ಜೆಡಿಯು ಕಚೇರಿಯಲ್ಲಿ ಮೋದಿ ಚಿತ್ರ: ನಿತೀಶ್ ಕುಮಾರ್‌ ಅಣಕಿಸಿದ ತೇಜಸ್ವಿ ಯಾದವ್

Date:

ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಜೆಡಿಯು ಕಚೇರಿಯಲ್ಲಿದ್ದು, ಈ ವಿಚಾರವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬಿಹಾರ ವಿಧಾನಸಭೆ ವಿಪಕ್ಷ ನಾಯಕ ತೇಜಸ್ವಿ ಯಾದವ್ ಅಣಕಿಸಿದ್ದಾರೆ. ಹಾಗೆಯೇ ತೀಶ್ ಕುಮಾರ್ ಅವರಿಗೆ ವಿಶ್ವಾಸಾರ್ಹತೆಯ ಕೊರತೆ ಇದ್ದು, ಬಿಹಾರವನ್ನು ಇನ್ನು ಮುಂದೆ ನಿಭಾಯಿಸಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.

ಎನ್‌ಡಿಟಿವಿಯ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಯಾದವ್, “ನಿತೀಶ್ ಕುಮಾರ್ ಅವರಿಗೆ ಈಗ ಪ್ರಜ್ಞೆಯಿಲ್ಲ. ಹಾಗಾಗಿ ಈ ಹಿಂದೆ ಎಂದೂ ಕಾಣದ ಮೋದಿಜಿಯವರ ಫೋಟೋ ಈಗ ಜೆಡಿಯು ಕಚೇರಿಯಲ್ಲಿ ಕಾಣಿಸಿದೆ. ಇದೇ ಸಿಎಂ ಅವರು ಮೋದಿಯವರ ಕೈಕುಲುಕುವ ವಿಚಾರದಲ್ಲಿ ವಿವಾದದಲ್ಲಿದ್ದರು. ಈಗ ಅವರ ಕಚೇರಿಯಲ್ಲಿ ಮೋದಿ ಅವರ ಫೋಟೋ ಇದೆ” ಎಂದು ಯಾದವ್ ಲೇವಡಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಪ್ರತಿಪಕ್ಷಗಳಲ್ಲಿ ಪ್ರಧಾನಿ ಮೋದಿಗಿಂತ ಅನುಭವಿ ನಾಯಕರಿದ್ದಾರೆ: ತೇಜಸ್ವಿ ಯಾದವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ನಿತೀಶ್ ಕುಮಾರ್ ಅವರು ನರೇಂದ್ರ ಮೋದಿ ಅವರ ಪಾದಕ್ಕೆ ನಮಸ್ಕರಿಸಲು ಮುಂದಾಗಿದ್ದರು. ಈ ವೇಳೆ ಪ್ರಧಾನಿ ನಿತೀಶ್ ಅವರ ಕೈ ಹಿಡಿದು ಹಸ್ತಲಾಘವ ಮಾಡಿದ್ದರು. ನಿತೀಶ್ ಅವರು ಮೋದಿ ಕಾಲಿಗೆ ನಮಸ್ಕಾರ ಮಾಡಲು ಹೋಗಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಿತೀಶ್ ಟ್ರೋಲ್‌ಗೆ ಒಳಗಾಗಿದ್ದರು.

ಬೇರೆ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಾ, ಮೈತ್ರಿ ಮುರಿಯುತ್ತಾ ಬಂದಿರುವ ನಿತೀಶ್ ಕುಮಾರ್ ಅವರನ್ನು ಇದೇ ಸಂದರ್ಭದಲ್ಲಿ ಯಾದವ್ ಟೀಕಿಸಿದರು. “ಮುಖ್ಯಮಂತ್ರಿಗಳು ನನ್ನನ್ನು ಕೆಲವರು ಒಂದೆಡೆ ಕರೆದೊಯ್ದು, ಮತ್ತೆ ಅವರೇ ಹಿಂದೆ ಕರೆತಂದರು ಎನ್ನುತ್ತಾರೆ. ಹಾಗಾದರೆ ಅವರು ಯಾವುದನ್ನೂ ಅವರ ಒಪ್ಪಿಗೆಯಿಂದ ಮಾಡಿಲ್ಲವೇ” ಎಂದು ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...