ಹಿಂದಿ ನಿಷೇಧ ಇಲ್ಲ: ಸ್ಪಷ್ಟನೆ ನೀಡಿದ ತಮಿಳುನಾಡು ಸರ್ಕಾರ

Date:

ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಹಿಂದಿ ಭಾಷೆಯನ್ನು ನಿಷೇಧಿಸಲಿದೆ, ಈ ನಿಟ್ಟಿನಲ್ಲಿ ಮಸೂದೆಯನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ ಎಂಬ ಸುದ್ದಿಗಳ ನಡುವೆ ತಮಿಳುನಾಡು ಸರ್ಕಾರ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದೆ. ಹಿಂದಿ ಭಾಷೆ ನಿಷೇಧ ಮಾಡಲಾಗುತ್ತದೆ ಎಂಬ ಸುದ್ದಿಯು “ಸಂಪೂರ್ಣವಾಗಿ ಸುಳ್ಳು” ಎಂದು ಎಂ ಕೆ ಸ್ಟಾಲಿನ್ ಸ್ಪಷ್ಟಪಡಿಸಿದೆ.

ಈ ಬಗ್ಗೆ ತಮಿಳುನಾಡು ಸರ್ಕಾರ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ. “ತಮಿಳುನಾಡಿನಲ್ಲಿ ಹಿಂದಿ ಭಾಷೆಯನ್ನು ನಿಷೇಧಿಸಲಾಗುತ್ತದೆ ಎಂಬ ವದಂತಿ ಹಬ್ಬುತ್ತಿದೆ. ತಮಿಳುನಾಡಿನಲ್ಲಿ ಎಲ್ಲಾ ರೀತಿಯಲ್ಲಿ ಹಿಂದಿ ಭಾಷೆಯ ಬಳಕೆಯನ್ನು ನಿಷೇಧಿಸಲು ಮುಖ್ಯಮಂತ್ರಿ ಸ್ಟಾಲಿನ್ ಅವರ ತಮಿಳುನಾಡು ಸರ್ಕಾರ ಹೊಸ ಮಸೂದೆಯನ್ನು ಜಾರಿಗೊಳಿಸಲು ಮುಂದಾಗುತ್ತಿದೆ ಎಂದು ಸುಳ್ಳು ಸುದ್ದಿ ಹರಿದಾಡುತ್ತಿದೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಹಿಂದಿಗೆ ನಿಷೇಧ | ತಮಿಳುನಾಡು ಸರ್ಕಾರದ ಹೊಸ ಮಸೂದೆ ರಾಜ್ಯದಲ್ಲಿ ಫಲಕ, ಸಿನಿಮಾ, ಹಾಡುಗಳಿಗೆ ತಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸುದ್ದಿಯು ಸಂಪೂರ್ಣವಾಗಿ ಸುಳ್ಳು. ಈ ಬಗ್ಗೆ ಸರ್ಕಾರದ ಕಾರ್ಯದರ್ಶಿ ಸ್ಪಷ್ಟನೆಯನ್ನು ನೀಡಿದ್ದಾರೆ. ‘ಈ ರೀತಿಯ ಮಸೂದೆಯನ್ನು ಮಂಡಿಸುವ ಯಾವುದೇ ಪ್ರಸ್ತಾಪವಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ. ಹಾಗಾಗಿ ಯಾವುದೇ ವದಂತಿಯನ್ನು ಹಬ್ಬಬೇಡಿ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ಹಿಂದಿ ಹೇರಿಕೆ ವಿರುದ್ಧವಾಗಿ ನಿರಂತರವಾಗಿ ಪ್ರತಿಭಟಿಸುತ್ತಾ ಬಂದ ದಕ್ಷಿಣ ಭಾರತ ರಾಜ್ಯಗಳಲ್ಲಿ ತಮಿಳುನಾಡು ಕೂಡಾ ಒಂದು. ಈ ರಾಜ್ಯದಲ್ಲಿ ಹಿಂದಿ ನಿಷೇಧಿಸಲಾಗುತ್ತದೆ ಎಂಬುದು ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರ ಎಕ್ಸ್‌ ಪೋಸ್ಟ್‌ನಿಂದಾಗಿ ಹರಡಿದೆ.

“ಆಂಧ್ರಪ್ರದೇಶ ಮುಖ್ಯಮಂತ್ರಿ: ವಿಶಾಖಪಟ್ಟಣದಲ್ಲಿ ಸುಮಾರು 15 ಬಿಲಿಯನ್ ಡಾಲರ್‌ನ ಎಐ ಡೇಟಾ ಸೆಂಟರ್‌ ಅನ್ನು ಸ್ಥಾಪಿಸುವ ನಿಟ್ಟಿನಲ್ಲಿ ಗೂಗಲ್ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ತಮಿಳುನಾಡು ಮುಖ್ಯಮಂತ್ರಿ: ನಮ್ಮ ರಾಜ್ಯದಲ್ಲಿ ಹಿಂದಿ ನಿಷೇಧ ಮಾಡೋಣ, ಅದಕ್ಕಾಗಿ ಮಸೂದೆ ಜಾರಿ ಮಾಡೋಣ” ಎಂದು ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಮಾತನಾಡಿಕೊಂಡಂತೆ ಅಣ್ಣಾಮಲೈ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಹಾಗೆಯೇ “ಡಿಎಂಕೆ ಮತ್ತು ಅದರ ಅಸಹ್ಯ ರಾಜಕೀಯ, ಯದ್ವಾತದ್ವವಾದ ಆದ್ಯತೆ” ಎಂದೂ ಬರೆದುಕೊಂಡಿದ್ದರು.

ಇದಕ್ಕೆ ಡಿಎಂಕೆ ಸಂಸದ ಪಿ ವಿಲ್ಸನ್ ಅವರೂ ಪ್ರತಿಕ್ರಿಯಿಸಿದ್ದರು. “ಒಬ್ಬರು ಅಂಧಭಕ್ತರಾದರೆ(ತಮಿಳುನಾಡಿನ ಸಂಘಿಗಳ ಅಭಿಲಾಷೆಯಂತೆ ಹಿಂದಿ ಪದ ಬಳಕೆ) ನಡೆಯುವುದು ಹೀಗೆ” ಎಂದು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...