೆನ್ಸಿಯಾದ ಮನೆಯ ಮೇಲೆ ಬುಧವಾರ ರಾತ್ರಿ ಕಲ್ಲು ತೂರಾಟ ನಡೆದಿದೆ.

ರಾತ್ರಿ 11 ಗಂಟೆ ಸುಮಾರಿಗೆ ಹೆಲ್ಮೆಟ್ ಧರಿಸಿಕೊಂಡು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆಯ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮತ್ತೆ ಸ್ವಲ್ಪ ಸಮಯದ ನಂತರ ಮರಳಿ ಬಂದು ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಐವನ್ ಡಿಸೋಜಾ ಅವರ ಮನೆಯ ಕಿಟಕಿ ಗಾಜುಗಳು ಒಡೆದಿವೆ.

ಐವನ್ ಡಿಸೋಜಾ ಅವರ ಪತ್ನಿ ಕವಿತಾ ಡಿಸೋಜಾ ಅವರು ಮನೆ ಬಳಿ ಕಾರು ಪಾರ್ಕ್ ಮಾಡಿ ಒಳಗೆ ಹೋದ ಐದು ನಿಮಿಷದಲ್ಲೇ ಈ ಕಲ್ಲು ತೂರಾಟ ನಡೆದಿದೆ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ. ಸದ್ಯ ಐವನ್ ಡಿಸೋಜಾ ಅವರ ಮನೆಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಸಿಸಿ ಕ್ಯಾಮೆರಾದಲ್ಲಿ ಆರೋಪಿಗಳ ಚಹರೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿಗೆ ಹೋಗಿದ್ದ ಐವನ್ ಡಿಸೋಜಾ

ಕಲ್ಲು ತೂರಾಟ ನಡೆಯುವ ವೇಳೆ ಐವನ್ ಡಿಸೋಜಾ ಅವರು ಮನೆಯಲ್ಲಿರಲಿಲ್ಲ. ಅವರು ಬೆಂಗಳೂರಿನಲ್ಲಿ ಪಕ್ಷದ ಮೀಟಿಂಗ್‌ಗೆ ಹೋಗಿದ್ದರು. ಮನೆಯಲ್ಲಿ ಇಬ್ಬರು ಪುತ್ರಿಯರು, ಕವಿತಾ ಅವರ ಸಹೋದರ ಮಾತ್ರ ಇದ್ದರು. ಎರಡನೇ ಬಾರಿ ಕಲ್ಲು ತೂರಾಟ ನಡೆಸುವಾಗ ಐವನ್ ಡಿಸೋಜಾ ಪುತ್ರಿ ಮಹಡಿ ಮೇಲಿಂದ ನೋಡಿದ್ದಾರೆ.

ಐವನ್ ಡಿಸೋಜಾ ಏನು ಹೇಳಿಕೆ ನೀಡಿದ್ದರು?

ಮುಡಾ ಪ್ರಕರಣಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ನಡೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು. ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ, “ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಷ್ಟ್ರಪತಿಗಳು ವಾಪಸ್ ಕರೆಸಿಕೊಳ್ಳದಿದ್ದರೆ ಬಾಂಗ್ಲಾದೇಶ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿ ರಾಜ್ಯಪಾಲರ ಕಚೇರಿಗೂ ಬರಲಿದೆ” ಎಂಬ ಅರ್ಥದಲ್ಲಿ ಐವನ್ ಡಿಸೋಜ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿ, ರಾಜ್ಯ ಪೋಲಿಸ್ ಇಲಾಖೆಯ ಮಹಾನಿರ್ದೇಶಕರಿಗೂ ದೂರು ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...