ದೇಶ ಬದಲಾವಣೆ ಬಯಸುತ್ತಿದೆ; ಮೋದಿ ಗ್ಯಾರಂಟಿಗಳು 2004ರಂತೆಯೇ ಕಾಣುತ್ತಿವೆ: ಖರ್ಗೆ

Date:

ದೇಶವು ಬದಲಾವಣೆಯನ್ನು ಬಯಸುತ್ತಿದೆ. ಪ್ರಸ್ತುತ ಮೋದಿ ಸರ್ಕಾರ ಹೇಳುತ್ತಿರುವ ‘ಮೋ ಕಿ ಗ್ಯಾರಂಟಿ’ಯು 2004ರ ‘ಇಂಡಿಯಾ ಶೈನಿಂಗ್‌’ ಘೋಷಣೆಯಂತೆಯೇ ಇದೆ. ಫಲಿತಾಂಶವು 2004ರಂತೆಯೇ ಆಗಿರಲಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸಲು ಮಂಗಳವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಅವರು ಮಾತನಾಡಿದರು. “ಪಕ್ಷದ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾದ ಪ್ರತಿಯೊಂದು ವಿಷಯವನ್ನು ಪಕ್ಷದ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿ ಹಳ್ಳಿ, ಪಟ್ಟಣಗಳ ಪ್ರತಿ ಮನೆಗಳಿಗೆ ತಲುಪಿಸಬೇಕು” ಎಂದರು.

“ನಮ್ಮ ಪ್ರಣಾಳಿಕೆಯು ವಿವಿಧ ರಾಜ್ಯಗಳಲ್ಲಿ ವ್ಯಾಪಕ ಪ್ರಚಾರ ಪಡೆಯುತ್ತದೆ. ನಮ್ಮ ಭರವಸೆಗಳನ್ನು ದೇಶಾದ್ಯಂತದ ಪ್ರತಿ ಮನೆ ಹಾಗೂ ಜನರಿಗೆ ತಲುಪಿಸಬೇಕು. ಇದು ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಣಾಳಿಕೆಯಲ್ಲಿ ಏನೆಲ್ಲ ಭರವಸೆ ನೀಡಲಾಗುತ್ತದೆಯೇ, ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಆ ಎಲ್ಲ ಭರವಸೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಈ ಕಾರಣದಿಂದ 1926ರಿಂದಲೇ ಕಾಂಗ್ರೆಸ್ ಪ್ರಣಾಳಿಕೆಯನ್ನು ‘ವಿಶ್ವಾಸ ಮತ್ತು ಬದ್ಧತೆಯ ದಾಖಲೆ’ ಎಂದು ಪರಿಗಣಿಸಲಾಗಿದೆ” ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಶ್ಲಾಘಿಸಿದ ಖರ್ಗೆ, ಈ ಮೂಲಕ ಜನರ ನಿಜವಾದ ಸಮಸ್ಯೆಯತ್ತ ದೇಶದ ಗಮನವನ್ನು ಸೆಳೆಯಲು ಕಾಂಗ್ರೆಸ್‌ಗೆ ಸಾಧ್ಯವಾಗಿದೆ ಎಂದು ಹೇಳಿದರು.

“ಭಾರತ್ ಜೋಡೋ ಮತ್ತು ನ್ಯಾಯ್‌ ಯಾತ್ರೆಗಳು ಕೇವಲ ರಾಜಕೀಯ ಯಾತ್ರೆಗಳಾಗಿರಲಿಲ್ಲ. ಆದರೆ, ನಮ್ಮ ರಾಜಕೀಯ ಇತಿಹಾಸದಲ್ಲಿ ಅತಿದೊಡ್ಡ ಜನಸಂಪರ್ಕ ಆಂದೋಲನವಾಗಿ ಗುರುತಿಸಲ್ಪಡುತ್ತವೆ. ಈ ಎರಡೂ ಯಾತ್ರೆಗಳು ಜನರ ಸಮಸ್ಯೆಯನ್ನು ಅರಿಯುವಲ್ಲಿ ಯಶಸ್ವಿಯಾಗಿವೆ” ಎಂದರು ಹೇಳಿದರು.

ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಿ ಚಿದಂಬರಂ, ಅಂಬಿಕಾ ಸೋನಿ, ಪ್ರಿಯಾಂಕಾ ಗಾಂಧಿ ವಾದ್ರಾ, ಪಿ ಚಿದಂಬರಂ, ದಿಗ್ವಿಜಯ ಸಿಂಗ್, ಅಜಯ್ ಮಾಕನ್ ಮತ್ತು ಕುಮಾರಿ ಸೆಲ್ಜಾ ಸೇರಿದಂತೆ ಇತರ ಹಿರಿಯ ನಾಯಕರು ಇದ್ದರು.

ಪಕ್ಷವು ಐದು ‘ನ್ಯಾಯ್‌ ಗ್ಯಾರಂಟಿ’ – ‘ಭಾಗಿದರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು ‘ಯುವ’ ನ್ಯಾಯ’ ಗ್ಯಾರಂಟಿಗಳ ಮೂಲಕ 25 ಭರವಸೆಗಳನ್ನು ಈಗಾಗಲೇ ಘೋಷಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...