ಪಾಕ್ ಪರ ಘೋಷಣೆ ಆರೋಪ: ಮಾಧ್ಯಮಗಳ ವರದಿ ಆಧರಿಸಿ ಎಫ್​ಐಆರ್ ದಾಖಲಿಸಿಕೊಂಡ ಪೊಲೀಸರು!

Date:

ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಹಾಕಲಾಗಿದೆ ಎಂಬ ಆರೋಪದ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಮಾಧ್ಯಮಗಳು ವರದಿ ಮಾಡಿರುವ ಈ ಆರೋಪವನ್ನೇ ಬಿಜೆಪಿ ವಿವಾದವನ್ನಾಗಿಸಿದೆ. ಇದರ ಬೆನ್ನಲ್ಲೇ ವಿಧಾನಸೌಧ
ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಇನ್ನು ಬಿಜೆಪಿ ಸಹ ಸಹ ದೂರು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಅವರ ಬೆಂಬಲಿಗರು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್‌ ಅವರು ನಗರದ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ನಾಸೀರ್ ಹುಸೇನ್ ಅವರು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಹೇಳಿಕೆ ಕೊಡುತ್ತಿದ್ದ ಸಂದರ್ಭದಲ್ಲಿ ಅವರ ಬೆಂಬಲಿಗರು ‘ಪಾಕಿಸ್ತಾನ್ ಝಿಂದಾಬಾದ್’ ಎಂದು ಘೋಷಣೆ ಕೂಗಿದ್ದಾರೆ. ಈ ರೀತಿಯ ದೇಶದ್ರೋಹ ಘೋಷಣೆಗಳನ್ನು ಕಾಂಗ್ರೆಸ್ ಪಕ್ಷದ ಬೆಂಬಲಿಗರು ಕೂಗಿರುವುದು ಅಕ್ಷಮ್ಯ ಅಪರಾಧವಾಗಿದೆ. ಕೂಡಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಪೊಲೀಸರು ದಾಖಲಿಸಿಕೊಂಡ ಎಫ್‌ಐಆರ್ ಹೀಗಿದೆ:
ದಿನಾಂಕ: 27-02-2024ರಂದು ನಡೆದ ರಾಜ್ಯಸಭಾ ಚುನಾವಣೆ ನಂತರ ಗೆದ್ದ ವ್ಯಕ್ತಿ ಡಾ. ನಾಸೀರ್ ಹುಸೇನ್ ರವರ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಸಂಜೆ 6-00 ಗಂಟೆಯಿಂದ 6-30 ರ ಸಮಯದಲ್ಲಿ ಯಾರೋ ಒಬ್ಬ ವ್ಯಕ್ತಿ ವಿಧಾನಸೌಧದ ಪೂರ್ವ ದ್ವಾರದ ಬಳಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಎಂಬ ಸುದ್ದಿ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಬರುತ್ತಿದೆ. ಈ ಸಂಬಂಧವಾಗಿ ಲಭ್ಯವಿರುವ ವಿಡಿಯೋಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಿಜಕ್ಕೂ ಆಗಿದ್ದೇನು?

“ನಾಸಿರ್ ಸಾಬ್ ಜಿಂದಾಬಾದ್‌” ಎಂದು ಕೂಗಿರುವುದನ್ನು ತಿರುಚಿ “ಪಾಕಿಸ್ತಾನ್ ಜಿಂದಾಬಾದ್” ಎಂದು ಕೂಗಿರುವುದಾಗಿ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸಿದೆ.‌ ಇದನ್ನೇ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದೆ. ಮಾಧ್ಯಮಗಳ ಈ ಸುಳ್ಳು ಸುದ್ದಿಯ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಪೊಲೀಸರು ಅಪರಿಚಿತನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...