ತೆಲಂಗಾಣ ಚುನಾವಣೆ | ಬೆಳಗ್ಗೆ 11ರವರೆಗೆ ಶೇ.27ರಷ್ಟು ಹಕ್ಕು ಚಲಾಯಿಸಿದ ಮತದಾರರು

Date:

ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಘಡ, ಮಿಝೋರಾಂ, ರಾಜಸ್ಥಾನ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ಇಂದು ತೆಲಂಗಾಣದಲ್ಲಿ ಅಂತಿಮ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಬೆಳಗ್ಗೆ 11ರವರೆಗೆ ನಡೆದ ಮತದಾನ ಪ್ರಕ್ರಿಯೆಯ ಪೈಕಿ ಶೇ.27ರಷ್ಟು ಮತದಾನ ನಡೆದಿರುವುದಾಗಿ ವರದಿಯಾಗಿದೆ.

ತೆಲಂಗಾಣದ 119 ಸ್ಥಾನಗಳ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ 2,290 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು 3.26 ಕೋಟಿಗೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ.

ಚುನಾವಣಾ ಆಯೋಗವು 35,655 ಮತಗಟ್ಟೆಗಳಲ್ಲಿ 1.85 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಿದ್ದು, 22,000 ‘ಮೈಕ್ರೋ ಅಬ್ಸರ್ವರ್‌’ಗಳು ಸಂಪೂರ್ಣ ಮತದಾನ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಲಂಗಾಣದಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಒಟ್ಟು 45,000 ಸಿಬ್ಬಂದಿ, ಇತರ ಇಲಾಖೆಗಳ 3,000 ಸಿಬ್ಬಂದಿ, ತೆಲಂಗಾಣ ರಾಜ್ಯ ವಿಶೇಷ ಪೊಲೀಸ್ (ಟಿಎಸ್‌ಎಸ್‌ಪಿ) 50 ಕಂಪನಿಗಳು ಮತ್ತು ಕೇಂದ್ರ ಅರೆಸೇನಾ ಪಡೆಗಳ 375 ಕಂಪನಿಗಳನ್ನು ನಿಯೋಜಿಸಲಾಗಿದೆ. ನೆರೆಯ ರಾಜ್ಯಗಳ 23,500 ಗೃಹರಕ್ಷಕರೂ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ವಿಕಾಸ್ ರಾಜ್ ತಿಳಿಸಿದ್ದಾರೆ. ಮಾವೋವಾದಿ ಪೀಡಿತ ಜಿಲ್ಲೆಗಳ 13 ಕ್ಷೇತ್ರಗಳಲ್ಲಿ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಘಡ, ಮಿಝೋರಾಂಗಳಲ್ಲಿ ಈಗಾಗಲೇ ನ.7ರಿಂದ ನವೆಂಬರ್ 25ರ ಒಳಗೆ ಮತದಾನ ಮುಕ್ತಾಯವಾಗಿದೆ.

telangana 1

ತೆಲಂಗಾಣದಲ್ಲಿ ಸದ್ಯ ಕೆ ಸಿ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಪಕ್ಷ ಅಧಿಕಾರದಲ್ಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮೂರನೇ ಬಾರಿ ಅಧಿಕಾರಕ್ಕೇರಲಿದೆ. ಆದರೆ ಈ ಬಾರಿ ಕೆಸಿಆರ್‌ಗೆ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಲಿದೆ ಎಂದು ಚುನಾವಣಾ ವಿಶ್ಲೇಷಕರು ಅಭಿಪ್ರಾಯಿಸಿದ್ದಾರೆ.

ತೆಲುಗು ಚಿತ್ರರಂಗದ ಪ್ರಮುಖರಿಂದ ಮತದಾನ

ತೆಲುಗು ಚಿತ್ರರಂಗದ ಖ್ಯಾತ ನಟರಾದ ಅಲ್ಲೂ ಅರ್ಜುನ್‌, ಜೂನಿಯರ್‌ ಎನ್‌ಟಿಆರ್‌ ಹಾಗೂ ಚಿರಂಜೀವಿ, ನಾಗಚೈತನ್ಯ ಹೈದರಾಬಾದ್‌ನಲ್ಲಿ ತಮ್ಮ ಕುಟುಂಬಗಳೊಂದಿಗೆ ಬಂದು ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬೆಳ್ಳಂಬೆಳಗ್ಗೆಯೇ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಲ್ಲದೇ, ಪ್ರತಿಯೊಬ್ಬರೂ ಕೂಡ ತಮ್ಮ ಹಕ್ಕನ್ನು ಚಲಾಯಿಸಿ ಎಂದು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...