ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್‌ರ ಚಿಕಿತ್ಸಾ ವೆಚ್ಚ ಭರಿಸಲು ಸರ್ಕಾರ ಒಪ್ಪಿಗೆ

Date:

ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ರಾಜ್ಯ ಸರ್ಕಾರ ಒಪ್ಪಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮಾಹಿತಿ ಹಂಚಿಕೊಂಡಿರುವ ಸಚಿವರು, “ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸಂಗೀತ ಕ್ಷೇತ್ರದ ದಿಗ್ಗಜರಾದ ಪಂಡಿತ್ ರಾಜೀವ್ ತಾರಾನಾಥ್ ಅವರ ಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಮೇ 26 ರಂದು ಪಂಡಿತ್ ರಾಜೀವ್ ತಾರಾನಾಥ್ ಅವರನ್ನು ಭೇಟಿಯಾಗಿ, ಅವರ ಆರೋಗ್ಯ ಚೇತರಿಕೆಗೆ ಶುಭ ಹಾರೈಸಿ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸುವುದಾಗಿ ಭರವಸೆ ನೀಡಿದ್ದೆ. ನಂತರ ಮುಖ್ಯಮಂತ್ರಿಗಳಿಗೆ ಈ ಕುರಿತು ಮಾಹಿತಿ ನೀಡಿದ ಬಳಿಕ ತಾರಾನಾಥ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲು ಸಿಎಂ ಒಪ್ಪಿಗೆ ಸೂಚಿಸಿದ್ದಾರೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...