ಮಣಿಪುರದಲ್ಲಿ ಹಿಂಸಾಚಾರವನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ವೇದಿಕೆಯಲ್ಲ: ಸಿಜೆಐ

Date:

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್‌ ಅನ್ನು ವೇದಿಕೆಯನ್ನಾಗಿ ಬಳಸಬಾರದು. ಅಲ್ಲದೆ ನಾವು ಕಾನೂನು ಮತ್ತು ಸುವ್ಯವಸ್ಥೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ತಿಳಿಸಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಸಿಜೆಐ ಹಾಗೂ ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ತಿಳಿಸಿದೆ.

ಸುಪ್ರೀಂ ಕೋರ್ಟ್‌ ಕಾನೂನು ಮತ್ತು ಸುವ್ಯವಸ್ಥೆಯನ್ನು ನಡೆಸಲು ಸಾಧ್ಯವಿಲ್ಲ ಮತ್ತು ಹಾಗೆ ಮಾಡುವುದು ಚುನಾಯಿತ ಸರ್ಕಾರದ ಕೆಲಸವಾಗಿದೆ ಎಂದು ಕುಕಿ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ಈಶಾನ್ಯ ರಾಜ್ಯದ ಪರಿಸ್ಥಿತಿಯನ್ನು ಹತೋಟಿಗೆ ತರಲು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ ಒತ್ತಾಯಿಸಬೇಕು ಎಂದು ಮನವಿ ಸಲ್ಲಿಸಿದಾಗ ತನ್ನ ಅಭಿಪ್ರಾಯ ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಣಿಪುರದಲ್ಲಿ ಹಿಂಸಾಚಾರವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಪ್ರಚೋದಿಸುತ್ತಿದೆ. ಹಿಂಸಾಚಾರದಲ್ಲಿ ತೊಡಗಿರುವ ಸಶಸ್ತ್ರ ಗುಂಪುಗಳಿಗೆ ರಾಜ್ಯ ಸರ್ಕಾರ ಬೆಂಬಲ ನೀಡುತ್ತಿದೆ. ಇದು ಯುಎಪಿಎಯಲ್ಲಿ ಸೂಚಿಸಲಾದ ಸಶಸ್ತ್ರ ಗುಂಪುಗಳಿಂದ ತೀವ್ರ ಉಲ್ಬಣಗೊಳ್ಳುವ ಪ್ರಕರಣವಾಗಿದೆ. ಇವುಗಳನ್ನು ರಾಜ್ಯವು ಬಳಸುತ್ತಿದೆ ಎಂದು ಗೊನ್ಸಾಲ್ವಿಸ್ ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್, “ಹಿಂಸಾಚಾರವನ್ನು ಹೆಚ್ಚಿಸುವ ಅಥವಾ ತಗ್ಗಿಸುವ ವೇದಿಕೆ ಇದಲ್ಲ. ಸುಪ್ರೀಂ ಕೋರ್ಟ್‌ನ ಮಿತಿಯ ಬಗ್ಗೆ ನಾವು ಜಾಗೃತರಾಗಿರಬೇಕು. ನಾವು ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವಿಲ್ಲ. ಚುನಾಯಿತ ಸರ್ಕಾರ ಇದನ್ನು ಮಾಡುತ್ತದೆ. ಇದು ಮಾನವೀಯತೆಯ ಬಿಕ್ಕಟ್ಟು. ಆದರೆ ನಾವು ಸಹ ಜಾಗೃತರಾಗಿದ್ದೇವೆ. ಇದನ್ನು ಪಕ್ಷಪಾತದ ವಿಷಯವಾಗಿ ನೋಡದೆ ಮಾನವೀಯ ಸಮಸ್ಯೆಯಾಗಿ ನೋಡಿ. ನಾವು ನಿಮ್ಮ ಭಾವನೆಗಳನ್ನು ಅರ್ಥಮಾಡಿಕೊಂಡಿದ್ದೇವೆ. ಆದರೆ ಈ ನ್ಯಾಯಾಲಯದ ಮುಂದೆ ವಾದಿಸಲು ಕೆಲವು ವಿಧಾನಗಳು ಇರಬೇಕು ಎಂದು ಅರ್ಜಿದಾರರಿಗೆ ‘ನಿರ್ದಿಷ್ಟ ಸಲಹೆಗಳೊಂದಿಗೆ’ ಮನವಿ ಸಲ್ಲಿಸಿ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಯಾವಾಗ ಮದುವೆಯಾಗುತ್ತೀರಿ ಎಂದು ಕೇಳಿದ ಮೆಕ್ಯಾನಿಕ್‌ಗೆ ರಾಹುಲ್‌ ಗಾಂಧಿ ನೀಡಿದ ಉತ್ತರವೇನು ಗೊತ್ತಾ?

ರಾಜ್ಯದ ಪ್ರಸ್ತುತ ಪರಿಸ್ಥಿತಿಯ ಕುರಿತು ಮುಖ್ಯ ಕಾರ್ಯದರ್ಶಿ ಸಲ್ಲಿಸಿದ ಪ್ರಸ್ತುತ ವರದಿಯನ್ನು ನ್ಯಾಯಾಲಯವು ದಾಖಲಿಸಿತು. ಕಳೆದ ವಾರ, ಹಿಂಸಾಚಾರವನ್ನು ತಡೆಯಲು ಮತ್ತು ಸಂತ್ರಸ್ತರ ಪುನರ್ವಸತಿಗಾಗಿ ತೆಗೆದುಕೊಂಡ ಕ್ರಮಗಳ ಕುರಿತು ನವೀಕರಿಸಿದ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರವನ್ನು ಕೇಳಿತ್ತು.  

ಮಣಿಪುರ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಮನವಿಯನ್ನು ಪರಿಗಣಿಸಲು ನ್ಯಾಯಾಲಯವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕೇಳಿದೆ.

ಜನಾಂಗೀಯ ಗುಂಪುಗಳ ನಡುವಿನ ಘರ್ಷಣೆಯಿಂದಾಗಿ ಮಣಿಪುರದಲ್ಲಿ ಕಳೆದ ಎರಡು ತಿಂಗಳಿನಿಂದ ಪರಿಸ್ಥಿತಿ ಉದ್ವಿಗ್ನವಾಗಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಸೋಮವಾರ(ಜುಲೈ 10), ಮಣಿಪುರದ ವೆಸರ್ ಕಾಂಗ್ಪೊಕ್ಪಿ ಪ್ರದೇಶದಲ್ಲಿ ರಾತ್ರಿಯ ಘರ್ಷಣೆಯಲ್ಲಿ ಒಬ್ಬ ಪೋಲೀಸರು ಸಾವನ್ನಪ್ಪಿದರು ಮತ್ತು 10 ಮಂದಿ ಗಾಯಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...