ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್ಚು ಆಯಸ್ಸಿಲ್ಲ: ಬಿಜೆಪಿ ಕಿಡಿ

Date:

ಜೂನ್‌ ಕೊನೆಯ ವಾರ ಬಂದರೂ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಿಲ್ಲ. ಮುಂಗಾರು ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಬಿತ್ತನೆ ಕುಂಠಿತವಾಗಿದೆ. ಈ ಹಿನ್ನೆಲೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, “ಮುಂಗಾರು ಕೈಕೊಟ್ಟು ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಶೇ.10ರಷ್ಟು ಮಾತ್ರ ಬಿತ್ತನೆಯಾಗಿದೆ ಎಂದು ಕೃಷಿ ಇಲಾಖೆಯ ಅಧಿಕೃತ ದಾಖಲೆಗಳೇ ತಿಳಿಸುತ್ತಿವೆ” ಎಂದಿದೆ.

“ಆದರೆ, ಎಟಿಎಂ ಸರ್ಕಾರ ಈಗಲೂ ಅಕ್ಕಿ ಕೊಡದಿರುವುದು ಹೇಗೆ, ಎಲ್ಲವೂಗಳ ಬೆಲೆಯನ್ನೂ ಜಾಸ್ತಿ ಮಾಡಿ ಕಮಿಷನ್‌ ಏಜೆಂಟ್‌ ಸುರ್ಜೇವಾಲಾರ ಜೇಬು ತುಂಬಿಸುವುದು ಹೇಗೆ ಎಂಬುದರಲ್ಲೇ ಕಾಲ ಕಳೆಯುತ್ತಿದೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ಬಗ್ಗೆ ಚಿಂತಿಸಲು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಯಾವೊಬ್ಬ ಶಾಸಕರಿಗೂ ಪುರುಸೊತ್ತೇ ಇಲ್ಲ. ಕಮಿಷನ್‌ ಡೀಲ್ ಫಿಕ್ಸಿಂಗ್‌ಗೆ ಉನ್ನತ ಅಧಿಕಾರಿಗಳ ಗುಪ್ತ ಸಭೆ ನಡೆಸುವ ಈ ಸರ್ಕಾರ ರೈತರ ಬಗ್ಗೆ, ಬಿತ್ತನೆ ಕುಂಠಿತವಾಗುತ್ತಿರುವುದರ ಬಗ್ಗೆ ಈವರೆಗೆ ಒಂದೇ ಒಂದು ಸಭೆ ನಡೆಸಿಲ್ಲ! ಈ ರೈತ ವಿರೋಧಿ ಸರ್ಕಾರಕ್ಕೆ ಹೆಚ್ಚು ಆಯಸ್ಸಿಲ್ಲ” ಎಂದು ಬಿಜೆಪಿ ಕಿಡಿಕಾರಿದೆ.

ಈ ಸುದ್ದಿ ಓದಿದ್ದೀರಾ? ದೀನದಲಿತರ, ಬಡವರ ಏಳಿಗೆಗಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಬೇಕು: ಸಿಎಂ ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...