ಹಿರಿಯ ಪತ್ರಕರ್ತ ಶಶಿಧರ ಭಟ್‌ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

Date:

ಹಿರಿಯ ಪತ್ರಕರ್ತ ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಸಿಎಂ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದಾರೆ.

ಶಶಿಧರ ಭಟ್ ಅವರು ಆಸ್ಪತ್ರೆಯ ಬೆಡ್‌ ಮೇಲಿಂದನೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಒಂದನ್ನು ಹಾಕಿ, “ನಾನು ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿದ್ದೇನೆ. ಅನಾರೋಗ್ಯ ಸಮಸ್ಯೆ ಈಗ ನನ್ನ ಕಣ್ಣು ತೆರೆಸಿದೆ. ಆಸ್ಪತ್ರೆಯ ಜಗತ್ತು ಎಷ್ಟು ಕ್ರೂರವಾದದ್ದು ಎಂಬುದು ಅರಿವಿಗೆ ಬಂದಿದೆ. ಹಾಗೆಯೇ ನಮ್ಮ ಸುತ್ತ ಇರುವವರು ಈ ಘಳಿಗೆಯಲ್ಲಿ ಯಾರು ನನ್ನವರಲ್ಲ ಎಂಬುದು ಅರ್ಥವಾಗುತ್ತಿದೆ. ಪ್ರೀತಿ, ನಂಬಿಕೆ ಸಂಬಂಧ ಎಲ್ಲ ಸುಳ್ಳು ಎಂಬುದು ಅರ್ಥವಾಗಿದೆ, ಧನ್ಯವಾದಗಳು ”ಎಂದು ನೋವಿನಿಂದ ಹೇಳಿದ್ದರು.

ಶಶಿಧರ್ ಭಟ್ ಅವರ ಈ ಭಾವನಾತ್ಮಕ ಪೋಸ್ಟ್‌ಗೆ ಸಾವಿರಾರು ಅಭಿಮಾನಿಗಳು ಕಾಮೆಂಟ್ ಮೂಲಕ ಭಟ್ಟರ ಬೆನ್ನಿಗೆ ನಿಂತಿದ್ದರು. ನಿಮ್ಮ ಜೊತೆ ನಾವೂ ಇದ್ದೇವೆ ಎಂಬ ಧೈರ್ಯ ತುಂಬುವ ಕೆಲಸ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿ ತಿಳಿದ ಸಿಎಂ ಸಿದ್ದರಾಮಯ್ಯ ಕೂಡ ಶಶಿಧರ್ ಭಟ್ ಅವರೊಂದಿಗೆ ಸೋಮವಾರ ಬೆಳಿಗ್ಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಶಶಿಧರ್‌ ಭಟ್‌ಗೆ ತಿಳಿಸಿದ ಮುಖ್ಯಮಂತ್ರಿಗಳು, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...