ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಜಯ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರು 1,14,886 ಮತ ಪಡೆದಿದ್ದರೆ, ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ನರಸಿಂಹ ನಾಯಕ (ರಾಜೂಗೌಡ) 96,566 ಮತಗಳು ಪಡೆದಿದ್ದಾರೆ. 18,320 ಗೆಲುವಿನ ಅಂತರದಿಂದ ಕಾಂಗ್ರೆಸ್ ಗೆದ್ದಿದೆ.
ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿದ್ದ ಸುರಪುರ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆದಿತ್ತು. ತಂದೆಯ ಸಾವಿನ ಅನುಕಂಪ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕಾರಣ ಎನ್ನುವುದು ಸ್ಷಷ್ಟ.





