ಬಿಜೆಪಿ ಸಂಸದನಿಂದ ಅವಹೇಳನ: ಸ್ಪೀಕರ್‌ ವಿರುದ್ಧ ಸಿಡಿದೆದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

Date:

  • ಮರ್ಯಾದಾ ಪುರುಷ ಸ್ಪೀಕರ್ ಅವರೇ ಏನು ಕ್ರಮ ಕೈಗೊಳ್ಳುತ್ತೀರಿ? ಬಹಿರಂಗವಾಗಿಯೇ ಪ್ರಶ್ನಿಸಿದ ಸಂಸದೆ
  • ಸಂಸದ ದಾನಿಶ್ ಅಲಿಯನ್ನು ‘ಭಯೋತ್ಪಾದಕ’ ಎಂದು ಹೀಯಾಳಿಸಿದ್ದ ಬಿಜೆಪಿ ಸಂಸದ ರಮೇಶ್ ಬಿಧುರಿ

ಬಿಎಸ್‌ಪಿಯ ಮುಸ್ಲಿಂ ಸಂಸದ ದಾನಿಶ್ ಅಲಿಯನ್ನು ಬಿಜೆಪಿಯ ಸಂಸದ ರಮೇಶ್ ಬಿಧುರಿ ಸಂಸತ್ತಿನ ವಿಶೇಷ ಅಧಿವೇಶನದಲ್ಲೇ ‘ಭಯೋತ್ಪಾದಕ’ ಎಂದು ಕರೆದು, ಹೀಯಾಳಿಸಿರುವ ಘಟನೆ ದೇಶಾದ್ಯಂತ ವಿವಾದ ಎಬ್ಬಿಸಿದೆ.

ರಮೇಶ್ ಬಿಧುರಿಯ ಈ ಹೇಳಿಕೆಯ ಬಗ್ಗೆ ಸ್ಪೀಕರ್‌ ವಿರುದ್ಧ ಸಿಡಿದೆದ್ದಿರುವ ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ, “ಮರ್ಯಾದಾ ಪುರುಷ ಸ್ಪೀಕರ್ ಅವರೇ ಏನು ಕ್ರಮ ಕೈಗೊಳ್ಳುತ್ತೀರಿ?” ಎಂದು ಬಹಿರಂಗವಾಗಿಯೇ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಮರ್ಯಾದಾ ಪುರುಷ ಎಂದು ಉಲ್ಲೇಖಿಸಿದ್ದಾರೆ. ಇದಕ್ಕೆ ಸಮರ್ಥನೆ ನೀಡಿರುವ ಮಹುವಾ ಮೊಯಿತ್ರಾ, “ನಿಮ್ಮನ್ನು ಈ ರೀತಿ ಕರೆದಿದ್ದಕ್ಕಾಗಿ ನನ್ನ ವಿರುದ್ಧ ಏನು ಬೇಕಾದರೂ ಕ್ರಮ ತೆಗೆದುಕೊಳ್ಳಲಿಕ್ಕೆ ನೀವು ಹಿಂಜರಿಯಬೇಡಿ. ಯಾವುದೇ ಸಮಿತಿಗಳನ್ನು ರಚಿಸಿದರೂ ಅದನ್ನು ಎದುರಿಸಲು ನನಗೆ ಸಂತೋಷವಾಗುತ್ತದೆ. ಆದರೆ, ನಾನು ಇಲ್ಲಿ ಮತ್ತು ಈಗ ನಿಮ್ಮನ್ನು ಕೇಳುತ್ತಿದ್ದೇನೆ, ರಮೇಶ್ ಬಿಧುರಿ ವಿರುದ್ಧ ನೀವು ಯಾವ ಕ್ರಮವನ್ನು ತೆಗೆದುಕೊಳ್ಳುತ್ತಿದ್ದೀರಿ? ಹೇಳಿ” ಎಂದು ನೇರವಾಗಿ ಸವಾಲು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಓಂ ಬಿರ್ಲಾ
Om-Birla

