ಸಂಸತ್ ಭದ್ರತಾ ವೈಫಲ್ಯ | ಸಂಸದ ಪ್ರತಾಪ್ ಸಿಂಹ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

Date:

ಲೋಕಸಭೆಯಲ್ಲಿ ಇಂದು ನಡೆದ ಭದ್ರತಾ ವೈಫಲ್ಯ ಘಟನೆಗೆ ಸಂಬಂಧಿಸಿದಂತೆ ಸಂಸತ್‌ನ ಒಳಗೆ ಹೋಗಲು ಪಾಸ್ ಕೊಟ್ಟ ಕಾರಣಕ್ಕೆ ಇದೀಗ ಸಂಸದ ಪ್ರತಾಪ್ ಸಿಂಹ ಸಮಸ್ಯೆಯಲ್ಲಿ ಸಿಲುಕಿದ್ದಾರೆ.

ಈ ನಡುವೆ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಬಂಧಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿರುವ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.

ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿರುವ ಕಚೇರಿ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಾಪ್ ಸಿಂಹ ಪಾಸ್ ಕೊಟ್ಟಿರುವುದನ್ನು ಖಂಡಿಸಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಂಸದರ ಕಚೇರಿಯ ಕಾಂಪೌಡ್ ಗೋಡೆ ಏರಿ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ, ವಾಗ್ವಾದವೂ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್​, ಪ್ರತಾಪ್​​ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳು ಪ್ರತಾಪ್​​ ಸಿಂಹ ಅವರ ಆತ್ಮೀಯರು. ಸಂಸತ್‌ಗೆ ಇಂದು ಒಟ್ಟು ಆರು ಜನ ನುಗ್ಗಿದ್ದಾರೆ ಅಂತ ಮಾಹಿತಿ ಇದೆ. ಅವರೆಲ್ಲರೂ ಪ್ರತಾಪ್ ಸಿಂಹ ಜೊತೆಗೆ ಸಭೆ ನಡೆಸಿದ್ದಾರೆ. ಇದರ ಸಿಸಿಟಿವಿ ದೃಶ್ಯವನ್ನು ಪೊಲೀಸರು ಪತ್ತೆ ಹಚ್ಚಬೇಕು” ಎಂದು ಗಂಭೀರ ಆರೋಪ ಮಾಡಿದರು.

“ಒಂದು ವೇಳೆ ಘಟನೆಯಲ್ಲಿ ಭಾಗಿಯಾದವರ ಪೈಕಿ ಅಥವಾ ಪಾಸ್ ನೀಡಿದ್ದು ಮುಸ್ಲಿಂ ಸಂಸದನೇನಾದರೂ ಆಗಿದ್ದಿದ್ದರೆ ಬಿಜೆಪಿಯವರು ಈಗ ಇಡೀ ದೇಶಕ್ಕೆ ಬೆಂಕಿ ಹಚ್ಚುತ್ತಿದ್ದರು. ಆದ್ದರಿಂದ ಈ ಪ್ರಕರಣದಲ್ಲಿ ಪ್ರತಾಪ್ ಸಿಂಹ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...