ಹಿಂದು ಮಂಡಳಿಗಳಲ್ಲಿ ಮುಸ್ಲಿಮರು ಇರುತ್ತಾರೆಯೇ; ಬಹಿರಂಗವಾಗಿ ಹೇಳುವಂತೆ ಕೇಂದ್ರಕ್ಕೆ ಸುಪ್ರೀಂ ತಾಕೀತು

Date:

ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ ವಕ್ಫ್‌ ತಿದ್ದುಪಡಿ ಕಾಯ್ದೆ-2025ರಲ್ಲಿ ವಕ್ಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು (ಹಿಂದು) ನೇಮಿಸುವುದ ಉದ್ದೇಶವೂ ಒಂದಾಗಿದೆ. ಈ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಛಾಟಿ ಬೀಸಿರುವ ಸುಪ್ರೀಂ ಕೋರ್ಟ್‌, “ಹಿಂದು ಮಂಡಳಿಗಳಲ್ಲಿ ಮುಸ್ಲಿಮರು ಇರುತ್ತಾರೆಯೇ?” ಬಹಿರಂಗವಾಗಿ ಹೇಳಿ ಎಂದು ತಾಕೀತು ಮಾಡಿದೆ.

ವಕ್ಫ್‌ ತಿದ್ದುಪಡಿ ಕಾಯ್ದೆ-2025ಯನ್ನು ಪ್ರಶ್ನಿಸಿ ಕಾಂಗ್ರೆಸ್‌, ಡಿಎಂಕೆ, ಟಿಎಂಸಿ ಸೇರಿದಂತೆ ಹಲವು ಪಕ್ಷಗಳು ಹಾಗೂ ಸಾರ್ವಜನಿಕರು ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದ್ದಾರೆ. ಅಂತಹ 73 ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ವಿಚಾರಣೆ ನಡೆಸಿದೆ. “ಕೇಂದ್ರ ವಕ್ಫ್ ಮಂಡಳಿಗಳನ್ನು ಮುಸ್ಲಿಮೇತರರನ್ನು ನೇಮಿಸುವ ನಿಬಂಧನೆಯನ್ನು ಕಾಯ್ದೆಯು ಒಳಗೊಂಡಿದೆ ಎಂಬುದನ್ನು ನ್ಯಾಯಾಲಯ ಗುರುತಿಸಿದೆ. ವಕ್ಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ನೇಮಿಸುವಾಗ, ಹಿಂದು ದತ್ತಿ ಮಂಡಳಿಗಳಲ್ಲಿ ಮುಸ್ಲಿಮರು ಸೇರಲು, ನೇಮಿಸಲು ಅವಕಾಶ ಇದೆಯೇ ಅಥವಾ ಅವಕಾಶ ನೀಡಲಾಗುತ್ತದೆಯೇ” ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, “ಹೊಸ ಕಾಯ್ದೆಯಲ್ಲಿನ ಹಲವು ನಿಬಂಧನೆಗಳು ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಸಂವಿಧಾನದ 26ನೇ ವಿಧಿಯನ್ನು ಉಲ್ಲಂಘಿಸುತ್ತವೆ. ಜಿಲ್ಲಾಧಿಕಾರಿಗೆ ಅಧಿಕಾರ ನೀಡಿ, ವಕ್ಫ್‌ ಆಸ್ತಿಯ ಮೇಲೆ ಕೇಂದ್ರ ಸರ್ಕಾರದ ಅಧಿಕಾರ ಸಾಧಿಸಲು ಮುಂದಾಗಿದೆ. ಕೇಂದ್ರ ಸರ್ಕಾರದ ಭಾಗವಾಗಿರುವ ಜಿಲ್ಲಾಧಿಕಾರಿಗಳು ನ್ಯಾಯಾಧೀಶರ ಪಾತ್ರವನ್ನು ನಿರ್ವಹಿಸುವುದು ಸಂವಿಧಾನಬಾಹಿರ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ವಕ್ಫ್‌ ತಿದ್ದುಪಡಿ ಕಾಯ್ದೆ | ಮೂಗಿಗೆ ತುಪ್ಪ ಹಚ್ಚಲು ಮನೆ ಬಾಗಿಲಿಗೆ ಬರುತ್ತಿದೆ ಬಿಜೆಪಿ!

“ಔಪಚಾರಿಕ ದಾಖಲೆಗಳಿಲ್ಲದೆ ಇದ್ದರೂ ಸಹ ಧಾರ್ಮಿಕ ಅಥವಾ ದತ್ತಿ ಉದ್ದೇಶಗಳಿಗಾಗಿ ದೀರ್ಘಕಾಲದಿಂದ ಬಳಕೆ ಮಾಡಲಾಗಿರುವ ಆಧಾರದ ಮೇಲೆ ಆಸ್ತಿಗಳನ್ನು ‘ಬಳಕೆದಾರರಿಂದ ವಕ್ಫ್’ ಎಂದು ಪರಿಗಣಿಸಲಾಗುತ್ತದೆ. ಆದರೆ, ಹೊಸ ಕಾನೂನು ಔಪಚಾರಿಕ ದಾಖಲೆಗಳಿಲ್ಲದ ಆಸ್ತಿಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಮುಸ್ಲಿಂ ಸಮುದಾಯದ ಪ್ರಗತಿಗೆ ಅಡ್ಡಿ ಉಂಟು ಮಾಡುತ್ತದೆ” ಎಂದು ವಾದಿಸಿದ್ದಾರೆ.

ವಾದ ಆಲಿಸಿದ ನ್ಯಾಯಮೂರ್ತಿಗಳು, “ಹೊಸ ಕಾನೂನಿನಲ್ಲಿ ‘ಬಳಕೆದಾರರಿಂದ ವಕ್ಫ್’ ನಿಬಂಧನೆಗಳ ಮೇಲೆ ಗಮನಹರಿಸುವ ಅಗತ್ಯವಿದೆ. ನ್ಯಾಯಾಲಯದ ತೀರ್ಪಿನಿಂದ ಅಥವಾ ಇನ್ಯಾವುದೇ ರೀತಿಯಲ್ಲಿ ‘ಬಳಕೆದಾರರಿಂದ ವಕ್ಫ್’ ಸ್ಥಾಪಿಸಲ್ಪಟ್ಟಿದ್ದರೆ, ಅದು ಈಗ ಈಗ ಅನೂರ್ಜಿತವೆಂದು ಸರ್ಕಾರ ಹೇಳುತ್ತದೆ. ಆದರೆ, ವಕ್ಫ್‌ನ ಭಾಗವಾಗಿರುವ ಅನೇಕ ಮಸೀದಿಗಳನ್ನು 13, 14 ಮತ್ತು 15ನೇ ಶತಮಾನಗಳಲ್ಲಿಯೇ ನಿರ್ಮಿಸಲಾಗಿದೆ. ಅವುಗಳಿಗೆ ದಾಖಲೆಗಳನ್ನು ಒದಗಿಸುವುದು ಅಸಾಧ್ಯ” ಎಂದು ಹೇಳಿದ್ದಾರೆ. ಇದು ದುರುಪಯೋಗದ ನಿದರ್ಶನದಂತೆ ಕಾಣುತ್ತದೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...