ಸುಹಾಸ್ ಹತ್ಯೆ | ಎಸ್‍ಡಿಪಿಐ, ಪಿಎಫ್‍ಐ ಮೇಲೆ ಸರ್ಕಾರದ ಪ್ರೀತಿ, ದುಷ್ಟರಿಗೆ ಆನೆ ಬಲ: ವಿಜಯೇಂದ್ರ, ಅಶೋಕ್ ಟೀಕೆ

Date:

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎಸ್‍ಡಿಪಿಐ, ಪಿಎಫ್‍ಐ ಮೇಲಿನ ಪ್ರೀತಿಯು ಸುಹಾಸ್ ಹತ್ಯೆಯಂಥ ದುಷ್ಕೃತ್ಯ, ಹಿಂದೂಗಳ ಬೆದರಿಕೆ ಮತ್ತು ಹತ್ಯೆಗೆ ಶಕ್ತಿ ಕೊಟ್ಟಿದೆ. ಇದರಿಂದ ದುಷ್ಟರಿಗೆ ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನಿನ್ನೆ ರಾತ್ರಿ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಅವರ ಬರ್ಬರ ಹತ್ಯೆ ನಡೆದಿದೆ. ಇದು ಪೂರ್ವನಿಯೋಜಿತ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ವಿವರಿಸಿದರು.

“ಕಾಶ್ಮೀರದಲ್ಲಿ ಹಿಂದೂಗಳ ಮಾರಣಹೋಮ ಆಗಿದೆ. ಇದನ್ನು ದೇಶ- ರಾಜ್ಯದ ಜನರು ಮರೆತಿಲ್ಲ. ಇದರ ನಡುವೆ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ್ರೋಹಿಗಳು, ಕೊಲೆಗಡುಕರಿಗೆ ಏನು ಮಾಡಿದರೂ ನಡೆಯುತ್ತದೆ ಎಂಬ ಆತ್ಮವಿಶ್ವಾಸ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಪದೇ ಪದೆ ಇಂಥ ಕೃತ್ಯ ನಡೆಯುತ್ತಿದೆ. ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದೂ ಸಂಘಟನೆಗಳನ್ನು ಬೆದರಿಸುವ ಕೆಲಸ ನಡೆದಿದೆ. ಕರ್ನಾಟಕದಲ್ಲಿ ಹಿಂದೂ ಮುಖಂಡರ ಕಗ್ಗೊಲೆ ನಿರಂತರವಾಗಿ ನಡೆಯುತ್ತಿದೆ ಎಂದ ಅವರು, ಕರ್ನಾಟಕ ರಾಜ್ಯದಲ್ಲಿ ಗೃಹ ಸಚಿವರು ಬದುಕಿಲ್ಲವೇ? ಗುಪ್ತಚರ ಇಲಾಖೆ ಸತ್ತು ಹೋಗಿದೆಯೇ? ರಾಜ್ಯದ ಕಾನೂನು- ಸುವ್ಯವಸ್ಥೆ ಏನಾಗಿದೆ” ಎಂದು ಪ್ರಶ್ನಿಸಿದರು.

ಪಾಕಿಸ್ತಾನ್ ಜಿಂದಾಬಾದ್‌ ಎಂದು ಘೋಷಣೆ ಕೂಗಿದಾಗಲೇ ಕಠಿಣ ಕ್ರಮ‌ ಆಗಬೇಕಿತ್ತು: ಆರ್‌ ಅಶೋಕ್

ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿದಾಗಲೇ ಕಾಂಗ್ರೆಸ್‌ ಸರ್ಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಮೂಲಕ ಮಂಗಳೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮಂಗಳೂರು ಬಂದ್‌ ಮಾಡಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ 2013 ರಲ್ಲಿ ಅಧಿಕಾರದಲ್ಲಿದ್ದಾಗ 36 ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು. ಪಾಪ್ಯುಲರ್‌ ಫ್ರಂಟ್‌ ಮೊದಲಾದ ಸಂಘಟನೆಗಳು ಇಂತಹ ಕೃತ್ಯಗಳನ್ನು ಮಾಡಿವೆ. ಪಾಕಿಸ್ತಾನ ಜಿಂದಾಬಾದ್‌ ಎಂದಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ಇಂತಹ ಕೃತ್ಯ ನಡೆಯುತ್ತಿರಲಿಲ್ಲ” ಎಂದರು.

“ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಕೂಡಲೇ ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಲಾಗುತ್ತದೆ. ಪಾಕಿಸ್ತಾನಕ್ಕೆ ಅಪಮಾನ ಮಾಡಲು ಧ್ವಜವನ್ನು ರಸ್ತೆಗೆ ಅಂಟಿಸಿದರೆ ಅದನ್ನು ಮಹಿಳೆಯರು ಎತ್ತಿಕೊಂಡು ಹೋಗುತ್ತಾರೆ. ಅಮಾಯಕ ಹಿಂದೂ ಕಾರ್ಯಕರ್ತರ ಬಳಿ ಯಾವುದೇ ಆಯುಧ ಇಲ್ಲವೆಂದು ತಿಳಿದು ದಾಳಿ ಮಾಡಲಾಗುತ್ತಿದೆ” ಎಂದು ಹೇಳಿದರು.

“ಸುಹಾಸ್‌ ಎಲ್ಲೆಲ್ಲಿ ಓಡಾಡುತ್ತಾನೆ, ಆತನ ಬಳಿ ಆಯುಧ ಇಲ್ಲವೆಂದು ತಿಳಿದಿದ್ದು ಹೇಗೆ? ಈ ವಿಚಾರದಲ್ಲಿ ಪೊಲೀಸ್‌ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿರುವ ಅನುಮಾನವಿದೆ. ಇಂತಹ ಘಟನೆ ನಡೆದಾಗ ಸಿಎಂ ಸಿದ್ದರಾಮಯ್ಯ ಸಬೂಬು ಹೇಳುವ ನಡೆ ತೋರುತ್ತಾರೆ. ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಪಾಕಿಸ್ತಾನ ಜಿಂದಾಬಾದ್‌ ಎಂದರೂ ಏನೂ ಅನ್ನಿಸುವುದಿಲ್ಲ. ಅವರದ್ದು ಅಂತಹ ಎಮ್ಮೆ ಚರ್ಮ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...