ಕರಿಯ, ಕುಳ್ಳ ಎಂದು ಮಾತಾಡಿಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ: ಹೆಚ್‌ ಡಿ ಕುಮಾರಸ್ವಾಮಿ

Date:

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ತಮ್ಮನ್ನು ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಎಂದು ಕರೆದಿದ್ದ ಸಚಿವ ಜಮೀರ್‌ ಅಹಮದ್‌ ಅವರಿಗೆ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ತಿರುಗೇಟು ನೀಡದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಶುಕ್ರವಾರ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಚಾಮುಂಡಿ ತಾಯಿ ಮುಂದೆ ನಿಂತು ಹೇಳುತ್ತಿದ್ದೇನೆ. ನಾನು ಆತನಿಗೆ ಕುಳ್ಳ ಅಂದಿಲ್ಲ. ಒಂದು ದಿನ ಬಸವರಾಜ ಹೊರಟ್ಟಿ ಅವರು ನನ್ನನು ಕುಮಾರ ಎಂದಾಗ ಅವರನ್ನು ಹೊಡೆಯಲು ಹೋಗಿದ್ದ ಗಿರಾಕಿ ಇವರು” ಎಂದರು.

“ಕರಿಯ, ಕುಳ್ಳ ಎಂದು ಮಾತಾಡಿಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ. ಅವರ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಮೀರ್ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಇದು ನಾಗರಿಕ ಸರ್ಕಾರನಾ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಯಾವತ್ತೂ ಜಮೀರ್ ಅವರನ್ನು ಕುಳ್ಳ ಎಂದು ಕರೆದಿಲ್ಲ. ನಮ್ಮ ಸ್ನೇಹ ಇದ್ದದ್ದು ರಾಜಕೀಯವಾಗಿ ಅಷ್ಟೆ. ಈಗ ದುಡ್ಡಿನ ಮದದಿಂದ ಈ ರೀತಿ ಮಾತಾಡುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

ಸರ್ಕಾರ ಬೀಳಿಸಲು ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ₹ 50 ಕೋಟಿ ಆಫರ್ ಮಾಡಿದ್ದಾರೆ ಎಂಬ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಹೇಳಿಕೆ ಬಫೂನ್ ರೀತಿ ಇದೆ. 50 ಜನರಿಗೆ ₹ 50 ಕೋಟಿ ಆಫರ್ ಮಾಡಿದ್ದಾರೆಂದು ನಿಖರವಾಗಿ ಹೇಳುತ್ತಿದ್ದಾರೆ. ಈ ಸರ್ಕಾರ ಪ್ರತಿಯೊಂದಕ್ಕು ಎಸ್‌ಐಟಿ ತನಿಖೆ ಮಾಡಿಸುತ್ತಿದೆ. ಇದನ್ನೂ ಎಸ್‌ಐಟಿಗೆ ಕೊಟ್ಟು ತನಿಖೆ ಮಾಡಿಸಲಿ” ಎಂದು ಆಗ್ರಹಿಸಿದರು.

“ಚನ್ನಪಟ್ಟಣದಲ್ಲಿ ಜನತೆಯ ಆಶೀರ್ವಾದ ನಮಗೆ ಆಗಿದೆ. ಉತ್ತಮವಾದ ರೀತಿಯಲ್ಲಿ ಗೆಲ್ಲುತ್ತೇವೆ. ಏನೇನು ರಾಜಕೀಯ ನಡೆದಿದೆ ಎಂಬುದನ್ನು ಯೋಗೇಶ್ವರ್ ವಿಮರ್ಶೆ ಮಾಡಿದ್ದಾರೆ. ಜಮೀರ್ ಹೇಳಿಕೆಯಿಂದ ಏನೂ ವ್ಯತ್ಯಾಸ ಆಗಿಲ್ಲ. ನಾವು ಚನ್ನಪಟ್ಟಣದಲ್ಲಿ ಗೆಲ್ಲುತ್ತೇವೆ” ಎಂದರು.

“ಮುಖ್ಯಮಂತ್ರಿಗೆ ದೇವೇಗೌಡರು ಗರ್ವಭಂಗ ಮಾಡುತ್ತೇನೆ, ಸೊಕ್ಕು ಮುರಿಯುತ್ತೇನೆ ಎನ್ನುವುದು ಮಾನನಷ್ಟ ಹೇಳಿಕೆನಾ? ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...