ಸೂರಜ್ ರೇವಣ್ಣ ಪ್ರಕರಣ | ನಮಗೆ ಯಾರೂ ಅಧಿಕೃತ ದೂರು ನೀಡಿಲ್ಲ: ಸಚಿವ ಪರಮೇಶ್ವರ್

Date:

ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟ ಹಾಗೆ ಇನ್ನೂ ದೂರು ದಾಖಲಾಗಿಲ್ಲ. ಈ ಕುರಿತು ಮಾಧ್ಯಮಗಳಲ್ಲಿ ನೋಡಿದ್ದೇನೆ. ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ ನನಗೆ ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದರು.

ಜೆಡಿಎಸ್ ಎಂಎಲ್​ಸಿ ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿರುವ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮಗೆ ಯಾರೂ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ನಾವು ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.

“ಪ್ರಕರಣ ಏನು ಎಂಬುದಾಗಿ ತಿಳಿದುಕೊಂಡು ನಾವು ತನಿಖೆ ಮಾಡುತ್ತೇವೆ. ತನಿಖೆಯನ್ನು ಸಿಐಡಿಗೆ ಕೊಡುವ ಮುನ್ನ ನೈಜತೆ ತಿಳಿದುಕೊಳ್ಳುತ್ತೇವೆ. ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ಜೈಲಿನಲ್ಲಿದ್ದಾರೆ. ಈ ಸಂದರ್ಭದಲ್ಲಿಯೇ ಅವರ ಸಹೋದರ ಸೂರಜ್ ವಿರುದ್ಧವೂ ಆರೋಪ ಕೇಳಿಬಂದಿದೆ.

ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್‌ ಕಾರ್ಯಕರ್ತ ದೂರು ನೀಡಿದ್ದರು. ಆದರೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...