ಕೋವಿಡ್​ ಹಗರಣ | ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್​ ಹಗರಣಕ್ಕೆ ಸಂಬಂಧಪಟ್ಟಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗ ಹೇಳಿದೆ. ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಮಾಡಿದೆ.

2020ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೋನಾ ಸೋಂಕು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್​ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿತ್ತು. ಈಗ ಅಕ್ರಮದ ಸರಣಿ ಸಂಗತಿಗಳು ವರದಿಯಲ್ಲಿ ಒಂದೊಂದಾಗಿ ಬಯಲಾಗುತ್ತಿವೆ.

ಚೀನಾದ ಸಂಸ್ಥೆಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ನೇರವಾಗಿ ಖರೀದಿಸುವ ಕುರಿತು ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶಿಸಿದ್ದರು. ಎರಡು ಚೀನಾ ಸಂಸ್ಥೆಗಳಿಂದ ಪಿಪಿಇ ಕಿಟ್‌ಗಳನ್ನು ದುಬಾರಿ ದರದಲ್ಲಿ ಕೊಂಡುಕೊಳ್ಳಲಾಗಿದೆ ಎಂಬುದು ಬಯಲಾಗಿದೆ. ಯಡಿಯೂರಪ್ಪ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗದ ವರದಿಯಲ್ಲಿ ದಾಖಲೆ ಸಮೇತ ಶಿಫಾರಸು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...