ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Date:

2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಗುಜರಾತ್ ಹೈಕೋರ್ಟ್‌ನ ಆದೇಶವನ್ನು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಎಎಸ್ ಬೋಪಣ್ಣ ಮತ್ತು ದೀಪಂಕರ್ ದತ್ತಾ ಅವರ ಪೀಠ ತಳ್ಳಿಹಾಕಿತು.

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು, ಸೆಟಲ್ವಾಡ್ ಅವರ ಬಂಧನದ ಉದ್ದೇಶಗಳು ಮತ್ತು ಕಾರ್ಯ ಚಟುವಟಿಕೆಯ ಬಗ್ಗೆ ಸರ್ಕಾರಿ ಅಭಿಯೋಜಕರನ್ನು ಪ್ರಶ್ನಿಸಿದರು. “2022ರವರೆಗೆ ನೀವು ಏನು ಮಾಡುತ್ತಿದ್ದೀರಿ? ಜೂನ್ 24 ಮತ್ತು ಜೂನ್ 25 ರಿಂದ ನೀವು ಯಾವ ತನಿಖೆಯನ್ನು ಮಾಡಿದ್ದೀರಿ” ಎಂದು ಮುಂತಾದವುಗಳ ಬಗ್ಗೆ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೀಸ್ತಾ ಅವರಿಗೆ ಜುಲೈ 19 ರವರೆಗೆ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ಸುಪ್ರೀಂ ಕೋರ್ಟ್ ಈ ತಿಂಗಳ ಆರಂಭದಲ್ಲಿ ವಿಸ್ತರಿಸಿತ್ತು.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ದಲಿತ ಬಾಲಕನ ಕೈಯಿಂದ ಮಲ ತೆಗೆಸಿ ಹೀನ ಕೃತ್ಯ

ಕಸ್ಟಡಿ ವಿಚಾರಣೆಯ ಅಗತ್ಯವನ್ನು ತೆಗೆದುಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದು ಎಂದು ನ್ಯಾಯಾಧೀಶರು ತೀಸ್ತಾ ಅವರಿಗೆ ಸೂಚಿಸಿದ್ದಾರೆ. ತೀಸ್ತಾ ಅವರನ್ನು ಕೂಡಲೇ ಶರಣಾಗುವಂತೆ ಆದೇಶ ನೀಡಿ, ಜಾಮೀನು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ.

ಗೋಧ್ರಾ ನಂತರದ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ವರ್ಷ ಜೂನ್‌ನಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ತೀಸ್ತಾ ಸೆಟಲ್ವಾಡ್‌, ಗುಜರಾತ್‌ ಪೊಲೀಸ್ ಮಹಾ ನಿರ್ದೇಶಕ ಆರ್‌ ಬಿ ಶ್ರೀಕುಮಾರ್‌ ಮತ್ತು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್‌ ಭಟ್‌ ಅವರನ್ನು ಬಂಧಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...