ದಿಗ್ಗಜರ ನಾಮಪತ್ರ ಸಲ್ಲಿಕೆ | ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ

Date:

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಗುರುವಾರ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ, ಮೈಸೂರು ಕ್ಷೇತ್ರದ ಅಭ್ಯರ್ಥಿ ಯದುವೀರ್‌ ಒಡೆಯರ್‌ ಜೊತೆಗಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಎಚ್‌ ಡಿ ಕುಮಾರಸ್ವಾಮಿ ಅವರು ಮಂಡ್ಯ ನಗರದ ಅರ್ಕೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ವೇಳೆ ಪಕ್ಷದ ನೂರಾರು ಕಾರ್ಯಕರ್ತರು ಕುಮಾರಸ್ವಾಮಿ ಜೊತೆಗಿದ್ದರು. ನಂತರ ಅಂಬೇಡ್ಕರ್, ಕಾವೇರಿ, ವಿಶ್ವೇಶ್ವರಯ್ಯ ಪ್ರತಿಮೆಗೆ ಕುಮಾರಸ್ವಾಮಿ ಮಾಲಾರ್ಪಣೆ ಮಾಡಿದರು.

ಮಂಡ್ಯ ವಿವಿ ಆವರಣದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಸಮಾವೇಶ ನಡೆಯಲಿದೆ. ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ, ಮೈಸೂರು ಅಭ್ಯರ್ಥಿ ಯದುವೀರ್, ನಿಖಿಲ್ ಕುಮಾರಸ್ವಾಮಿ, ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಸ್ಥಳೀಯ ಮುಖಂಡರು ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸದೆ ಬಿಜೆಪಿ ಸೇರುವ ಘೊಷಣೆ ನಿನ್ನೆ ಮಾಡಿದ್ದು ಕುಮಾರಸ್ವಾಮಿ ಅವರನ್ನು ನಿರಾಳವಾಗಿಸಿದೆ. ಆದಾಗ್ಯೂ ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿಯವರ ಎದುರಾಳಿ ಕಾಂಗ್ರೆಸ್ ಪಕ್ಷದ ಸ್ಟಾರ್ ಚಂದ್ರು ಆಗಿದ್ದಾರೆ. ಚಂದ್ರು ಒಬ್ಬ ಉದ್ಯಮಿಯೂ ಆಗಿದ್ದು ರಾಜಕಾರಣಕ್ಕೆ ಹೊಸಬರು. ಡಿಸಿಎಂ ಡಿ ಕೆ ಶಿವಕುಮಾರ್‌ ಮತ್ತು ಟೀಮ್‌ ಹೇಗಾದ್ರೂ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ರೋಚಕ ತಂತ್ರಗಳನ್ನು ಹೆಣೆಯುತ್ತಿದೆ.

ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯ ಡಾ.ಸಿ ಎನ್ ಮಂಜುನಾಥ್ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಡಿ ಕೆ ಸುರೇಶ್‌ ನಾಮಪತ್ರ ಸಲ್ಲಿಸಿದರು. ಅವರು ತಮ್ಮ ನಾಮಪತ್ರ ಸಲ್ಲಿಸುವ ಪರಸ್ಪರ ಎದುರಾದರು.

ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸುರೇಶ್, “ಇವತ್ತು ಒಳ್ಳೇ ಗಳಿಗೆ ಮತ್ತು ಶುಭ ಮುಹೂರ್ತವಾಗಿದ್ದ ಕಾರಣ ನಾಮಪತ್ರ ಸಲ್ಲಿಸಿದ್ದೇನೆ. ನಾಮಪತ್ರ ಸಲ್ಲಿಸುವಾಗ ಮಂಜುನಾಥ್ ಅವರು ಭೇಟಿಯಾಗಿದ್ದರು. ಅವರ ಆರೋಗ್ಯ ವಿಚಾರಿಸಿ ಶುಭ ಹಾರೈಸಿದೆ” ಎಂದರು.

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ಜೆಡಿಎಸ್​ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಮೊಮ್ಮಗ ಪ್ರಜ್ವಲ್ ನಾಮಪತ್ರ ಸಲ್ಲಿಕೆ ವೇಳೆ ದೇವೇಗೌಡರು ಹಾಜರಿದ್ದರು. ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಶಾಸಕ ಹೆಚ್ ಡಿ ರೇವಣ್ಣ, ಹಾಲಿ ಸಂಸದ ಡಿ ವಿ ಸದಾನಂದ ಗೌಡ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...