ಡಿಕೆಶಿಯನ್ನು ಸಿಎಂ ಮಾಡಲು ಬಹಿರಂಗವಾಗಿ ಸಿದ್ದರಾಮಯ್ಯಗೆ ಮನವಿ ಮಾಡಿಕೊಂಡ ಸ್ವಾಮೀಜಿ!

Date:

ಮುಖ್ಯಮಂತ್ರಿ ಸಿದರಾಮಯ್ಯ ಅವರ ಮುಂದೆಯೇ ಡಿಕೆ ಶಿವಕುಮಾರ್ ಅವರನ್ನು ರಾಜ್ಯದ ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಬೇಡಿಕೆ ಇಟ್ಟ ಪ್ರಸಂಗ ನಡೆದಿದೆ.

ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆಗಳು ನಡುವೆ ನಡೆದ ಈ ಬೆಳವಣಿಗೆ ಮತ್ತಷ್ಟು ಕುತೂಹಲ ಮೂಡಿಸಿದೆ. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಡಿ ಕೆ ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಮಾಡಿ ಎಂದು ಬೇಡಿಕೆ ಇಟ್ಟರು.

“ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿ ಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿ ಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ಮನಸ್ಸು ಮಾಡಿದರೆ ಖಂಡಿತ ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗಲಿದ್ದಾರೆ. ಇಲ್ಲಾಂದ್ರೆ ಆಗುವುದು ಕಷ್ಟ. ಹೀಗಾಗಿ ದಯವಿಟ್ಟು ಡಿ ಕೆ ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಿ” ಎಂದು ವೇದಿಕೆಯಲ್ಲೇ ನುಡಿದರು.

ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಸಚಿವರು ವೇದಿಕೆಯಲ್ಲಿದ್ದರು. ಸ್ವಾಮೀಜಿ ಮಾತಿಗೆ ಡಿ ಕೆ ಶಿವಕುಮಾರ್ ಅಭಿಮಾನಿಗಳು ಚಪ್ಪಾಳೆ, ಶಿಳ್ಳೆ ಹಾಕುವ ಮೂಲಕ ಸಹಮತ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...