‘ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆʼ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಸಚಿವರ ಪತ್ನಿ ದೂರು

Date:

“ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ” ಎಂದು ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ವಿವಾದಾತ್ಮಕ ಹೇಳಿಕೆಯ ವಿರುದ್ಧ ಗುಂಡೂರಾವ್ ಪತ್ನಿ ಟಬು ಗುಂಡೂರಾವ್ ತಿರುಗಿಬದ್ದಿದ್ದು, ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಯತ್ನಾಳರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್, ಸಂಜಯ್ ನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಯತ್ನಾಳ್ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಹ ಶೇಷಾದ್ರಿಪುರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಪೊಲೀಸರಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟಬು ರಾವ್, “ಈ ಬಸನಗೌಡ ಪಾಟೀಲ್ ಯತ್ನಾಳ್ ಯಾರೋ ನನಗೆ ಗೊತ್ತಿಲ್ಲ. ನಾನು ರಾಜಕೀಯದಲ್ಲಿಲ್ಲ. ನಾನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ರಾಜಕೀಯದಲ್ಲಿ ಗುರುತಿಸಿಕೊಂಡಿಲ್ಲ. ನಾನು ಅರುಮುಗಂ ಎಂಬ ಫೌಂಡೇಶನ್ ನಡೆಸುತ್ತಿದ್ದೇನೆ. ದಿನೇಶ್ ಅವರು ರಾಜಕೀಯದಲ್ಲಿದ್ದಾರೆ. ಅವರ ಬಗ್ಗೆ ಏನಾದರೂ ಮಾತಾಡಿಕೊಳ್ಳಲಿ. ಆದರೆ ನಮ್ಮ ಬಗ್ಗೆ ಯಾಕೆ ಮಾತನಾಡಬೇಕು. ಮಾತೆತ್ತಿದ್ದರೆ ಭಾರತ ಮಾತೆ ಅಂತಾರೆ. ಆದರೆ  ಹೆಣ್ಣು ಮಕ್ಕಳಿಗೆ ಬಿಜೆಪಿಯವರು ಕೊಡುವ ಮರ್ಯಾದೆ ಇದೇನಾ? ಯತ್ನಾಳ್‌ಗೆ ಒಳ್ಳೆಯ ಭಾಷೆ ಗೊತ್ತಿಲ್ಲವಾ?” ಎಂದು ಯತ್ನಾಳ್ ವಿರುದ್ಧ ಟಬು ರಾವ್ ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿದ್ದೀರಾ? ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ: ಬಿಜೆಪಿ ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

“ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಪೊಲೀಸರು ದೂರು ಸ್ವೀಕಾರ ಮಾಡಿದ್ದು, ಎಫ್‌ಐಆರ್ ಹಾಕುವುದಾಗಿಯೂ ತಿಳಿಸಿದ್ದಾರೆ. ಯತ್ನಾಳ್ ವಿರುದ್ಧ ನಾನು ಮಾನನಷ್ಟ ಮೊಕದ್ದಮೆಯನ್ನೂ ಹಾಕುತ್ತೇನೆ”  ಎಂದು ಟಬು ರಾವ್ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...