ಸಿಎಎ ಅನುಷ್ಠಾನ ತಡೆಗಾಗಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಮ್ಮತಿ

Date:

ಪೌರತ್ವ ತಿದ್ದುಪಡಿ ಕಾಯಿದೆ-2019 (ಸಿಎಎ)ಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇವೆ. ಇಂತಹ ಸಂದರ್ಭದಲ್ಲಿ ಸಿಎಎಯ 2024ರ ನಿಯಮಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಮುಂದಾಗಿದೆ. ಕೇಂದ್ರದ ನಡೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ.

ಇತ್ತೀಚೆಗೆ, ಕೇಂದ್ರ ಸರ್ಕಾರವು ಸಿಎಎ ಜಾರಿಗೊಳಿಸಲು ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಅರ್ಜಿ ಸಲ್ಲಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದು, “ಸಿಎಎ ಅನುಷ್ಠಾನದಲ್ಲಿ ಹಲವು ಸಮಸ್ಯೆಗಳಿವೆ. ಹೀಗಾಗಿ, ಆ ಬಗ್ಗೆ ಆರಂಭಿಕ ವಿಚಾರಣೆಯ ಅಗತ್ಯವಿದೆ” ಎಂದು ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ಅರ್ಜಿಯ ವಿಚಾರಣೆಗೆ ಒಪ್ಪಿಕೊಂಡಿರುವ ಪೀಠವು, “ನಾವು ಇದನ್ನು ಮಂಗಳವಾರ ಆಲಿಸುತ್ತೇವೆ. 190 ಪ್ಲಸ್ ಅರ್ಜಿಗಳಿವೆ. ಅವೆಲ್ಲವನ್ನೂ ಆಲಿಸಲಾಗುವುದು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “237 ಅರ್ಜಿಗಳಿದ್ದು, ಬಾಕಿ ಉಳಿದಿರುವ ಅರ್ಜಿಗಳಲ್ಲಿ ನಿಯಮಗಳ ಅನುಷ್ಠಾನದ ವಿರುದ್ಧ ನಾಲ್ಕು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಲಾಗಿದೆ” ಎಂದು ಹೇಳಿದರು.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ನೀಡುವುದಾಗಿ ಕೇಂದ್ರ ಸರ್ಕಾರವು ಸಿಎಎಯಲ್ಲಿ ಹೇಳಿದೆ. ಆದರೆ, ಕಾಯ್ದೆಯಿಂದ ಮುಸ್ಲಿಮರು, ಶ್ರೀಲಂಕನ್ ತಮಿಳರನ್ನು ಹೊರಗಿಡಲಾಗಿದೆ. ಈ ಕಾಯ್ದೆಯನ್ನು ವಿರೋಧಿಸಿ 2019-20ರಲ್ಲಿ ದೇಶಾದ್ಯಂತ ಭಾರೀ ಹೋರಾಟಗಳು ನಡೆದಿದ್ದವು. ಅಗ, ಕಾಯ್ದೆಯ ಅನುಷ್ಠಾನದಿಂದ ಹಿಂದೆ ಸರಿದಿದ್ದ ಕೇಂದ್ರ ಸರ್ಕಾರ, ಇದೀಗ ಚುನಾವಣಾ ಸಮಯದಲ್ಲಿ ಅನುಷ್ಠಾನಗೊಳಿಸಲು ಮುಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...