ಮಹಾರಾಜರನ್ನೇ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ: ಪ್ರತಾಪ್ ಸಿಂಹ

Date:

ಟಿಕೆಟ್‌ ಕೈತಪ್ಪುವುದು ಬಹುತೇಕ ಖಚಿತವೆಂದು ತಿಳಿದಿರುವ ಬಿಜೆಪಿ ಸಂಸದ ಪ್ರತಾಪ್‌ ಸಿಂಹ, ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ನಲ್ಲಿ ಗೋಳಾಡಿದ್ದಾರೆ. ಇದೀಗ, ಮೈಸೂರು ಕ್ಷೇತ್ರದಲ್ಲಿ ಅವರ ಬದಲು ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಬಿಜೆಪಿ ಟಿಕೆಟ್‌ ನೀಡಲಿದೆ ಎಂಬ ವರದಿಗಳೂ ಇವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, “ಮಹಾರಾಜರನ್ನೇ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ” ಎಂದು ವ್ಯಂಗ್ಯವಾಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, “ಯದುವೀರ್​ಗೆ ಟಿಕೆಟ್ ಕೊಡುವುದಾದರೆ ಸ್ವಾಗತ. ಅರಮನೆಯ ದರ್ಬಾರಿನಲ್ಲಿರುವ ಬದಲು ಸಾಮಾನ್ಯ ಪ್ರಜೆಗಳಂತೆ ಬದುಕಲು ಸ್ವಾಗತಿಸಬೇಕಲ್ಲವೇ” ಎಂದು ಕುಹಕವಾಡಿದ್ದಾರೆ.

“ರಾಜರೇ ಪ್ರಜೆಗಳ ಜೊತೆ ಇರಲು ಬರುವುದಾದರೆ ಸ್ವಾಗತ. ಅರಮನೆಯಲ್ಲಿ ಅರಾಮವಾಗಿದ್ದ ವ್ಯಕ್ತಿ ಹೋರಾಟಕ್ಕೆ ಬರುತ್ತಿದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೋರಾಡಲು ಬೀದಿಗೆ ಬಂದರೆ ಸಂತೋಷ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅರಮನೆ ಆಸ್ತಿ ವಿಚಾರದಲ್ಲಿ ರಾಜವಂಶಸ್ಥರು ಮತ್ತು ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿಯಾಗಿ ಆಯ್ಕೆಯಾಗಿ, ಆ ಆಸ್ತಿಗಳನ್ನು ಸರ್ಕಾರಕ್ಕೆ ಕೊಡಿಸುತ್ತಾರೆ” ಎಂದು ಕಾಲೆಳೆದಿದ್ದಾರೆ.

ಹಿಂದುತ್ವದ ಬಗ್ಗೆ ಮಾತನಾಡಿರುವ ಪ್ರತಾಪ್, “ಹಿಂದುತ್ವದ ವಿಚಾರದಲ್ಲಿ ನನ್ನಷ್ಟು ಬದ್ದತೆ ಇರುವ ಸಂಸದರು ಬೇರೆ ಯಾರಿದ್ದಾರೆ? ಸಂಘಟನೆ ಸಿದ್ದಾಂತಕ್ಕೆ ಬದ್ದನಾಗಿದ್ದೇನೆ. ನನಗೆ ಟಿಕೆಟ್ ಸಿಗುತ್ತದೆ. ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಅವರು ಭೇಟಿ ಮಾಡಲು ಕರೆದಿದ್ದಾರೆ. ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...