ತೆಲಂಗಾಣ: ಅಮಾನತು ರದ್ದುಗೊಳಿಸಿ ವಿವಾದಿತ ಶಾಸಕ ರಾಜಾ ಸಿಂಗ್‌ಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

Date:

ತೆಲಂಗಾಣದ ವಿವಾದಿತ ಶಾಸಕ ಟಿ ರಾಜಾ ಸಿಂಗ್ ಅವರ ಅಮಾನತು ರದ್ದುಗೊಳಿಸಿರುವ ಬಿಜೆಪಿ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೋಶಾಮಹಲ್ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸುವುದಾಗಿ ಭಾನುವಾರ ಘೋಷಿಸಿದೆ.

ಪ್ರವಾದಿ ಮುಹಮ್ಮದ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ರಾಜಾ ಸಿಂಗ್ ಅವರನ್ನು 2022ರ ಆಗಸ್ಟ್‌ನಲ್ಲಿ ಅಮಾನತು ಮಾಡಲಾಗಿತ್ತು. ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿಯವರ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ರಾಜಾ ಸಿಂಗ್ ಪುನರಾವರ್ತಿಸಿದ್ದರು. ಹೈದರಾಬಾದ್‌ನಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳು ಭುಗಿಲೆದ್ದ ನಂತರ ಎಚ್ಚೆತ್ತುಕೊಂಡ ಬಿಜೆಪಿ, ಶಾಸಕ ರಾಜಾ ಸಿಂಗ್ ವಿರುದ್ಧ ಕ್ರಮ ಜರುಗಿಸಿತ್ತು.

ನೂಪುರ್‌ ಶರ್ಮಾ ನೀಡಿದ ಹೇಳಿಕೆ ಅರಬ್‌ ರಾಷ್ಟ್ರಗಳಲ್ಲಿ ಭಾರೀ ಸದ್ದು ಮಾಡಿತ್ತು. ಭಾರತದೊಂದಿಗಿನ ವ್ಯಾಪಾರ ವಹಿವಾಟುಗಳಿಗೆ ಮಾರಕವಾಗುವಂತಹ ಬೆಳವಣಿಗೆಗಳು ಆಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಕ್ಷದ ಶೋಕಾಸ್ ನೋಟಿಸ್‌ಗೆ ನೀಡಿದ ಉತ್ತರದ ಆಧಾರದ ಮೇಲೆ ರಾಜಾ ಸಿಂಗ್ ಅವರ ಅಮಾನತು ರದ್ದುಗೊಳಿಸಲಾಗಿದೆ” ಎಂದು ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ತಿಳಿಸಿದ್ದಾರೆ.

“ಪಕ್ಷಕ್ಕೆ ಅಗೌರವ ತರುವ ಯಾವುದೇ ಕೆಲಸವನ್ನು ನಾನು ಮಾಡುವುದಿಲ್ಲ. ಲೋಕಸಭೆ ಸಂಸದ ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್-ಮುಸ್ಲಿಮೀನ್ ಪಕ್ಷವನ್ನು ಟೀಕಿಸಿದಾಗಲೆಲ್ಲ ನಾನು ಮುಸ್ಲಿಮರನ್ನು ಟೀಕಿಸುತ್ತಿದ್ದೇನೆಂದು ಭಾವಿಸಲಾಗುತ್ತಿದೆ”  ಎಂದು ರಾಜಾ ತಮ್ಮ ಉತ್ತರದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಪಕ್ಷದಿಂದ ಅಮಾನತುಗೊಳಿಸಿದ ನಂತರವೂ ರಾಜಾ ಸಿಂಗ್‌ ಮುಸ್ಲಿಮರ ವಿರುದ್ಧ ಹಲವಾರು ಬಾರಿ ದ್ವೇಷದ ಭಾಷಣಗಳನ್ನು ಮಾಡಿರುವುದನ್ನು ಕಾಣಬಹುದು.

