ಡಿನೋಟಿಫಿಕೇಷನ್‌ ಪ್ರಕರಣ | ಕೇಂದ್ರ ಸಚಿವ ಕುಮಾರಸ್ವಾಮಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Date:

ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈ ಹಿಂದೆ ಈ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ ಹೈಕೋರ್ಟ್ ಅದನ್ನು ರದ್ದುಗೊಳಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಈಗ ದೇಶದ ಉನ್ನತ ನ್ಯಾಯಾಲಯ ಕೂಡಾ ಅರ್ಜಿ ತಿರಸ್ಕರಿಸಿದೆ.

ಇದನ್ನು ಓದಿದ್ದೀರಾ? ಕುಮಾರಸ್ವಾಮಿ ಭೂ ಕಬಳಿಕೆ ಪ್ರಕರಣ | ಹೈಕೋರ್ಟ್‌ ಚಾಟಿಗೆ ಎಚ್ಚೆತ್ತ ಸರ್ಕಾರ, ತನಿಖೆಗೆ ಎಸ್‌ಐಟಿ ರಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಆದರೆ ದೂರುದಾರರು ಈ ವರದಿ ಪ್ರಶ್ನಿಸಿದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್‌ ತಿರಸ್ಕರಿಸಿ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು.

ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈಗ ಎಚ್‌ಡಿಕೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೂಡಾ ವಜಾಗೊಳಿಸಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬನಶಂಕರಿ ಬಳಿಯ ಹಲಗೆವಡೇರಹಳ್ಳಿ ಸರ್ವೆ ನಂ. 128, 137ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನು ಬಾಹಿರವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪವಿದೆ.

2012ರಲ್ಲಿ ಮಹದೇವಸ್ವಾಮಿ ಎಂಬವರು ಈ ಆರೋಪವನ್ನು ಮಾಡಿದ್ದು, ದಾಖಲೆ ಸಮೇತವಾಗಿ ಖಾಸಗಿ ದೂರು ನೀಡಿದ್ದರು. ಎಚ್‌ಡಿಕೆ ಜೊತೆಗೆ ಇನ್ನೂ ಹಲವು ಮಂದಿಯ, ಹಲವು ಬಿಲ್ಡರ್ಸ್‌ಗಳ ವಿರುದ್ಧ ಈ ಪ್ರಕರಣದಲ್ಲಿ ದೂರು ದಾಖಲಾಗಿದೆ.

ಇದನ್ನು ಓದಿದ್ದೀರಾ? 25ರಲ್ಲೇ 45 ಎಕರೆ ಜಮೀನು ಖರೀದಿಸಿದ್ದರಂತೆ ಕುಮಾರಸ್ವಾಮಿ, ನಿಜವೇ ಗೌಡ್ರೇ?

ಕುಮಾರಸ್ವಾಮಿ ವಿರುದ್ಧ ಈಗಾಗಲೇ ಹಲವು ಭೂ ಅಕ್ರಮಗಳ ಬಗ್ಗೆ ತನಿಖೆ ನಡೆಯುತ್ತಿದೆ. ಈಗಾಗಲೇ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿರುವ ಪ್ರಕರಣ ಮತ್ತಷ್ಟು ಬಿಗಿಯಾಗಿದೆ. ಹೈಕೋರ್ಟ್ ಚಾಟಿ ಬೀಸಿದ ಬಳಿಕ ಸರ್ಕಾರ ಎಸ್‌ಐಟಿ ರಚಿಸಿದೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಕರು ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್‌ಗಳಲ್ಲಿ ಇವರೆಲ್ಲರೂ 110.32 ಎಕರೆ ಪೈಕಿ ಸುಮಾರು 54 ಎಕರೆಯಷ್ಟು ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...