ರಾಷ್ಟ್ರಪತಿ ಪರಿಗಣನೆಗಾಗಿ ಮಸೂದೆಗಳಿಗೆ ತಡೆ; ಸುಪ್ರೀಂ ಮೊರೆ ಹೋದ ಕೇರಳ ಸರ್ಕಾರ

Date:

ವಿಧಾನಸಭೆಯಲ್ಲಿ ಅಂಗೀಕರಿಸಿದ್ದ ನಾಲ್ಕು ಮಸೂದೆಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪರಿಗಣನೆಗಾಗಿ ಕಾಯ್ದಿರಿಸಿರುವ ರಾಜ್ಯಪಾಲರ ವಿರುದ್ಧ ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಸಿಪಿಎಂ ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಸರ್ಕಾರವು ತನ್ನ ಅರ್ಜಿಯಲ್ಲಿ ರಾಷ್ಟ್ರಪತಿಗಳ ಕಾರ್ಯದರ್ಶಿ, ಕೇಂದ್ರ ಸರ್ಕಾರ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಅವರ ಹೆಚ್ಚುವರಿ ಕಾರ್ಯದರ್ಶಿಯನ್ನು ಪ್ರತಿವಾದಿಗಳನ್ನಾಗಿ ಹೆಸರಿಸಿದೆ.

ವಿಧಾನಸಭೆಯಲ್ಲಿ ಅಂಗೀಕರಿಸಿದ್ದ ನಾಲ್ಕು ಮಸೂದೆಗಳನ್ನು – ವಿಶ್ವವಿದ್ಯಾಲಯ ಕಾನೂನುಗಳು (ತಿದ್ದುಪಡಿ) (ಸಂ.2) ಮಸೂದೆ-2021; ಕೇರಳ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ-2022; ವಿಶ್ವವಿದ್ಯಾಲಯ ಕಾನೂನುಗಳು (ತಿದ್ದುಪಡಿ) ಮಸೂದೆ-2022; ಮತ್ತು ವಿಶ್ವವಿದ್ಯಾನಿಲಯ ಕಾನೂನುಗಳು (ತಿದ್ದುಪಡಿ) (ಸಂ.3) ಮಸೂದೆ-2022 – ಯಾವುದೇ ಕಾರಣವನ್ನು ನೀಡದೆಯೇ ಅಸಂವಿಧಾನಿಕ ಎಂದು ಘೋಷಿಸಲಾಗಿದೆ ಎಂದು ಕೇರಳ ಸರ್ಕಾರ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವಾರು ತಿದ್ದುಪಡಿಗಳ ಜೊತೆಗೆ, ರಾಜ್ಯ ಸರ್ಕಾರವು ಈ ನಾಲ್ಕು ಸೇರಿದಂತೆ ಒಟ್ಟು ಏಳು ಮಸೂದೆಗಳನ್ನು ಅಂಗೀಕರಿಸಿದೆ. ಆ ಏಳು ಮಸೂದೆಗಳ ಪೈಕಿ, ನಾಲ್ಕು ಮಸೂದೆಗಳನ್ನು ರಾಷ್ಟ್ರಪತಿಗಳ ಪರಿಗಣನೆಗಾಗಿ ಅಕ್ರಮವಾಗಿ ಗವರ್ನರ್ ಖಾನ್ ಅವರು ಕಾಯ್ದಿರಿಸಿದ್ದಾರೆ ಎಂದು ಸರ್ಕಾರ ಆರೋಪಿಸಿದೆ.

“ರಾಜ್ಯಪಾಲರು ವಿಧೇಯಕಗಳನ್ನು ದೀರ್ಘ ಮತ್ತು ಅನಿರ್ದಿಷ್ಟ ಅವಧಿಯವರೆಗೆ ಬಾಕಿ ಇರಿಸುವುದು ಮತ್ತು ನಂತರ ಸಂವಿಧಾನಾತ್ಮಕ ಯಾವುದೇ ಕಾರಣಗಳನ್ನು ನೀಡದೆ ಮಸೂದೆಗಳನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸುವುದು ಸ್ಪಷ್ಟವಾಗಿ ಕಾನೂನುಬಾಹಿರವಾಗಿದೆ. ಸಂವಿಧಾನದ ಆರ್ಟಿಕಲ್ 14 (ಕಾನೂನಿನ ಮುಂದೆ ಸಮಾನತೆ) ಅನ್ನು ಉಲ್ಲಂಘಿಸುತ್ತದೆ” ಎಂದು ಸರ್ಕಾರವು ಅರ್ಜಿಯಲ್ಲಿ ಹೇಳಿದೆ.

“ಹೆಚ್ಚುವರಿಯಾಗಿ, ರಾಜ್ಯ ಅಸೆಂಬ್ಲಿ ಜಾರಿಗೊಳಿಸಿದ ಕಲ್ಯಾಣ ಶಾಸನದ ಪ್ರಯೋಜನಗಳನ್ನು ನಿರಾಕರಿಸುವ ಮೂಲಕ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಕೇರಳ ರಾಜ್ಯದ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ” ಎಂದು ಸರ್ಕಾರ ವಾದಿಸಿದೆ.

ಈ ಹಿಂದೆಯೂ, ವಿಧಾನಸಭೆಯಿಂದ ಅಂಗೀಕರಿಸಲ್ಪಟ್ಟ ಹಲವಾರು ಮಸೂದೆಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿಲ್ಲ ಎಂದು ಆರೋಪಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ನ್ಯಾಯಾಲಯವು ಕಳೆದ ವರ್ಷ ನವೆಂಬರ್ 20ರಂದು ಮನವಿಯ ಕುರಿತು ರಾಜ್ಯಪಾಲರ ಕಚೇರಿಗೆ ನೋಟಿಸ್ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...