ಶಿಕ್ಷಕ, ಪದವೀಧರ ಕ್ಷೇತ್ರ | ಇಬ್ಬರು ಅಭ್ಯರ್ಥಿಗಳ ಗೆಲುವು; ಮುಂದುವರೆದ ಮತ ಎಣಿಕೆ

Date:

ವಿಧಾನ ಪರಿಷತ್‌ನ ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಇಂದು (ಜೂ.6) ಬಹುತೇಕ ಪೂರ್ಣಗೊಳ್ಳುವ ಹಂತ ತಲುಪಿದ್ದು, ಈಗಾಗಲೇ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಹಾಗೂ ಅಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಜೂ.3ರಂದು ಚುನಾವಣೆ ನಡೆದಿದೆ.

ಶಿಕ್ಷಕರ ಕ್ಷೇತ್ರ ಫಲಿತಾಂಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಶಿಕ್ಷಕರ ಕ್ಷೇತ್ರ: ಮೇಲ್ಮನೆ ಪ್ರವೇಶಿಸಿದ ರಿಯಲ್ ಎಸ್ಟೇಟ್ ಉದ್ಯಮಿ ಕೆ.ವಿವೇಕಾನಂದ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಮೊದಲ ಪ್ರಾಶಸ್ತ್ರದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ. 4,622 ಮತಗಳ ಅಂತರದಿಂದ ಗೆದ್ದಿದ್ದಾರೆ. ಸತತ 5ನೇ ಬಾರಿಗೆ ಆಯ್ಕೆ ಬಯಸಿದ್ದ ಕಾಂಗ್ರೆಸ್‌ನ ಮರಿತಿಬ್ಬೇಗೌಡ ಸೋಲನುಭವಿಸಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್‌ನ ಭೋಜೇಗೌಡಗೆ ಗೆಲುವು

ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌ನ ಎಸ್ ಎಲ್ ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು.

ಮೊದಲ ಪ್ರಾಶಸ್ತ್ರ ಮತಗಳಲ್ಲೇ ಗೆಲುವು ಪಡೆದ ಅವರು, 9,829 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ ಕೆ ಮಂಜುನಾಥ್ ಕುಮಾರ್ 4,562 ಮತ ಪಡೆದರು. 19,479 ಮತಳು ಚಲಾವಣೆ ಆಗಿದ್ದವು. ಅದರಲ್ಲಿ 821 ಮತಗಳು ಅಸಿಂಧುವಾಗಿದ್ದವು.

ಆಗ್ನೇಯ ಶಿಕ್ಷಕರ ಕ್ಷೇತ್ರ: ಕಾಂಗ್ರೆಸ್‌ನ ಶ್ರೀನಿವಾಸ್‌ 457 ಮತಗಳ ಮುನ್ನಡೆ

ಆಗ್ನೇಯ ಶಿಕ್ಷಕರ ಕ್ಷೇತ್ರದ ಎರಡನೇ ಸುತ್ತಿನ ಮತ ಎಣಿಕೆಯ ನಂತರ ಕಾಂಗ್ರೆಸ್‌ನ ಡಿ ಟಿ ಶ್ರೀನಿವಾಸ್ 2,900 ಮತಗಳನ್ನು ಪಡೆದು ಬಿಜೆಪಿಯ ವೈ ಎ ನಾರಾಯಣಸ್ವಾಮಿ ಅವರಿಗಿಂತ 457 ಮತಗಳ ಮುನ್ನಡೆ ಸಾಧಿಸಿದ್ದಾರೆ.

ನಾರಾಯಣಸ್ವಾಮಿ 2,443 ಮತಗಳನ್ನು ಪಡೆದಿದ್ದಾರೆ. 227 ಮತಗಳು ತಿರಸ್ಕೃತವಾಗಿವೆ. ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ 1,270 ಮತಗಳನ್ನು ಪಡೆದಿದ್ದಾರೆ. ಒಟ್ಟು 6,999 ಮತಗಳ ಎಣಿಕೆ ಮುಕ್ತಾಯವಾಗಿದೆ.

