ತೆಲಂಗಾಣ | 12 ಬಿಆರ್‌ಎಸ್ ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆ

Date:

ಜುಲೈ ಎರಡನೇ ವಾರದಲ್ಲಿ ತೆಲಂಗಾಣ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಸಿದ್ದತೆ ನಡೆಸುತ್ತಿದೆ. ಇದಕ್ಕೂ ಮುನ್ನ 12 ಬಿಆರ್‌ಎಸ್‌ ಶಾಸಕರು ಕಾಂಗ್ರೆಸ್‌ಗೆ ಪಕ್ಷಾಂತರವಾಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಗೂ ಮುನ್ನ ಮೂವರು ಬಿಆರ್‌ಎಸ್‌ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದ ಆಡಳಿತಾರೂಢ ಕಾಂಗ್ರೆಸ್‌, ಇದೀಗ 12 ಶಾಸಕರ ಜೊತೆ ಚರ್ಚೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದ 17 ಸ್ಥಾನಗಳ ಪೈಕಿ ಎಂಟು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಯಿಂದ ಬೆದರಿಕೆ ಇದೆ. ಅವರು ತೆಲಂಗಾಣದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಪತನಗೊಳಿಸುವ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಆರೋಪಿಸಿದ್ದಾರೆ. ಅಲ್ಲದೆ, ಮಾಜಿ ಸಚಿವರು ಸೇರಿದಂತೆ ಬಿಆರ್‌ಎಸ್‌ನ ಕೆಲವು ಶಾಸಕರು ತಮ್ಮ ವ್ಯಾಪಾರ-ವಹಿವಾಟುಗಳನ್ನು ರಕ್ಷಿಸಲು ಮತ್ತು ಕೇಂದ್ರೀಯ ಸಂಸ್ಥೆಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಬಿಜೆಪಿಗೆ ಸೇರುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ. ಈ ನಡುವೆ, ಕಾಂಗ್ರೆಸ್‌ ಆಪರೇಷನ್ ಆಕರ್ಷ್‌ಅನ್ನು ಆರಂಭಿಸಿದೆ ಎನ್ನಲಾಗಿದೆ. ದೆ.

ಬಿಆರ್‌ಎಸ್‌ ವರಿಷ್ಠ ಕೆ ಚಂದ್ರಶೇಖರ್ ರಾವ್ ಅವರ ನಿರ್ದೇಶನದಂತೆ ಪ್ರಮುಖ ಬಿಆರ್‌ಎಸ್ ನಾಯಕರು ತಮ್ಮ ಶಾಸಕರ ನಿವಾಸಗಳಿಗೆ ಭೇಟಿ ನೀಡಿ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಈವರೆಗೆ, ನಾಲ್ವರು ಶಾಸಕರೊಂದಿಗೆ ಮಾತನಾಡಿದ್ದು, ಮುಂದಿನ ಚುನಾವಣೆಯಲ್ಲಿ ಬಿಆರ್‌ಎಸ್ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಶಾಸಕರು ಕಳೆದ 10 ವರ್ಷಗಳಿಂದ ತಮ್ಮ ಕ್ಷೇತ್ರಗಳಿಗೆ ಸರ್ಕಾರದಿಂದ ಯಾವುದೇ ಹಣಕಾಸಿನ ನೆರವು ಪಡೆದಿಲ್ಲ ಎಂದು ಪ್ರತಿಕ್ರಿಯಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಸಿಆರ್ ಕ್ಯಾಬಿನೆಟ್‌ನಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದ ಹಿರಿಯ ಬಿಆರ್‌ಎಸ್ ಶಾಸಕರೊಬ್ಬರು, ಪಕ್ಷದ ನಾಯಕತ್ವವು ಅವರ ಬೆಂಬಲಿಗರಿಗೆ ಯಾವುದೇ ನೆರವು ನೀಡಿಲ್ಲ. ಹೀಗಾಗಿ, ಕಾಂಗ್ರೆಸ್‌ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಸಿಎಂ ಎ ರೇವಂತ್ ರೆಡ್ಡಿ ಅವರ ಆಪ್ತರಾಗಿರುವ ಪಕ್ಷದ ಮುಖಂಡರೊಬ್ಬರು ಬಿಆರ್‌ಎಸ್ ಶಾಸಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಆರ್‌ಎಸ್‌ 39 ಸ್ಥಾನಗಳನ್ನು ಗೆದ್ದಿತ್ತು. ಬಿಆರ್‌ಎಸ್ ಶಾಸಕರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಉಪಚುನಾವಣೆಯಲ್ಲಿ ಆ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ಪಾಲಿಗೆ ಪಡೆದುಕೊಂಡಿತು. ಮೂವರು ಶಾಸಕರು ಈಗಾಗಲೇ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರೆ, ಇನ್ನೂ 12 ಮಂದಿ ಶೀಘ್ರದಲ್ಲೇ ಸೇರುವ ಸಾಧ್ಯತೆಯಿದೆ. ಪಕ್ಷಾಂತರಿಗಳ ಸಂಖ್ಯೆ ಒಟ್ಟು 15ಕ್ಕೆ ಏರಿಕೆಯಾಗಲಿದೆ. ಪಕ್ಷಾಂತರ ನಿಷೇಧ ಕಾಯ್ದೆಯ ನಿಯಮಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ಇನ್ನೂ 10 ಬಿಆರ್‌ಎಸ್‌ ಶಾಸಕರನ್ನು ಪಕ್ಷಕ್ಕೆ ಕರೆತರಬೇಕಾಗುತ್ತದೆ. ಅದನ್ನೂ ಮಾಡಲು ಪಕ್ಷವು ಚಿಂತಿಸಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...