ಕಾಂಗ್ರೆಸ್‌ ಸೇರುವ ವದಂತಿ ನಡುವೆಯೇ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಜೆಡಿಎಸ್‌ ಶಾಸಕ

Date:

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಮಾಡಿಕೊಂಡ ಮೈತ್ರಿಯನ್ನು ಬಹಿರಂಗವಾಗಿಯೇ ವಿರೋಧಿಸಿದ್ದ ಯಾದಗಿರಿಯ ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ವದಂತಿ ಹರಡಿದೆ. ಈ ವದಂತಿಯ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಯಾದಗಿರಿಯಲ್ಲಿ ಇಂದು ತನ್ನ ಕಚೇರಿಯಲ್ಲಿ ಭೇಟಿಯಾಗಿದ್ದ ಮಾಧ್ಯಮಗಳೊಂದಿಗೆ ಮಾತನಾಡಿರುವ ಜೆಡಿಎಸ್ ಶಾಸಕ, “ತಂದೆ ನಾಗನಗೌಡನವರು ನಿಧನರಾದಾಗ ಅಂತ್ಯಕ್ರಿಯೆಯಲ್ಲಿ ಕುಮಾರಸ್ವಾಮಿ ಭಾಗಿಯಾಗಿಲ್ಲ. ಕಾಲಾಯ ತಸ್ಮೈ ನಮಃ” ಎಂದು ಹೇಳುವ ಮೂಲಕ ತಮ್ಮ ಅಸಮಾಧಾನ ಮುಂದುವರಿಸಿದ್ದಾರೆ.

ಕಳೆದ ಜ.28ರಂದು ಶಾಸಕ ಶರಣಗೌಡ ಕಂದಕೂರು ಅವರ ತಂದೆ, ಮಾಜಿ ಶಾಸಕ ನಾಗನಗೌಡ ಕಂದಕೂರು ಅವರು ನಿಧನರಾಗಿದ್ದರು. ನಾಗನಗೌಡ ಕಂದಕೂರು ಅವರ ಅಂತ್ಯಕ್ರಿಯೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭಾಗಿಯಾಗಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವಿಚಾರವಾಗಿ ಮೌನ ಮುರಿದಿರುವ ಶಾಸಕ ಶರಣಗೌಡ ಕಂದಕೂರು, “ನಮ್ಮ ತಂದೆಯವರು ನಿಧನರಾಗಿ 20 ದಿನಗಳು ಆದಮೇಲೆ ಕುಮಾರಸ್ವಾಮಿ ಅವರು ಪೋನ್ ಮಾಡಿದ್ರು. ಬಂದು ನನ್ನನ್ನು ಭೇಟಿಯಾಗಿ ಬ್ರದರ್ ಅಂತ ತಿಳಿಸಿದ್ದಾರೆ. ಬರ್ತೀನಿ ಸರ್ ಅಂತಾ ಹೇಳಿದ್ದೀನಿ” ಎನ್ನುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

“ನಮ್ಮ ತಂದೆಯವರ ಅಂತಿಮ ಯಾತ್ರೆಯಲ್ಲಿ ಕುಮಾರಸ್ವಾಮಿ ಅವರು ಯಾಕೆ ಭಾಗವಹಿಸಿಲ್ಲ ಎನ್ನುವುದನ್ನು ನೀವು ಅವರನ್ನೇ ಕೇಳಬೇಕು. ನಮ್ಮ ತಂದೆ ನಾಗನಗೌಡ ಹಾಗೂ ನಮ್ಮ ಇಡೀ ಕುಟುಂಬ ಜೆಡಿಎಸ್ ಪಕ್ಷದ ಸಂಘಟನೆಗಾಗಿ ಜೀವನವನ್ನೇ ಸವೆಸಿದ್ದೇವೆ. ಕಾಲಾಯ ತಸ್ಮೈ ನಮಃ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ. ಇದಕ್ಕೆ ಖಂಡಿತವಾಗಿ ಕಾಲ ಉತ್ತರ ನೀಡುತ್ತದೆ. ಆ ಸಮಯ ಬಂದಾಗ ನಾನು ಉತ್ತರ ಕೊಟ್ಟೇ ಕೊಡುತ್ತೇನೆ” ಎಂದು ಮಾಜಿ ಸಿಎಂಗೆ ಮಾರ್ಮಿಕವಾಗಿ ಟಾಂಗ್‌ ಕೊಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಆಂಧ್ರ ಪ್ರದೇಶ | ಟಿಡಿಪಿ-ಜನಸೇನಾ ಮೈತ್ರಿ: 24 ಕ್ಷೇತ್ರ ಪವನ್‌ ಕಲ್ಯಾಣ್‌ಗೆ ಬಿಟ್ಟುಕೊಟ್ಟ ಚಂದ್ರಬಾಬು ನಾಯ್ಡು

ಕಾಂಗ್ರೆಸ್‌ ಪಕ್ಷ ಸೇರುವ ವಿಚಾರದ ಬಗ್ಗೆ ಕೇಳಿದಾಗ, “ಎಲ್ಲದಕ್ಕೂ ಸಮಯ ಇದೆ. ನಾನು ಎಲ್ಲಿ ಇರ್ತೀನಿ, ಎಲ್ಲಿ ಹೋಗ್ತೀನಿ ಎಂಬುದು ಸದ್ಯ ಪ್ರಸ್ತುತವಲ್ಲ. ಯಾವುದೇ ತೀರ್ಮಾನ ಮಾಡಬೇಕಾದರೂ ನನ್ನನ್ನು ಬೆಳೆಸಿರುವಂತಹ ಕುಟುಂಬ, ಹಿತೈಷಿಗಳ ಅಭಿಪ್ರಾಯ ಪಡೆದೇ ತೀರ್ಮಾನ ಮಾಡುತ್ತೇನೆ” ಎಂದು ಹೇಳುವ ಮೂಲಕ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...