ಸೂರಜ್​ ರೇವಣ್ಣ | ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಬಿ-ರಿಪೋರ್ಟ್‌ ಸಲ್ಲಿಸಿದ ಸಿಐಡಿ

Date:

ವಿಧಾನ ಪರಿಷತ್ ಸದಸ್ಯ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣಗೆ ಗಂಭೀರ ಪ್ರಕರಣದಲ್ಲಿ ‘ರಿಲೀಫ್‌’ ಸಿಕ್ಕಂತಾಗಿದೆ. ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸಿಐಡಿ ಬಿ-ರಿಪೋರ್ಟ್ ಸಲ್ಲಿಸಿದೆ.

ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿರುವ ಸಿಐಡಿ, ಮತ್ತೊಂದು ಪ್ರಕರಣದಲ್ಲಿ ಬಿ-ರಿಪೋರ್ಟ್‌ ಸಲ್ಲಿಸಿದೆ.

ತಮ್ಮ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತ, ಬ್ರಿಗೇಡ್‌ ಖಜಾಂಚಿ ಕಳೆದ ವರ್ಷ ಜೂನ್‌ 22ರಂದು ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಾರನೆಯ ದಿನವೇ (ಜೂನ್) ಸೂರಜ್‌ನನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ದೇವರಾಜ ಅರಸು ಮತ್ತು ‍ತುರ್ತುಪರಿಸ್ಥಿತಿ: ಒಡನಾಡಿಗಳು ಕಂಡಂತೆ

ಬಳಿಕ, ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿರುವ ಸಿಐಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ-ರಿಪೋರ್ಟ್‌ ಅಲ್ಲಿ ಹಿನ್ನೆಲೆಯಲ್ಲಿ ಸಿಐಡಿ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದೆ. ಒಂದು ಪ್ರಕರಣದಲ್ಲಿ ಸೂರಜ್ ರೇವಣ್ಣಗೆ ರಿಲೀಫ್ ಸಿಕ್ಕಿದೆ. ಆದಾಗ್ಯೂ, ಮತ್ತೊಂದು ಪ್ರಕರಣದಲ್ಲಿ ಅವರು ತನಿಖೆಯನ್ನು ಎದುರಿಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...