ಪದವೀಧರರ ಕ್ಷೇತ್ರ ಫಲಿತಾಂಶ

ನೈರುತ್ಯ ಪದವೀಧರರ ಕ್ಷೇತ್ರ: ಬಿಜೆಪಿಯ ಸರ್ಜಿ ಮುನ್ನಡೆ

ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿಯ ಧನಂಜಯ ಸರ್ಜಿ ಆರಂಭಿಕ ಮುನ್ನಡೆ ಗಳಿಸಿದ್ದಾರೆ.

ಧನಂಜಯ ಸರ್ಜಿ ಅವರು 6,714 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್‌ನ ಆಯನೂರು ಮಂಜುನಾಥ್ 2,434 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ರಘುಪತಿ ಭಟ್ 3,218 ಮತಗಳನ್ನು ತೆಗೆದುಕೊಂಡಿದ್ದಾರೆ.

ಮೊದಲ ಸುತ್ತಿನಲ್ಲಿ 14ಸಾವಿರ ಮತಗಳ ಎಣಿಕೆ ನಡೆದಿದ್ದು, 1,093 ಮತಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಜಿ ಸಿ ಪ್ರಕಾಶ್ ತಿಳಿಸಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರ: ಕಾಂಗ್ರೆಸ್‌ನ ರಾಮೋಜಿಗೌಡರಿಗೆ ಮುನ್ನಡೆ

ಬೆಂಗಳೂರು ಪದವೀಧರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್‌ನ ರಾಮೋಜಿ ಗೌಡ ಅವರು ಬಿಜೆಪಿ ಅಭ್ಯರ್ಥಿ ಅ. ದೇವೇಗೌಡರಿಗಿಂತ 760 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರ: ಪ್ರಗತಿಯಲ್ಲಿ ಮತ ಎಣಿಕೆ

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಗುಲಬರ್ಗಾ ವಿಶ್ವವಿದ್ಯಾಲಯದ ಸಾದ್ದಿ ಹೇಮರಡ್ಡಿ ಮಲ್ಲಮ್ಮ ಅಧ್ಯಯನ ಪೀಠದ ಸಭಾಂಗಣದಲ್ಲಿ ನಡೆಯುತ್ತಿದೆ.

ಮತ ಎಣಿಕೆ ಕಾರ್ಯ ಮಂದಗತಿಯಲ್ಲಿ ಸಾಗಿದ್ದು, ಸಂಜೆ 7ರವರೆಗೂ ಮೊದಲ ಸುತ್ತಿನ ಮತ ಎಣಿಕೆಯ ವಿವರ ಲಭ್ಯವಾಗಿಲ್ಲ. ಬೆಳಿಗ್ಗೆಯೇ ಮತ ಎಣಿಕೆ ಕೇಂದ್ರಕ್ಕೆ ಬಂದಿರುವ ಅಭ್ಯರ್ಥಿಗಳು ಮತ ಎಣಿಕೆ ಮುಗಿಯುವುದಕ್ಕೆ ಕಾಯುತ್ತಿದ್ದಾರೆ.

ಒಟ್ಟು 14 ಮತ ಎಣಿಕೆ ಟೇಬಲ್ ಗಳನ್ನು ವ್ಯವಸ್ಥೆ ಮಾಡಿದ್ದು, ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ, ಸಹಾಯಕ ಚುನಾವಣಾಧಿಕಾರಿಗಳಾದ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಡಾ. ಚಂದ್ರಶೇಖರ್‌ ಪಾಟೀಲ್ ಮತ್ತು ಬಿಜೆಪಿಯಿಂದ ಅಮರನಾಥ್ ಪಾಟೀಲ್ ಸ್ಪರ್ಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...