“ಬುರ್ಖಾ ಧರಿಸುವ ಮಹಿಳೆಯರೊಂದಿಗೆ ಸ್ನೇಹ ಬೆಳೆಸಬೇಡಿ” ಎಂದು ಹಿಂದೂ ಮಹಿಳೆಯರನ್ನು ಉದ್ದೇಶಿಸಿ ಈ ವರ್ಷದ ಆರಂಭದಲ್ಲಿ ರಾಜಾ ಹೇಳಿಕೆ ನೀಡಿದ್ದರು.

“ಹಣೆಯ ಮೇಲೆ ತಿಲಕವನ್ನು ಹೊಂದಿರುವವರು ನನ್ನ ಸಹೋದರರು. ತಿಲಕವನ್ನು ಧರಿಸುವ ಜನರೊಂದಿಗೆ ಮಾತ್ರ ನಾನು ಸ್ನೇಹ ಬೆಳೆಸುತ್ತೇನೆ. ನಮ್ಮ ಸಹೋದರಿಯರೇ, ಬುರ್ಖಾ ಧರಿಸಿದ ಮಹಿಳೆಯರೊಂದಿಗೆ ಸ್ನೇಹ ಬೆಳೆಸಬೇಡಿ” ಎಂದು ಪ್ರಚೋದಿಸಿದ್ದರು.

ಮುಸ್ಲಿಂ ಪುರುಷರಷ್ಟೇ ಅಲ್ಲ, ಮಹಿಳೆಯರಿಂದಲೂ ಹಿಂದೂಗಳು ಅಪಾಯವನ್ನು ಎದುರಿಸುತ್ತಿದ್ದಾರೆ. ಒಂದು ಕಾಲದಲ್ಲಿ ನಾವು ಅಫ್ತಾಬ್‌ನಿಂದ ಅಪಾಯವನ್ನು ಎದುರಿಸಿದ್ದೇವೆ, ಆದರೆ ಈಗ ಆಯೇಷಾರಿಂದಲೂ ಅಪಾಯವಿದೆ. ಅಫ್ತಾಬ್‌ಗೆ [ಹಿಂದೂ ಮಹಿಳೆಯರನ್ನು] ಪರಿಚಯಿಸಿದ್ದು ಇದೇ ಆಯೇಷಾ ಎಂದಿದ್ದರು.

ಮಾರ್ಚ್‌ ತಿಂಗಳು ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಾಜಾ ಸಿಂಗ್  ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರು. 2026ರ ವೇಳೆಗೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲಾಗುವುದು ಎಂದು ತಿಳಿಸಿದ್ದರು.

ಮಹಾರಾಷ್ಟ್ರದ ಔರಂಗಾಬಾದ್ ನಗರಕ್ಕೆ ಛತ್ರಪತಿ ಸಂಭಾಜಿನಗರ ಎಂದು ಮರುನಾಮಕರಣ ಮಾಡುವುದನ್ನು ಬೆಂಬಲಿಸಲು ಆಯೋಜಿಸಲಾಗಿದ್ದ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಜಾ ಸಿಂಗ್‌, “ಲವ್ ಜಿಹಾದ್ ಪ್ರಕರಣಗಳು ಕಂಡುಬಂದರೆ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದರು.

ಭಾರತದಲ್ಲಿ 100 ಕೋಟಿ ಹಿಂದೂಗಳಿದ್ದಾರೆ. ಹಿಂದೂಗಳು ಜಿಹಾದ್ ಮಾಡಲು ಪ್ರಾರಂಭಿಸಿದರೆ, ನಿಮಗೆ [ಮುಸ್ಲಿಮರಿಗೆ] ಮದುವೆಯಾಗಲು ಹೆಣ್ಣುಗಳು ಸಿಗುವುದಿಲ್ಲ ಎಂದು ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದರು.

ಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಗೆ ನಿಂದನೀಯ ಪದಗಳನ್ನು ಬಳಸಿದ್ದರು. ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕರನ್ನು ನಾಯಿಗಳಿಗೆ ಹೋಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...