ಈ ನಡುವೆ ಸಂಸದ ದಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ರಮೇಶ್ ಬಿಧುರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ರಮೇಶ್ ಬಿಧುರಿ ಅವರಿಗೆ ಎಚ್ಚರಿಕೆ ನೀಡಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

“ಇಂತಹ ವರ್ತನೆಯನ್ನು ಪುನರಾವರ್ತಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಪೀಕರ್ ಬಿಜೆಪಿ ಸಂಸದನಿಗೆ ಎಚ್ಚರಿಕೆ ನೀಡಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೆ ಕಿಡಿಯಾಗಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ, “ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರದ್ದು ನಿಷ್ಪಕ್ಷಪಾತದ ನಿಜವಾದ ಮಾದರಿ. ರಮೇಶ್ ಬಿಧುರಿಗೆ ಮತ್ತೊಮ್ಮೆ ಹೀಗೆ ಮಾಡಬಾರದೆಂದು ಓಂ ಬಿರ್ಲಾ ಎಚ್ಚರಿಕೆ ಕೊಟ್ಟಿದ್ದಾರಂತೆ. ವಾಹ್, ಆದರೆ, ಬಿಜೆಪಿಯೇತರರಾದ ಅಧೀರ್ ರಂಜನ್ ಚೌಧರಿ & ಸಂಜಯ್‌ ಸಿಂಗ್ ಅವರನ್ನು ಕ್ಷುಲ್ಲಕ ಕಾರಣಕ್ಕೆ ಅಮಾನತು ಮಾಡಲಾಗುತ್ತದೆ‌. ಏನಾಯ್ತು ಸರ್, ಈಗ ಮರ್ಯಾದೆ, ಹಿರಿಮೆ ಎಲ್ಲ ಮರೆತು ಬಿಟ್ರಾ? ನಾಚಿಗೆಯಾಗ್ಬೇಕು” ಎಂದು ಸಂಸತ್‌ನಲ್ಲಿ ಬಿಜೆಪಿಗರ ಪಾಲಿಗೆ ಸಿಂಹಸ್ವಪ್ನವಾಗಿ ಗುರುತಿಸಿಕೊಂಡಿರುವ ಸಂಸದೆ ಮಹುವಾ ಮೊಯಿತ್ರಾ ಈ ಬಾರಿ ಲೋಕಸಭಾ ಸ್ಪೀಕರ್ ವಿರುದ್ಧವೇ ಬಹಿರಂಗವಾಗಿ ಸಿಡಿದೆದ್ದಿದ್ದಾರೆ.

ಬಿಜೆಪಿಯ ದೆಹಲಿ ಸಂಸದನಾಗಿರುವ ರಮೇಶ್ ಬಿಧುರಿ ಅವರು ಲೋಕಸಭೆಯಲ್ಲಿ ತಮ್ಮ ಮಾತಿನ ವೇಳೆ ಸಂಸತ್ತಿನ ಸಹೋದ್ಯೋಗಿ ಬಹುಜನ ಸಮಾಜ ಪಕ್ಷದ ದಾನಿಶ್ ಅಲಿ ಅವರನ್ನು “ಯೇ ಉಗ್ರವಾದಿ, ಯೇ ಆತಂಕ್ವಾದಿ, ಮುಲ್ಲಾ ಆತಂಕವಾದಿ, ಭರ್ವಾ (ವೇಶ್ಯಾವಾಟಿಕೆ ದಂಧೆ ನಡೆಸುವವ) ಮತ್ತು ಕತ್ವಾ (ಮುಂಜಿ ಮಾಡಿಸಿದವ)” ಎಂದು ಹಿಂದಿಯಲ್ಲಿ ಉಲ್ಲೇಖಿಸಿ, ಅವಮಾನಗೈದ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...