ಸಿಎಂ ಬದಲಿಸುವ ಚಾಳಿ ಬಿಜೆಪಿಯದ್ದು: ಪ್ರತಾಪ್ ಸಿಂಹಗೆ ಸಚಿವ ಮಹದೇವಪ್ಪ ತಿರುಗೇಟು

Date:

  • ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಎಚ್ಸಿಎಂ
  • ಬಿಜೆಪಿಗೆ ಪೂರ್ಣಾವಧಿ ಸಿಎಂ ಎಂಬ ಪದ ಬಳಕೆಯ ನೈತಿಕತೆ ಇಲ್ಲ

ಅಧಿಕಾರಕ್ಕೆ ಬಂದರೆ ಪದೇ ಪದೆ ಮುಖ್ಯಮಂತ್ರಿಗಳನ್ನು ಬದಲಾಯಿಸುವ ಚಾಳಿ ಬಿಜೆಪಿ ಪಕ್ಷದ್ದು. ನಮ್ಮ ಪಕ್ಷದ್ದು ಆ ಜಾಯಮಾನವಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಹೇಳಿಕೊಂಡಿದ್ದಾರೆ.

ಟ್ವೀಟರ್ ನಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಹರಿಹಾಯ್ದ ಅವರು, ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಘೋಷಣೆ ಮಾಡಲಿ ಎಂದಿದ್ದ ಪ್ರತಾಪ್ ಸಿಂಹ ಹೇಳಿಕೆಗೆ ಎಚ್ ಸಿ ಮಹದೇವಪ್ಪ ತಿರುಗೇಟು ನೀಡಿದರು.

ಅಧಿಕಾರಕ್ಕೆ ಬಂತೆಂದರೆ ಇಬ್ಬರು, ಮೂವರು ಸಿಎಂಗಳನ್ನು ಬದಲಿಸುವ ಚಾಳಿ ಬಿಜೆಪಿಯದ್ದು. ಸಿಎಂ ಬದಲಿಸುವ ಕೆಟ್ಟ ಚಾಳಿ ಇರುವ ಬಿಜೆಪಿಗೆ ಪೂರ್ಣಾವಧಿ ಸಿಎಂ ಎನ್ನುವ ಪದ ಬಳಕೆಯ ನೈತಿಕತೆ ಇಲ್ಲ ಎಂದು ಮಹದೇವಪ್ಪ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬೊಮ್ಮಾಯಿ ಅವರ ಧಮ್ಮು, ತಾಕತ್ತಿಗೆ ರಾಜ್ಯದ ಜನ ಈಗಾಗಲೇ ಉತ್ತರಿಸಿದ್ದಾರೆ: ಡಿಕೆ ಶಿವಕುಮಾರ್‌ ತಿರುಗೇಟು

ಪ್ರತಾಪ್ ಸಿಂಹ ಅನಗತ್ಯವಾಗಿ ಕಾಂಗ್ರೆಸ್ ಪಕ್ಷದ ಬೆನ್ನು ಕೆರೆಯುತ್ತಿದ್ದಾರೆ. ನಮ್ಮ ಪಕ್ಷದ ಮೇಲಿನ ಪ್ರೀತಿ ಬದಿಗಿಟ್ಟು ಬಿಜೆಪಿ ಪಕ್ಷಕ್ಕೆ ನಿಷ್ಠೆ ತೋರಲಿ ಎಂದ ಅವರು, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಸಚಿವ ಸಂಪುಟ ರಚಿಸಿದೆ. ಆದರೆ ಸೋಲಿನಿಂದ ಕಂಗಾಲಾಗಿರುವ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇದು ಬಿಜೆಪಿಯ ದುರ್ಬಲತೆಯ ಸಂಕೇತ ಎಂದು ಲೇವಡಿ ಮಾಡಿದರು.

ಸಂಸದ ಪ್ರತಾಪ್ ಸಿಂಹ ಅಪ್ರಬುದ್ಧ ಮಾತುಗಳನ್ನಾಡುತ್ತಲೇ ಕಾಲ ಕಳೆಯುತ್ತಾರೆ. ಮೊದಲು ಅವರು ಕೆಲಸ ಮಾಡುವುದನ್ನು ರೂಢಿಸಿಕೊಳ್ಳಲಿ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...