ತಮಿಳುನಾಡು ಚುನಾವಣೆ | ಬಿಜೆಪಿ – ಎಐಎಡಿಎಂಕೆ ಮೈತ್ರಿ: ಅಮಿತ್ ಶಾ ಘೋಷಣೆ

Date:

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಜೊತೆಯಾಗಿ ಸ್ಪರ್ಧಿಸಲಿವೆ. ಎನ್‌ಡಿಎ ಮೈತ್ರಿಕೂಟದಡಿ ಚುನಾವಣೆ ಎದುರಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

ಇತ್ತೀಚೆಗೆ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಸಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ನೇಮಕದ ಬಳಿಕ, ಎಐಎಡಿಎಂಕೆ ಮತ್ತು ಬಿಜೆಪಿ ನಾಯಕರು ಚೆನ್ನೈನಲ್ಲಿ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಮೈತ್ರಿಯ ಬಗ್ಗೆ ಅಮಿತ್ ಶಾ ಘೋಷಿಸಿದ್ದಾರೆ.

“2014ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು (ಬಿಜೆಪಿ-ಎಐಎಡಿಎಂಕೆ) ತಮಿಳುನಾಡಿನಲ್ಲಿ 30 ಸ್ಥಾನಗಳನ್ನು ಗೆದ್ದಿತ್ತು. ರಾಜ್ಯದಲ್ಲಿ ಸರ್ಕಾರ ರಚಿಸಿತ್ತು. ಈ ಬಾರಿಯೂ ಮೈತ್ರಿಯೊಂದಿಗೆ ಸ್ಪರ್ಧಿಸಲಿದೆ. ಮತ್ತೆ ಸರ್ಕಾರ ರಚಿಸಲಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1998ರಿಂದಲೂ ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯಲ್ಲಿವೆ. ಆದಾಗ್ಯೂ, ತಮಿಳುನಾಡಿನಲ್ಲಿ ಬಿಜೆಪಿ ತನ್ನ ನೆಲೆಯನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ. ನೆಲೆಗಾಗಿ ಬಿಜೆಪಿ ನಾನಾ ರೀತಿಯ ಕಸರತ್ತು ನಡೆಸುತ್ತಿದೆ. ಆದರೂ, ದ್ರಾವಿಡ ಹೋರಾಟದ ನೆಲೆಯಾಗಿರುವ ತಮಿಳುನಾಡು ಬಿಜೆಪಿಗೆ ಅವಕಾಶ ಕೊಡುತ್ತಿಲ್ಲ. ಕಳೆದ ವರ್ಷ (2024) ನಡೆದ ಲೋಕಸಭಾ ಚುನಾವಣೆಗೂ ಮುನ್ನ 2023ರ ಸೆಪ್ಟೆಂಬರ್‌ನಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಎಐಎಡಿಎಂಕೆ ಹೊರಬಂದಿತ್ತು. ಇದೀಗ, ಮತ್ತೆ ಎನ್‌ಡಿಎ ಭಾಗವಾಗಿದೆ.

ಇತ್ತೀಚಿನ ದಿನಗಳಲ್ಲಿ ಹಿಂದಿ ಹೇರಿಕೆ, ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಅನುದಾನ ತಡೆಯಂತಹ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ತಮಿಳುನಾಡಿನಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಹೀಗಾಗಿ, ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ನೆಲೆ ಕಂಡುಕೊಳ್ಳಲು ಸಾಧ್ಯವಿಲ್ಲ ಎಂಬ ಅಭಿಪ್ರಾಯಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...