ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರಿಂಕೋರ್ಟ್

Date:

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಜಾಮೀನು ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಪ್ರಜ್ವಲ್‌ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು (ನ.11) ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮನೆ ಕೆಲಸದಾಕೆ ನೀಡಿರುವ ದೂರಿನ ಅನ್ವಯ ಅತ್ಯಾಚಾರದ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ನಿಯಮಿತ ಜಾಮೀನು ಕೋರಿದ್ದರು. ಇದರಲ್ಲಿ ಅವರು ಎರಡನೇ ಆರೋಪಿಯಾಗಿದ್ದಾರೆ. ಮೊದಲನೇ ಆರೋಪಿ ಜೆಡಿಎಸ್‌ನ ಶಾಸಕ ಮತ್ತು ಪ್ರಜ್ವಲ್ ಅವರ ತಂದೆಯೂ ಆದ ಎಚ್.ಡಿ.ರೇವಣ್ಣ ಈಗಾಗಲೇ ಜಾಮೀನು ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್ 21ರಂದು ಜಾಮೀನು ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿದ್ದ ಹೈಕೋರ್ಟ್, “ಮೇಲ್ನೋಟಕ್ಕೆ ಪ್ರಜ್ವಲ್ ಒಬ್ಬ ಲಂಪಟ ಹಾಗೂ ತನ್ನ ಇಂದ್ರಿಯಗಳ ಮೇಲಿನ ನಿಯಂತ್ರಣ ಕಳೆದುಕೊಂಡು, ಕಾಮಾತುರನಾಗಿ ವರ್ತಿಸಿದ್ದು, ಈ ನೀಚತನದ ಕೃತ್ಯಗಳು ಸ್ವಸ್ಥ ಸಮಾಜದ ಬೆನ್ನುಹುರಿಯಲ್ಲಿ ಚಳಿ ಹುಟ್ಟಿಸುವಂತಿದೆ” ಎಂದು ವ್ಯಕ್ತಪಡಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...