ಟರ್ಕಿ ಸಂಸತ್‌ನ ಬಳಿ ಆತ್ಮಹತ್ಯಾ ಬಾಂಬ್ ದಾಳಿ: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಾಯ

Date:

ಟರ್ಕಿ ದೇಶದ ಸಂಸತ್‌ ‘ಅಂಕಾರ’ ಬಳಿ ಇಂದು ಬೆಳಗ್ಗೆ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.

“ಟರ್ಕಿಯ ರಾಜಧಾನಿಯಲ್ಲಿರುವ ಸಚಿವಾಲಯದ ಕಟ್ಟಡದ ಮುಂದೆ ಇಬ್ಬರು ಆತ್ಮಹತ್ಯಾ ಬಾಂಬರ್‌ಗಳ ಪೈಕಿ ಒಬ್ಬ ಸ್ಫೋಟಕ ಸಾಧನವನ್ನು ಸ್ಫೋಟಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ” ಎಂದು ಆಂತರಿಕ ಸಚಿವ ಅಲಿ ಯರ್ಲಿಕಾಯಾ ಮಾಹಿತಿ ನೀಡಿದ್ದಾರೆ.

ಸ್ಫೋಟವು ಟರ್ಕಿಯ ಕಾಲಮಾನ ಬೆಳಗ್ಗೆ 9.30ಕ್ಕೆ ಸಂಭವಿಸಿದೆ ಎಂದು ಟರ್ಕಿಯ ಮಾಧ್ಯಮಗಳು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಬಳಿಕ ಸಂಸತ್ ಕಟ್ಟಡ ಮತ್ತು ಸನಿಹದಲ್ಲಿರುವ ಆಂತರಿಕ ಸಚಿವಾಲಯದ ಕಟ್ಟಡದ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಹೈ ಅಲರ್ಟ್‌ ಘೋಷಿಸಲಾಗಿದೆ. ಸ್ಫೋಟದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೇಸಿಗೆಯ ರಜೆಯ ಮುಗಿದ ಹಿನ್ನೆಲೆಯಲ್ಲಿ ಟರ್ಕಿಯ ಸಂಸತ್ತು ಇಂದು ಪುನರಾರಂಭವಾಗುತ್ತಿದ್ದು, ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಬ್ ಉರ್ದುಗಾನ್ ಸಹಿತ ಎಲ್ಲ ಸಂಸದರು ಮಧ್ಯಾಹ್ನ 2 ಗಂಟೆಗೆ ಸಂಸತ್ತಿಗೆ ಭೇಟಿ ನೀಡಲಿದ್ದ ನಡುವೆಯೇ ಈ ಸ್ಫೋಟ ನಡೆದಿದೆ.

ದಾಳಿಯ ಹಿಂದೆ ಯಾರಿರಬಹುದು ಎಂದು ಹೇಳಲು ಈಗ ಸಾಧ್ಯವಾಗುತ್ತಿಲ್ಲ ಎಂದು ಟಿರ್ಕಿಯ ಅಧಿಕಾರಿಗಳು ತಿಳಿಸಿದ್ದಾರೆ. ಟರ್ಕಿಯು ಐಸಿಸ್ ಭಯೋತ್ಪಾದಕ ಸಂಘಟನೆಯ ಸದಸ್ಯರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...