ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ: ಬಿಜೆಪಿ ವಾಗ್ದಾಳಿ

Date:

“ರಾಜ್ಯದಲ್ಲಿ ಹಿಟ್ಲರ್‌ ಸರ್ಕಾರದ ಆಡಳಿತ ಸಂಪೂರ್ಣ ಹಳಿ ತಪ್ಪಿದ್ದು, ಅರಾಜಕತೆ ತಾಂಡವವಾಡುತ್ತಿದೆ” ಎಂದು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, “ಪೂರ್ವನಿಯೋಜನೆಯಿಂದ ದುರುದ್ದೇಶಪೂರ್ವಕವಾಗಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಕಾಂಗ್ರೆಸ್‌ ತನ್ನ ಗೂಂಡಾಗಳನ್ನು ಬಿಡುವುದಷ್ಟೇ ಅಲ್ಲದೆ ರಕ್ಷಣೆಯನ್ನೂ ಕೊಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ಕುತಂತ್ರವನ್ನು ಇದೇ ರೀತಿ ಮುಂದುವರೆಸಿದರೆ, ನಾವು ಎಲ್ಲ ರೀತಿಯಲ್ಲೂ ಹೋರಾಡಲು ಸಿದ್ಧರಿದ್ದೇವೆ” ಎಂದು ಎಚ್ಚರಿಕೆ ನೀಡಿದೆ.

BJP 02

“ಗ್ಯಾರಂಟಿಯಲ್ಲೂ ಮೋಸ ಮಾಡಿ, ರಾಜ್ಯದ ಬೊಕ್ಕಸವನ್ನೂ ಖಾಲಿ ಮಾಡಿ, ಹಿಂದೆಂದೂ ಮಾಡಿರದಷ್ಟು ಸಾಲ ಮಾಡಿದ ಸಿದ್ದರಾಮಯ್ಯ ಅವರು ತಮ್ಮ ಅಭಿವೃದ್ಧಿ ಶೂನ್ಯತೆಯನ್ನು ಮರೆಮಾಚಲು ಅರಾಜಕತೆ ಸೃಷ್ಟಿಗೆ ದಾರಿ ಮಾಡಿಕೊಟ್ಟಿದ್ದಾರೆ. ಸಂಬಂಧವಿಲ್ಲದ ಮಂತ್ರಿಗಳೆಲ್ಲ ಪೊಲೀಸ್‌ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿ ಅವರ ಆತ್ಮಸ್ಥೈರ್ಯವನ್ನು ಕುಂದಿಸಿದ್ದಾರೆ. ಎಟಿಎಂ ಸರ್ಕಾರದಿಂದಾಗಿ ರಾಜ್ಯಾದ್ಯಂತ ಹಿಂಸೆ ತಾಂಡವವಾಡುತ್ತಿದೆ” ಎಂದು ಬಿಜೆಪಿ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
BJP 8

“ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯ ಅಪ್ರಬು‌ದ್ಧ ಜಾರಿಯಿಂದಾಗಿ ನೂರೆಂಟು ಸಮಸ್ಯೆಗಳು ಎದುರಾಗಿವೆ. ಎಟಿಎಂ ಸರ್ಕಾರದಿಂದ ಸೂಕ್ತ ಅನುದಾನ ಸಿಗದೆ ರಾಜ್ಯದ ನಾಲ್ಕು ನಿಗಮಗಳು ಆರ್ಥಿಕ ಚೈತನ್ಯ ಕಳೆದುಕೊಂಡು ದಿವಾಳಿಯತ್ತ ಮುಖಮಾಡಿವೆ” ಎಂದು ದೂರಿದೆ.

“ಇದರ ನಡುವೆ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕರು, ನಿರ್ವಾಹಕರು ಒಪ್ಪೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಪರ್ಯಾಯ ಮಾರ್ಗ ಕಂಡುಕೊಡದೆ. ಸಿದ್ದರಾಮಯ್ಯ ಅವರ ಸರ್ಕಾರ ಇವರನ್ನೆಲ್ಲ ಬೀದಿಗೆ ತಳ್ಳಿ ಈಗ ಸಂಭ್ರಮಿಸುತ್ತಿದೆ” ಎಂದು ಬಿಜೆಪಿ ಕಿಡಿಕಾರಿದೆ.

BJP 01

ಈ ಸುದ್ದಿ ಓದಿದ್ದೀರಾ? ನಮ್ಮ ಪ್ರಧಾನಿಗಳನ್ನು ಕೇಳುವ ಧೈರ್ಯ ನಮಗಿದೆ; 15 ಲಕ್ಷ ರೂ.ಗೆ ದಾಖಲೆ ಕೊಡಿ: ಯತ್ನಾಳ್‌ ಸವಾಲು

“ಕಳಪೆ ಆಹಾರ ಕೊಡುವುದೂ ಒಂದೇ, ಕೈಯಾರೆ ವಿಷ ಉಣಿಸುವುದೂ ಒಂದೇ. ಅದರಲ್ಲೂ ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಟಿಕತೆ ಹೆಸರಲ್ಲಿ ವಿಷ ಪೂರಣವು ನಾಗರಿಕ ಸಮಾಜವೇ ತಲೆತಗ್ಗಿಸುವ ಕೆಲಸ. ಆದರೆ, ಸಾಮಾಜಿಕ ಪ್ರಜ್ಞೆಯನ್ನೇ ಮರೆತ ಸಿದ್ದರಾಮಯ್ಯ ನೇತೃತ್ವದ ಅಮಾನುಷ ಸರ್ಕಾರಕ್ಕೆ ವಾರದ ಕಲೆಕ್ಷನ್ ಸಂದಾಯವಾದರೆ ಆಯಿತು” ಎಂದು ಟೀಕಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...