ಕಾರು ಅಪಘಾತವನ್ನೇ ಮಾರಣಾಂತಿಕ ಹಲ್ಲೆ ಎಂದ ಬಿಜೆಪಿ ಮುಖಂಡ; ಮಣಿಕಂಠ ರಾಠೋಡ್ ಕಟ್ಟು ಕಥೆ ಬಯಲು

Date:

ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದನ್ನೇ ನೆಪವಾಗಿಟ್ಟುಕೊಂಡು ಸಚಿವ ಪ್ರಿಯಾಂಕ್‌ ಖರ್ಗೆ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಕಟ್ಟು ಕಥೆ ಕಟ್ಟಿರುವ ಸಂಗತಿ ಬಯಲಾಗಿದೆ.

ಈ ಮೂಲಕ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಉದ್ದೇಶಪೂರ್ವಕವಾಗಿ ಕಾರು ಅಪಘಾತವನ್ನೇ ಹಲ್ಲೆ ಮಾಡಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪಿಸಿದ್ದ ಮಣಿಕಂಠ ರಾಠೋಡ್ ಅಸಲಿಯತ್ತು ಬಯಲಾಗಿದೆ.

ಹಲ್ಲೆ ಪ್ರಕರಣ ಸಂಬಂಧ ಮಣಿಕಂಠ ರಾಠೋಡ್​ ಬೆಂಬಲಿಗನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಮಣಿಕಂಠನ ಆಟ ಬಯಲಾಗಿದೆ. ಈ ಕಾರು ಅಪಘಾತವನ್ನ ರಾಜಕೀಯವಾಗಿ ಬಳಸಿಕೊಳ್ಳಲು ಕಥೆ ಕಟ್ಟಿದ ಮಣಿಕಂಠ ರಾಠೋಡ್, ನವೆಂಬರ್ 18 ರಂದು ಮಧ್ಯರಾತ್ರಿ ಹಲ್ಲೆ ಮಾಡಿದ್ದಾರೆ ಎಂದು ಮಣಿಕಂಠ ಹೇಳಿದ್ದ. ಅದಲ್ಲದೇ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿ, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ ಮಣಿಕಂಠ ರಾಠೋಡ್ ಕಟ್ಟು ಕಥೆಯ ಇನ್ನೊಂದು ಮುಖ ಬಯಲಿಗೆ ಬಂದಿದೆ. ಇದರೊಂದಿಗೆ ಮಣಿಕಂಠ, ಪ್ರಿಯಾಂಕ್ ಖರ್ಗೆ ಮೇಲೆ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ಕಾರು ಅಪಘಾತ

ಕಲಬುರಗಿ ಎಸ್‌ಪಿ ಸ್ಪಷ್ಟನೆ

ಈ ಬಗ್ಗೆ ಸ್ಪಷ್ಟಪಡಿಸಿದ ಕಲಬುರಗಿ ಎಸ್‌ಪಿ ಅಡ್ಡೂರು ಶ್ರೀನಿವಾಸಲು, “ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ಶಹಬಾದ್ ತಾಲೂಕಿನ ಶಂಕರವಾಡಿ ಕ್ರಾಸ್ ಬಳಿ ಮಾರಣಾಂತಿಕ ಹಲ್ಲೆ ಆಗಿತ್ತು ದೂರು ನೀಡಿದ್ದರು‌. ಅವರ ದೂರಿನನ್ವಯ ಶಹಬಾದ್ ಠಾಣೆಯಲ್ಲಿ 307 ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಆದ್ರೆ ಸಾಕ್ಷಿಗಳ ವಿಚಾರಣೆ ಬಳಿಕ ಅದು ಕೊಲೆಯತ್ನ ಅಲ್ಲ. ಬದಲಾಗಿ ಅಪಘಾತ ಆಗಿದೆ ಎನ್ನುವುದು ಗೊತ್ತಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...