ರಾಮಮಂದಿರ ಉದ್ಘಾಟನೆ ದಿನ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ: ಸಚಿವ ಪರಮೇಶ್ವರ್

Date:

ಜನವರಿ 22ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು‌.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, “ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

“ಅಂದು ಪೂಜೆ ಪುರಸ್ಕಾರಗಳು ನಡೆಯಲಿವೆ. ಪೂಜೆಗೆ ಭಂಗ ಮಾಡಲ್ಲ. ಆದರೆ ಕಾನೂನು ವಿರೋಧಿ ಚಟುವಟಿಕೆ ನಡೆಯದಂತೆ ನೋಡಿಕೊಳ್ಳಲು ಸೂಚನೆ ಕೊಟ್ಟಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಳಮೀಸಲಾತಿ ವಿಚಾರವಾಗಿ ಮಾತನಾಡಿ, ‌ಈ ಹಿಂದೆ ಚಿತ್ರದುರ್ಗದಲ್ಲಿ ಒಳಮೀಸಲಾತಿಯನ್ನು ನೀಡುವ ನಿರ್ಣಯ ಮಾಡಿದ್ದೆವು. ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿ ಮಂಡನೆ ಮಾಡುವ ಭರವಸೆ ಕೊಟ್ಟಿದ್ದೆವು” ಎಂದರು.

“ಬಿಜೆಪಿ ಸರ್ಕಾರದಲ್ಲಿ ಅಂದಿನ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ‌ ರಚಿಸಿತ್ತು. ಅದರ ಪ್ರಕಾರ ಎಸ್ ಸಿ ಸಮುದಾಯದ 101 ಜಾತಿಗಳನ್ನು ನಾಲ್ಕು ಭಾಗ ಮಾಡಿ ಒಳಮೀಸಲು ವರ್ಗೀಕರಣ ಮಾಡಿದರು. ಅವರು ಹಂಚಿಕೆ ಮಾಡಿದ್ದ ಒಳಮೀಸಲಾತಿ ಅವೈಜ್ಞಾನಿಕ ಅಂತ ಎಂಬುದು ಅವರಿಗೂ ಗೊತ್ತಿತ್ತು” ಎಂದರು‌.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

“ಕಾನೂನು ಅಭಿಪ್ರಾಯ ಪಡೆದು ಕೇಂದ್ರಕ್ಕೆ ಸಂವಿಧಾನ ತಿದ್ದುಪಡಿ ಮಾಡಿ ಅಂತ ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನ ಮಾಡಲಾಗಿದೆ. ನಾವು ಜವಾಬ್ದಾರಿಯಿಂದ ನುಣುಚಿಕೊಂಡಿಲ್ಲ. ಕೇಂದ್ರ ಸರ್ಕಾರ ಸಂವಿಧಾನ ತಿದ್ದುಪಡಿ ಮಾಡಿದರೆ ಒಳ‌ಮೀಸಲಾತಿ ಕೊಡಬಹುದು” ಎಂದು ಹೇಳಿದರು.

“ಒಳ‌ಮೀಸಲಾತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ವಿಚಾರವಾಗಿ, ಬಿಜೆಪಿಯವರು ಏನೇ ವಿಶ್ಲೇಷಣೆ ಮಾಡಲಿ. ಆದರೆ ನಮ್ಮ ಕ್ರಮ ಸರಿಯಾಗಿದೆ. ಮೀಸಲಾತಿ ಹಾಗೂ ಒಳಮೀಸಲಾತಿ ಎಲ್ಲವೂ ಸಂವಿಧಾನದ ಚೌಕಟ್ಟಿನಲ್ಲೇ ಆಗಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...