‘ಸ್ಟ್ಯಾಲಿನ್ ನಾಯಕತ್ವ ಒಪ್ಪುವೆ’ – ಡಿಎಂಕೆ ಸೇರಿದ ತಮಿಳುನಾಡು ಮಾಜಿ ಸಿಎಂ ಪನ್ನೀರ್‌ಸೆಲ್ವಂ

Date:

ಮೂರು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಮತ್ತು ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡಿರುವ ಓ. ಪನ್ನೀರ್‌ಸೆಲ್ವಂ (75) ಶುಕ್ರವಾರ ಬೆಳಿಗ್ಗೆ ಡಿಎಂಕೆ ಸೇರಿದ್ದಾರೆ. ಚುನಾವಣೆಗೂ ಮುನ್ನ ನಡೆದಿರುವ ಈ ಬೆಳವಣಿಗೆ ಸದ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಡಿಎಂಕೆ ಪ್ರಧಾನ ಕಚೇರಿಯಾದ ಅಣ್ಣಾ ಅರಿವಲಯಂನಲ್ಲಿ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಅವರ ಸಮ್ಮುಖದಲ್ಲಿ ಪನ್ನೀರ್‌ಸೆಲ್ವಂ ಡಿಎಂಕೆ ಸೇರಿದರು. ಇನ್ನು 2021ರಲ್ಲಿ ತಾವು ಗೆದ್ದ ಥೇನಿಯಕ್ಕನೂರ್ ಸ್ಥಾನದಲ್ಲೇ ಈ ಬಾರಿ ಪನ್ನೀರ್‌ಸೆಲ್ವಂ ಡಿಎಂಕೆ ಟಿಕೆಟ್ ಮೂಲಕ ಸ್ಪರ್ಧಿಸುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? ತಮಿಳುನಾಡು | ಬಿಜೆಪಿ ನಾಯಕನ ಕೊಲೆ; ಡಿಎಂಕೆ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಎಂಕೆ ಸೇರಿದ ಬಳಿಕ ಮಾತನಾಡಿದ ಓ. ಪನ್ನೀರ್‌ಸೆಲ್ವಂ, “ಸ್ಟಾಲಿನ್ ಜನರಿಗೆ ಉತ್ತಮ ಆಡಳಿತ ನೀಡುತ್ತಿದ್ದಾರೆ ಮತ್ತು ಇದನ್ನು ಇಡೀ ದೇಶವೇ ಗಮನಿಸುತ್ತಿದೆ. ರಾಜಕೀಯ ಪಕ್ಷವನ್ನು ಹೇಗೆ ನಡೆಸಬೇಕು ಎಂಬುದಕ್ಕೆ ಅವರು ಹೊಸ ಮಾದರಿ ರೂಪಿಸಿದ್ದಾರೆ” ಎಂದು ಶ್ಲಾಘಿಸಿದರು.

ಹಾಗೆಯೇ, “ದ್ರಾವಿಡ ಚಳುವಳಿಯನ್ನು ಉಳಿಸಲು, ದ್ರಾವಿಡರ ನೀತಿ, ಡಿಎಂಕೆ ಕೆಲಸ ಮಾಡುತ್ತಿದೆ. ನಾನು ಇದೀಗ ಕೇಡರ್ ಆಗಿ ಸೇರಿದ್ದೇನೆ. ನಾನು ಪಕ್ಷದ ಕಾರ್ಯಕರ್ತರಲ್ಲಿ ಒಬ್ಬನಾಗಿ ಪಕ್ಷದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ” ಎಂದು ತಿಳಿಸಿದರು. ಇನ್ನು ಡಿಎಂಕೆ ಪಕ್ಷವನ್ನು ‘ತಾಯಿ ಪಕ್ಷ’ ಎಂದು ಕರೆದ ಪನ್ನೀರ್‌ಸೆಲ್ವಂ ಪೆರಿಜ್ಞಾರ್ ಅಣ್ಣಾ ಅವರು ಸ್ಥಾಪಿಸಿದ ಈ ಪಕ್ಷಕ್ಕೆ ಸೇರ್ಪಡೆಯಾಗಿರುವುದು ತಮಗೆ ಅಪಾರ ಸಂತೋಷ ತಂದಿದೆ ಎಂದರು.

