ತೆಲಂಗಾಣ | 35 ವರ್ಷಗಳಲ್ಲಿ 237 ಬಾರಿ ಸ್ಪರ್ಧಿಸಿ ದಾಖಲೆ ಬರೆದ ಅಭ್ಯರ್ಥಿ

Date:

ತೆಲಂಗಾಣದಲ್ಲಿ ನವೆಂಬರ್ 30ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಎಲ್ಲ ಪಕ್ಷಗಳು ಚುನಾವಣೆ ಗೆಲ್ಲಲು ಭಾರೀ ಪ್ರಚಾರ ನಡೆಸುತ್ತಿವೆ. ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಮತದಾರರ ಮನವೊಲಿಸುವ ಯತ್ನದಲ್ಲಿದ್ದಾರೆ. ಇದೆಲ್ಲದರ ನಡುವೆ, ಪಕ್ಷೇತರ ಅಭ್ಯರ್ಥಿಯೊಬ್ಬರು ತಮ್ಮ ನಾಮಪತ್ರದಿಂದಲೇ ಗಮನ ಸೆಳೆದಿದ್ದಾರೆ.

ತೆಲಂಗಾಣದ ಗಜ್ವೇಲ್ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪದ್ಮರಾಜನ್ ಎಂಬವರು ಕಳೆದ 35 ವರ್ಷಗಳಲ್ಲಿ ಬರೋಬ್ಬರಿ 236 ಬಾರಿ ನಾಮಪತ್ರ ಸಲ್ಲಿಸಿ, ರಾಜಕೀಯ ಇತಿಹಾಸದಲ್ಲಿ ದಾಖಲೆ ಬರೆದಿದ್ದಾರೆ. ಇದೀಗ 237ನೇ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ನಾಮಪತ್ರ ಸಲ್ಲಿಸಿದ್ದಾರೆ. ಇದೀಗ, ಗಜ್ವೇಲ್ ಕ್ಷೇತ್ರದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಿರುದ್ಧ ಸ್ಪರ್ಧಿಸಿದ್ದಾರೆ.

ಅಂದಹಾಗೆ, ಅವರ ಚುನಾವಣಾ ಸ್ಪರ್ಧೆ ಕೇವಲ ಒಂದು ರಾಜ್ಯ ಸೀಮಿತವಾಗಿಲ್ಲ. ತಮಿಳುನಾಡು, ಕರ್ನಾಟಕ, ಕೇರಳ, ಉತ್ತರ ಪ್ರದೇಶ ಹಾಗೂ ದೆಹಲಿ ರಾಜ್ಯಗಳಲ್ಲಿ ನಡೆದ ಸ್ಥಳೀಯ ಚುನಾವಣೆಗಳಿಂದ ಹಿಡಿದ ವಿಧಾನಸಭೆ, ಲೋಕಸಭೆ ಚುನಾವಣೆವರೆಗೆ ಎಲ್ಲ ಚುನಾವಣೆಗಳಲ್ಲೂ ಸ್ಪರ್ಧಿಸಿದ್ದಾರೆ. ನಾನಾ ರಾಜ್ಯಗಳಲ್ಲಿ ನಾನಾ ಚುನಾವಣೆಗಳಲ್ಲಿ ಸ್ಪರ್ಧಿಸಿರುವ ಅವರು 237 ಬಾರಿ ಚುನಾವಣೆಯಲ್ಲಿ ಸ್ಪರ್ಧೆ ನಡೆಸಿದ್ದಾರೆ. ಆದರೆ, ಅವರ ದುರದೃಷ್ಟಕ್ಕೆ ಒಮ್ಮೆಯೂ ಗೆಲುವು ಸಾಧಿಸಲಾಗಿಲ್ಲ. ಅಲ್ಲದೆ, ಈ ಎಲ್ಲ ಚುನಾವಣೆಗಳಲ್ಲಿ ಒಟ್ಟು 1 ಕೋಟಿ ರೂ. ಠೇವಣಿ ಕಳೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೈರ್ ರಿಪೇರಿ ಅಂಗಡಿ ನಡೆಸುತ್ತಿರುವ, ಹೋಮಿಯೋಪತಿ ವೈದ್ಯರೂ ಆಗಿರುವ ಪದ್ಮರಾಜನ್‌ ಅವರು 1988ರಲ್ಲಿ ಮೊದಲ ಬಾರಿಗೆ ತಮಿಳುನಾಡಿದ ಮೆಟ್ಟೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅಂದಿನಿಂದ ನಿರಂತರವಾಗಿ ಹಲವಾರು ಚುನಾವಣೆಗಳಲ್ಲಿ ಸ್ಪರ್ದಿಸುತ್ತಲೇ ಇದ್ದಾರೆ. ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪಿವಿ ನರಸಿಂಹರಾವ್ ವಿರುದ್ಧವೂ ಸ್ಪರ್ಧಿಸಿದ್ದಾಗಿ ಹೇಳಿಕೊಂಡಿದ್ದಾರೆ. ಪದ್ಮರಾಜನ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇರಳದ ವಯನಾಡ್‌ನಲ್ಲಿ ಸ್ಪರ್ಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...