ತಮಿಳುನಾಡು ಕಳ್ಳಭಟ್ಟಿ ಸಾರಾಯಿ ದುರಂತ ಅಣ್ಣಾಮಲೈ ಪಿತೂರಿ: ಡಿಎಂಕೆ ನಾಯಕ ಆರೋಪ

Date:

ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಡೆದ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಸಾವಿಗೆ ಬಿಜೆಪಿಯೇ ಹೊಣೆ, ಇದು ಅಣ್ಣಾಮಲೈ ಪಿತೂರಿ ಎಂದು ಡಿಎಂಕೆ ನಾಯಕ ಆರೋಪಿಸಿದ್ದಾರೆ.

“ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯವಾದ ಪುದುಚೇರಿಯಿಂದ ಪಡೆಯಲಾಗಿದೆ. ಘಟನೆಯು ಅಣ್ಣಾಮಲೈ ಅವರ ಯೋಜಿತ ಪಿತೂರಿ” ಎಂದು ಪತ್ರಿಕಾಗೋಷ್ಠಿಯಲ್ಲಿ ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್‌ಎಸ್ ಭಾರತಿ ದೂರಿದ್ದಾರೆ.

ಜೂನ್ 18ರಂದು ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಜನರು ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್‌ಎಸ್ ಭಾರತಿ ಈ ಘಟನೆಗೆ ಬಿಜೆಪಿಯ ತಮಿಳುನಾಡು ಅಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ದೂಷಿಸಿದ್ದಾರೆ. ಇನ್ನು ಕಳ್ಳಭಟ್ಟಿ ಸಾರಾಯಿ ದುರಂತ ನಡೆದ ಕಾರಣ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜೀನಾಮೆ ನೀಡಬೇಕು ಎಂದು ಅಣ್ಣಾಮಲೈ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ?  ತಮಿಳುನಾಡು| ಕಳ್ಳಭಟ್ಟಿ ಸಾರಾಯಿ ದುರಂತ; ಮೃತರ ಸಂಖ್ಯೆ 49ಕ್ಕೆ ಏರಿಕೆ

ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ಅಣ್ಣಾಮಲೈ, “ಪ್ರಸ್ತುತ ನಡೆದ ಘಟನೆಯನ್ನು ನೋಡಿದಾಗ ಎಂಕೆ ಸ್ಟಾಲಿನ್ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬೇಕೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಡಿಎಂಕೆ ನಾಯಕ ಆರ್‌ಎಸ್ ಭಾರತಿ, “ರಾಜೀನಾಮೆ ನೀಡಬೇಕಾಗಿರುವುದು ಅವರ (ಬಿಜೆಪಿ) ಸಚಿವರು ಮತ್ತು ಪುದುಚೇರಿಯ ಮುಖ್ಯಮಂತ್ರಿಗಳು. ಯಾಕೆಂದರೆ ಕಳ್ಳಭಟ್ಟಿ ತಯಾರಿಸಲು ಕಚ್ಚಾ ಸಾಮಗ್ರಿಗಳನ್ನು ಪುದುಚೇರಿಯಿಂದ ತರಲಾಗಿದೆ ಎಂದು ಪೊಲೀಸರು ನಮಗೆ ಹೇಳುತ್ತಿದ್ದಾರೆ” ಎಂದು ಹೇಳಿದರು.

ಹಾಗೆಯೇ, “ಈ ಸಂಪೂರ್ಣ ಘಟನೆಗೆ ಬಿಜೆಪಿ ಹೊಣೆ. ಅವರೇ ಇದನ್ನು ಮಾಡಿಸಿರುವುದು. ಇದು ಅಣ್ಣಾಮಲೈ ಅವರ ಯೋಜಿತ ಷಡ್ಯಂತ್ರ ಎಂದು ನಾನು ಹೇಳುತ್ತೇವೆ. ಇದು ವಿಕ್ರವಾಂಡಿ ಚುನಾವಣೆಗೆ ಸಂಬಂಧಿಸಿದೆ. ಚುನಾವಣೆಗೂ ಮುನ್ನ ಇದನ್ನು ಮಾಡುತ್ತಿದ್ದಾರೆ ಎಂಬ ಅನುಮಾನವಿದೆ” ಎಂದು ಶಂಕೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ತಮಿಳುನಾಡು| ಕಳ್ಳಭಟ್ಟಿ ಸಾರಾಯಿ ಸೇವಿಸಿ 29 ಮಂದಿ ಸಾವು

“ಡಾರ್ಜಿಲಿಂಗ್ ರೈಲು ಅಪಘಾತದ ನಂತರ ರೈಲ್ವೇ ಸಚಿವರು ರಾಜೀನಾಮೆ ನೀಡಿದ್ದಾರಾ? ನೀಟ್‌ ವಿಚಾರದಲ್ಲಿ ಕೇಂದ್ರ ಸಚಿವರು ರಾಜೀನಾಮೆ ನೀಡಿದ್ದಾರೆಯೇ? 2009ರಲ್ಲಿ 137 ಜನರು ಅಕ್ರಮ ಮದ್ಯ ಸೇವಿಸಿ ಸತ್ತಾಗ ನರೇಂದ್ರ ಮೋದಿ ರಾಜೀನಾಮೆ ನೀಡಿದ್ದಾರಾ” ಎಂದು ಆರ್‌ಎಸ್ ಭಾರತಿ ಪ್ರಶ್ನಿಸಿದರು.

ಕಲ್ಲಕುರಿಚಿ ಕಳ್ಳಭಟ್ಟಿ ದುರಂತ

ಜೂನ್ 18ರಂದು, ಕಲ್ಲಕುರಿಚಿ ಜಿಲ್ಲೆಯ ಕರುಣಾಪುರಂನ ದಿನಗೂಲಿ ಕಾರ್ಮಿಕರು, ಅನೇಕ ಜನರು ಪ್ಯಾಕೆಟ್ ಮತ್ತು ಸ್ಯಾಚೆಟ್‌ಗಳಲ್ಲಿ ಮಾರಾಟವಾದ ನಕಲಿ ಮದ್ಯವನ್ನು ಸೇವಿಸಿದ್ದಾರೆ. ರಾತ್ರಿ ವೇಳೆ ಅವರಲ್ಲಿ ಹಲವರಿಗೆ ಅತಿಸಾರ, ವಾಂತಿ, ಹೊಟ್ಟೆ ನೋವು ಮತ್ತು ಕಣ್ಣುಗಳಲ್ಲಿ ಕಿರಿಕಿರಿಯಂತಹ ರೋಗಲಕ್ಷಣಗಳನ್ನು ಕಾಣಿಸಿಕೊಂಡಿದೆ.


ಘಟನೆಯಲ್ಲಿ ಒಟ್ಟು 53 ಮಂದಿ ಸಾವನ್ನಪ್ಪಿದ್ದು, ಹತ್ತಾರು ಮಂದಿ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರಕಾರ, ಮೆಥೆನಾಲ್ ಮಿಶ್ರಿತ ಕಳ್ಳಭಟ್ಟಿ ಸಾರಾಯಿ ಸೇವನೆಯಿಂದ ಸಾವು ಸಂಭವಿಸಿದೆ. ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...