ಸಿಎಂ ಸಂಪರ್ಕಿಸದೆ ಬಂಧಿತ ಸಚಿವರನ್ನು ವಜಾ ಮಾಡಿದ ತಮಿಳುನಾಡು ರಾಜ್ಯಪಾಲ

Date:

ವಿವಾದಾತ್ಮಕ ನಿರ್ಧಾರದಲ್ಲಿ ತಮಿಳುನಾಡು ರಾಜ್ಯಪಾಲ ಆರ್‌ ಎನ್ ರವಿ ಅವರು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಸಂಪರ್ಕಿಸದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ.

ರಾಜ್ಯಪಾಲ ಆರ್‌ ಎನ್ ರವಿ ಅವರ ಏಕಪಕ್ಷೀಯ ನಿರ್ಧಾರದಿಂದ ತಮಿಳುನಾಡಿನ ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜೂನ್‌ 14ರಂದು ಉದ್ಯೋಗಕ್ಕಾಗಿ ಲಂಚ ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ್ದರು. ಪ್ರಸ್ತುತ ಜೈಲು ಸೇರಿರುವ ಮತ್ತು ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಬಾಲಾಜಿ ಅವರನ್ನು ಸ್ಟಾಲಿನ್ ಅವರು ಖಾತೆರಹಿತ ಸಚಿವರಾಗಿ ಉಳಿಸಿಕೊಂಡಿದ್ದರು. ಇದೀಗ ರಾಜ್ಯಪಾಲರು ಏಕಪಕ್ಷೀಯ ಕ್ರಮದಿಂದ ಸಚಿವ ಸ್ಥಾನದಿಂದ ವಜಾಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಚಿವ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಲಂಚ ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಮತ್ತು ಕಾನೂನು ಮತ್ತು ನ್ಯಾಯದ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದ್ದಾರೆ” ಎಂದು ರಾಜ್ಯಪಾಲರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ರಾಜ್ಯಪಾಲ ಆರ್‌ ಎನ್ ರವಿ ಏಕಪಕ್ಷೀಯ ನಿರ್ಧಾರದಿಂದ ಆಕ್ರೋಶಗೊಂಡಿರುವ ತಮಿಳುನಾಡು ಸರ್ಕಾರ ಈ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಮಣಿಪುರ | ಸಂತ್ರಸ್ತ ಪರಿಹಾರ ಶಿಬಿರದಲ್ಲಿ ಮಕ್ಕಳೊಂದಿಗೆ ಆಹಾರ ಸೇವಿಸಿದ ರಾಹುಲ್‌ ಗಾಂಧಿ

ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟು ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಾಜಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ.

ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಬಂಧವು ಹಲವು ತಿಂಗಳುಗಳಿಂದ ಉದ್ವಿಗ್ನಗೊಂಡಿದೆ. ಸರ್ಕಾರದ ಹಲವಾರು ವಿಷಯಗಳ ಬಗ್ಗೆ ರಾಜ್ಯಪಾಲರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಖ್ಯವಾಗಿ, ರಾಜ್ಯ ವಿಧಾನಸಭೆಯು ಅಂಗೀಕರಿಸಿದ ಶಾಸನಕ್ಕೆ ರಾಜ್ಯಪಾಲರು ಒಪ್ಪಿಗೆ ನಿರಾಕರಿಸಿದರು. ರಾಜ್ಯಪಾಲರ ನಿರ್ಧಾರದ ಬಗ್ಗೆ ಡಿಎಂಕೆ ಕಳೆದ ವರ್ಷ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ಸಲ್ಲಿಸಿತ್ತು.

ಪಶ್ಚಿಮ ಬಂಗಾಳ, ತೆಲಂಗಾಣ, ಕೇರಳ, ನವದೆಹಲಿ ಸೇರಿದಂತೆ ಪ್ರತಿಪಕ್ಷಗಳು ಆಳ್ವಿಕೆ ನಡೆಸುವ ಇತರ ರಾಜ್ಯಗಳಲ್ಲಿ ಇದೇ ರೀತಿಯ ಘರ್ಷಣೆಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ, ರಾಜ್ಯಪಾಲರು ಅಥವಾ ಲೆಫ್ಟಿನೆಂಟ್ ಗವರ್ನರ್‌ಗಳು ಪಕ್ಷಪಾತದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಆಡಳಿತ ಪಕ್ಷಗಳು ಆರೋಪಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...