ಇನ್ನು ಈ ಸಂದರ್ಭದಲ್ಲೇ ಎಐಎಡಿಎಂಕೆಯ ಎಡಪ್ಪಾಡಿ ಕೆ. ಪಳನಿಸ್ವಾಮಿ (EPS) ಅವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಎಐಎಡಿಎಂಕೆಯನ್ನು ಎಂದಿಗೂ ಗೆಲ್ಲದ ಸ್ಥಿತಿಗೆ ತಂದಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು. “ದ್ರಾವಿಡ ಚಳವಳಿ ಮತ್ತು ಅದರ ಸಿದ್ಧಾಂತಗಳನ್ನು ಉಳಿಸಲು ಇಂದು ಡಿಎಂಕೆ ಮಾತ್ರ ಕೆಲಸ ಮಾಡುತ್ತಿದೆ” ಎಂದೂ ಹೇಳಿದರು.

ಜೆ. ಜಯಲಲಿತಾ ಬೆಂಬಲಿಗರಾಗಿದ್ದ ಪನ್ನೀರ್‌ಸೆಲ್ವಂ

ದೀರ್ಘಕಾಲದವರೆಗೆ ಎಐಎಡಿಎಂಕೆ (AIADMK) ಹಿರಿಯ ನಾಯಕರಾಗಿದ್ದ ಪನ್ನೀರ್‌ಸೆಲ್ವಂ, ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಅತ್ಯಂತ ನಂಬಿಕಸ್ತ ಬೆಂಬಲಿಗರಾಗಿದ್ದರು. ಒಟ್ಟು ಮೂರು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಎಡಪ್ಪಾಡಿ ಕೆ. ಪಳನಿಸ್ವಾಮಿ ಸರ್ಕಾರದಲ್ಲಿ (2017-21) ಉಪ ಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. 2022ರಲ್ಲಿ ಎಐಎಡಿಎಂಕೆ ಪಕ್ಷದಲ್ಲಿ ಉಂಟಾದ ನಾಯಕತ್ವದ ಸಂಘರ್ಷದ ನಂತರ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಅದಾದ ಬಳಿಕ ಎನ್‌ಡಿಎಯೊಂದಿಗೆ ಸಹಯೋಗ ಮಾಡಿದ್ದರು, ಆದರೆ ಕಳೆದ ವರ್ಷ ಅದರಿಂದಲೂ ಹೊರಗೆ ಬಂದಿದ್ದಾರೆ. ಇದೀಗ ಡಿಎಂಕೆ ಸೇರಿದ್ದಾರೆ.

ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಿಗೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಅದಕ್ಕೂ ಕೆಲವೇ ವಾರಗಳ ಮೊದಲು ಈ ಬೆಳವಣಿಗೆ ನಡೆದಿದೆ. ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆಯಾಗಿರುವುದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ)ಗೆ ನಷ್ಟವನ್ನುಂಟುಮಾಡಬಹುದು. ಒಪಿಎಸ್ ಅವರ ಬೆಂಬಲಿಗರು, ವಿಶೇಷವಾಗಿ ದಕ್ಷಿಣ ಜಿಲ್ಲೆಗಳಲ್ಲಿ ಥೇವರ್ ಸಮುದಾಯವು ಡಿಎಂಕೆಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಜಯಲಲಿತಾ ಅವರ ನಿಷ್ಠಾವಂತರಾಗಿದ್ದ ಒಪಿಎಸ್ ಅವರು ಡಿಎಂಕೆಗೆ ಸೇರ್ಪಡೆಯಾಗಿರುವುದು ಎಐಎಡಿಎಂಕೆಯ ಹಳೆಯ ಕಾರ್ಯಕರ್ತರನ್ನು ಡಿಎಂಕೆ ಕಡೆಗೆ ಆಕರ್ಷಿಸಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...