ಯಾರಿಗೂ ಅಧಿಕಾರ ಶಾಶ್ವತವಲ್ಲ: ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ಠಾಕ್ರೆ ಸಹೋದರರ ವಾಗ್ದಾಳಿ

Date:

ಸುಮಾರು 20 ವರ್ಷಗಳ ಬಳಿಕ ಮತ್ತೆ ಒಂದಾಗಿರುವ ಠಾಕ್ರೆ ಸಹೋದರರು ಇದೀಗ ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ. ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನಾ ನಾಯಕ ರಾಜ್ ಠಾಕ್ರೆ ದಾದರ್‌ನ ಐಕಾನಿಕ್ ಶಿವಸೇನಾ ಭವನವನ್ನು ಜತೆಯಾಗಿ ಪ್ರವೇಶಿಸಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಯಾರಿಗೂ ಅಧಿಕಾರ ಶಾಶ್ವತವಲ್ಲ ಎಂದು ಬಿಜೆಪಿ ಮತ್ತು ಪ್ರಧಾನಿ ಮೋದಿಯನ್ನು ಉದ್ದೇಶಿಸಿ ಹೇಳಿದ್ದಾರೆ.

“ಇನ್ನು ಮುಂದೆ ಪ್ರಜಾಪ್ರಭುತ್ವವಿಲ್ಲ. ಮತಗಳನ್ನು ಕದಿಯುವಾಗ ನಾವು ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದರೂ, ಅವರು ಈಗ ಅಭ್ಯರ್ಥಿಗಳನ್ನು ಕದಿಯಲು ಪ್ರಾರಂಭಿಸಿದ್ದಾರೆ. ನಾವು ಚುನಾವಣಾ ಆಯೋಗಕ್ಕೆ ಸವಾಲು ಹಾಕುತ್ತೇವೆ. ಅಧಿಕಾರಿಗಳ ಕರೆ ದಾಖಲೆಗಳನ್ನು ನಮಗೆ ತೋರಿಸಿ. ನಾವು ಅದನ್ನು ನೋಡಲು ಬಯಸುತ್ತೇವೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಗೆ ವಿರೋಧ: ಮತ್ತೆ ಒಂದಾದ ರಾಜ್, ಉದ್ಧವ್ ಠಾಕ್ರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ, “ಕೈಲಾಸ ಪರ್ವತವನ್ನು ಸೃಷ್ಟಿಸಿದ, ಗಂಗೆಯನ್ನು ಭೂಮಿಗೆ ತಂದ ಮತ್ತು ಸಮುದ್ರ ಮಂಥನವನ್ನು ನಡೆಸಿದ ಮೋದಿಯವರಿಗೂ ನಮಗೂ ಯಾವುದೇ ಹೋಲಿಕೆ ಇಲ್ಲ. ವರ್ಷಗಳ ಹಿಂದೆ ಮೋದಿ ಪೂಜೆ ಮಾಡಿದ ಸಮುದ್ರದಿಂದ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಪ್ರತಿಮೆ ಹೊರಹೊಮ್ಮಲು ನಾವು ಇನ್ನೂ ಕಾಯುತ್ತಿದ್ದೇವೆ” ಎಂದು ವ್ಯಂಗ್ಯವಾಡಿದರು.

“ಯಾರೂ ಶಾಶ್ವತವಾಗಿ ಅಧಿಕಾರದಲ್ಲಿ ಉಳಿಯುವುದಿಲ್ಲ. ಅಧಿಕಾರ ಹೋದಾಗ, ಏನಾಗುತ್ತದೆ ಎಂದು ಊಹಿಸಿ” ಎಂದು ಎಚ್ಚರಿಕೆ ನೀಡಿದರು.

ಕಳೆದ ಆರು ತಿಂಗಳುಗಳಲ್ಲಿ, ಉದ್ಧವ್ ಮತ್ತು ರಾಜ್, ಹಿರಿಯ ನಾಯಕರು ಮತ್ತು ಅವರ ಕುಟುಂಬಗಳೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದಾರೆ. ಸುಮಾರು ಎರಡು ದಶಕಗಳ ಅಂತರದ ನಂತರ ಪರಸ್ಪರ ಮಾತನಾಡಿಕೊಳ್ಳುತ್ತಿದ್ದಾರೆ. ರಾಜ್ ಬಾಂದ್ರಾದಲ್ಲಿರುವ ಉದ್ಧವ್ ಅವರ ನಿವಾಸವಾದ ಮಾತೋಶ್ರೀಗೆ ಹಲವಾರು ಬಾರಿ ಭೇಟಿ ನೀಡಿದ್ದಾರೆ. ಉದ್ಧವ್ ಅವರು, ರಾಜ್ ಅವರ ಶಿವಾಜಿ ಪಾರ್ಕ್ ಬಂಗಲೆಯ ಶಿವತೀರ್ಥದಲ್ಲಿರುವ ತಮ್ಮ ಕಿರಿಯ ಸೋದರಸಂಬಂಧಿಯನ್ನು ಭೇಟಿ ಮಾಡಿದ್ದಾರೆ.

ಇದೀಗ ರಾಜ್ ಶಿವಸೇನೆಯ ಭವನಕ್ಕೂ ಭೇಟಿ ನೀಡಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಶಿವಸೇನೆ (ಯುಬಿಟಿ) ರಾಜ್ಯಸಭಾ ಸಂಸದ ಸಂಜಯ್ ರಾವತ್, ಉದ್ಧವ್ ಆಪ್ತ ಸಹಾಯಕ ಮತ್ತು ರಾಜ್ ಸ್ನೇಹಿತ, ಸೋದರಸಂಬಂಧಿಗಳ ಜೊತೆಗಿದ್ದರು. ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಗೆ ಮುನ್ನ ಶಿವಸೇನೆ (ಯುಬಿಟಿ), ಎಂಎನ್‌ಎಸ್ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...