ಜಮ್ಮು ಕಾಶ್ಮೀರ| ಜುಲೈ 11ರಂದು ವಿಶೇಷ ಸ್ಥಾನಮಾನ ರದ್ದು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ

Date:

ಜಮ್ಮು ಕಾಶ್ಮೀರ ಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದತಿ ಹಾಗೂ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ ಜುಲೈ 11ರಂದು ನಡೆಸಲಿದೆ.

ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರ ನೇತೃತ್ವದ ಸಂವಿಧಾನ ಪೀಠವು ಕೊಲಿಜಿಯಂ ನ್ಯಾಯಾಧೀಶರನ್ನು ಒಳಗೊಂಡಿರುತ್ತದೆ. ಐವರು ನ್ಯಾಯಮೂರ್ತಿಗಳ ಕೊಲಿಜಿಯಂ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ ಆರ್ ಗವಾಯಿ ಮತ್ತು ಸೂರ್ಯ ಕಾಂತ್ ಇದ್ದಾರೆ.

ವಿವಿಧ ಅರ್ಜಿಗಳು ಜಮ್ಮು ಕಾಶ್ಮೀರವನ್ನು “ಜನರಿಂದ ಒಪ್ಪಿಗೆ ಪಡೆಯದೆ” ವಿಭಜಿಸುವ ಮೂಲಕ ಭಾರತದ ವಿಶಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ಕೇಂದ್ರದ “ಏಕಪಕ್ಷೀಯ” ಕ್ರಮ ಹಾಗೂ ಕರ್ಫ್ಯೂ ವಿಧಿಸುವಿಕೆಯ ಕ್ರಮಗಳನ್ನು ಪ್ರಶ್ನಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಎನ್‌ಸಿಪಿಯಿಂದ ಮೂವರ ಉಚ್ಚಾಟನೆ; 9 ಶಾಸಕರು, ಇಬ್ಬರು ಸಂಸದರ ಅನರ್ಹತೆಗೆ ನಿರ್ಣಯ

ಜಮ್ಮು ಕಾಶ್ಮೀರ ಕ್ಕೆ 370ರ ವಿಧಿಯನ್ನು ವಿಶೇಷ ಹಕ್ಕುಗಳು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳುವ ಸಲುವಾಗಿ ನೀಡಲಾಗಿದೆ. ಈ ವಿಶೇಷ ಹಕ್ಕುಗಳನ್ನು 1954 ರಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರ ಸಂಪುಟದ ಸಲಹೆಯ ಮೇರೆಗೆ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರ ಆದೇಶದ ಮೂಲಕ ನೀಡಲಾಗಿತ್ತು. ಆದರೆ ಸಂವಿಧಾನದ 370ನೇ ವಿಧಿಯನ್ನು 2019ರ ಆಗಸ್ಟ್ 5ರಂದು ರದ್ದುಪಡಿಸಿದ್ದ ಕೇಂದ್ರ ಸರ್ಕಾರ, ರಾಜ್ಯವನ್ನು ಜಮ್ಮು ಕಾಶ್ಮೀರ ಹಾಗೂ ಲಡಾಖ್ ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ. ಸಂಸತ್ತಿನ ಸಲಹೆಯನ್ನು ಪಡೆಯದೆ ಈ ವಿಧಿಯನ್ನು ರದ್ದುಗೊಳಿಸಲಾಗಿತ್ತು ಎಂದು ಅರ್ಜಿಗಳಲ್ಲಿ ಪ್ರಶ್ನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...