ಆಹಾರ ಧಾನ್ಯಗಳ ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬಂದರೆ ಕ್ರಮವಹಿಸಿ: ಕೆ ಹೆಚ್ ಮುನಿಯಪ್ಪ

Date:

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂಎಸ್‌ಪಿ) ರೈತರಿಂದ ಖರೀದಿಸುವ ರಾಗಿ, ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ ಎಂಎಸ್‌ಪಿ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳು ಬೇಕು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಸೂಚಿಸಿದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸೋಮವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನಸ್ಸಿ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದದ ಮೂಲಕ ನಡೆಸಿದ ಸಭೆಯಲ್ಲಿ ಮಾತನಾಡಿದರು.

“ಪ್ರತಿ ಕ್ವಿಂಟಾಲ್ ರಾಗಿಗೆ 4,290 ರೂ., ಪ್ರತಿ ಕ್ವಿಂಟಾಲ್ ಹೈಬ್ರೀಡ್ ಜೋಳಕ್ಕೆ 3,371 ರೂ. ಹಾಗೂ ಮಾಲದಂಡಿ ಜೋಳ 3,421, ಭತ್ತಕ್ಕೆ ಸಾಮಾನ್ಯವಾಗಿ ಪ್ರತಿ ಕ್ವಿಂಟಾಲ್ 2300 ರೂ. ದರ ನಿಗದಿಯಾಗಿದ್ದು, ಈ ದರದಲ್ಲಿ ರೈತರಿಂದ ಖರೀದಿಸಿ ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲಾಧಿಕಾರಿಗಳು ಖರೀದಿ ಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶಾಮಿಯಾಣದ ವ್ಯವಸ್ಥೆಯನ್ನು ಕಲ್ಲಿಸಬೇಕು. ಏಕೆಂದರೆ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲಿರಿವುದರಿಂದ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು” ಎಂದು ಹೇಳಿದರು.

“ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ 15 ಕೆಜಿ‌ ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.

“ಜಿಲ್ಲಾಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಬೇಕು. ರಾಗಿಯನ್ನು ಖರೀದಿಸುವ ಕೇಂದ್ರಗಳಲ್ಲಿ ತೂಕದಲ್ಲಿ ವ್ಯತ್ಯಾಸಗಳು ಕಾಣದಂತೆ ನಿಗಾವಹಿಸಬೇಕು. ಲೋಪವೆಸಗಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತ್ತು ಮಾಡಬೇಕು” ಎಂದು ಜಿಲ್ಲಾಧಿಕಾರಗಳಿಗೆ ಸೂಚಿಸಿದರು.

ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್,ಆಯುಕ್ತರಾದ ವಾಸಿ ರೆಡ್ಡಿ ವಿಜಯ ಜೋತ್ಸ್ನಾ, ನಿಗಮ ನಿರ್ದೇಶಕ ಚಂದ್ರಕಾತ್,ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರಾದ ಎಂ ಎಸ್ ಎನ್ ಬಾಬು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...