ಕಸ ಗುಡಿಸಿ ಎಂದರೂ ಗುಡಿಸುವೆ; ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ನಳಿನ್ ಕುಮಾರ್ ಕಟೀಲ್​

Date:

ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆ ಅವರ ಮಾತಿನಲ್ಲೇ ವ್ಯಕ್ತವಾಗಿದೆ.

ಮಂಗಳೂರಿನಲ್ಲಿ ಭಾವುಕರಾಗಿ ಮಾತನಾಡಿದ ಕಟೀಲ್‌, “ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಅವರ ಆಯ್ಕೆಯನ್ನು ನಾನು ಸ್ವಾಗತಿಸುತ್ತೇನೆ” ಎಂದಿದ್ದಾರೆ.

“ನನಗೆ ಮೂರು ಬಾರಿ ಅವಕಾಶ ನೀಡಿದ್ದಾರೆ. ಪಕ್ಷ ನಿಂತ ನೀರಾಗಬಾರದು, ಹೊಸಬರು ಬರ್ತಾ ಇರಬೇಕು. ಹೈಕಮಾಂಡ್‌ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಪಕ್ಷ ಕಸ ಗುಡಿಸಿ ಎಂದರೂ ಗುಡಿಸುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾರೇ ಅಭ್ಯರ್ಥಿಯಾದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು. ಪಕ್ಷ ಏನೇ ಹೇಳಿದರೂ ಮಾಡುತ್ತೇವೆ. ನಮಗೆ ಅಧಿಕಾರವೇ ಮುಖ್ಯವಲ್ಲ” ಎಂದು ತಿಳಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿರುವುದನ್ನು ಗಮನಿಸಿದ್ದೇನೆ. ರಾಷ್ಟ್ರೀಯ ನಾಯಕರು ಯಾವ ತೀರ್ಮಾನ ತಗೆದುಕೊಂಡರೂ ಅದು ಪಾರ್ಟಿಯ ತೀರ್ಮಾನ. ಆ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ” ಎಂದಿದ್ದಾರೆ.

“ಬಿಜೆಪಿಯಲ್ಲಿ ಯಾರನ್ನೂ ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ. ಅವಕಾಶ ಸಿಕ್ಕಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ. ಎಲ್ಲರನ್ನೂ ಪಾರ್ಟಿ ಬೆಳೆಸಿದೆ. ಟಿಕೆಟ್ ಸಿಕ್ಕಿಲ್ಲ ಎಂದ ಕೂಡಲೇ ಅಂಥವರನ್ನು ಕೈಬಿಟ್ಟಿದೆ” ಎಂದು ಅರ್ಥವಿಲ್ಲ” ಎಂದು ಕಟೀಲ್‌ ಸಮರ್ಥಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...